ಬಳ್ಳಾರಿ | ಕಂದಾಯ ಇಲಾಖೆ ಅಧಿಕಾರಿಗಳಿಂದಲೇ ಭೂಗಳ್ಳರಿಗೆ ಬೆಂಬಲ; ಆರೋಪ

Date:

ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರ ಮಾಜಿ ಅಧ್ಯಕ್ಷ ನಾರಾ ಪ್ರತಾಪ್ ರೆಡ್ಡಿ ಎಂಬಾತ ಬಂಡಿಹಟ್ಟಿ ಪ್ರದೇಶದಲ್ಲಿ 44 ಕುಟುಂಬಗಳ ಸುಮಾರು 135 ಎಕರೆ ಭೂಮಿಯನ್ನು ಕಬಳಿಕೆ ಮಾಡಿಕೊಂಡಿದ್ದಾರೆ., ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಎಂದು ಭೂಮಿ -ವಸತಿ ಹೋರಾಟ ಸಮಿತಿಯ ಕೇಂದ್ರ ಸಮಿತಿ ಸದಸ್ಯ ಕರಿಯಪ್ಪ ಗುಡಿಮನೆ ಒತ್ತಾಯಿಸಿದ್ದಾರೆ.

ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಗ್ರಾಮಾಂತರ ಶಾಸಕ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ನಾಗೇಂದ್ರ ಮತ್ತು ನಗರ ಶಾಸಕ ನಾರಾ ಭರತ್‌ ರೆಡ್ಡಿ ಅವರು ಭೂಗಳ್ಳ ನಾರಾ ಪ್ರತಾಪ್ ರೆಡ್ಡಿ ಬೆನ್ನಿಗೆ ನಿಲ್ಲದೆ,  44 ಕುಟುಂಬಗಳ ಬೆನ್ನಿಗೆ ನಿಂತು ಭೂ ವಂಚಿತರಿಗೆ ನ್ಯಾಯ ಒದಗಿಸಬೇಕು” ಎಂದು ಶಾಸಕರಿಗೆ ಮನವಿ ಮಾಡಿದ್ದಾರೆ.

“ಪ್ರತಾಪರೆಡ್ಡಿ ಪ್ರಭಾವದಿಂದ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಈ ಜಮೀನಿನ ಸರ್ವೆ ಮಾಡುತ್ತಿಲ್ಲ.  ಬಂಡಿಹಟ್ಟಿಯ ನಮ್ಮ ಜಮೀನಿನ ಸರ್ವೆ ದಾಖಲೆಗಳನ್ನು ನಾವು ಕೇಳಿದರೆ ತಹಶೀಲ್ದಾರ್‌ ನೀಡುವುದಿಲ್ಲ. ಅದೇ ದಾಖಲೆಗಳನ್ನು ಪ್ರತಾಪ್ ರೆಡ್ಡಿ ಕೇಳಿದರೆ ಕೊಡುತ್ತಾರೆ. ಈ ಕುರಿತು ಜಿಲ್ಲಾಧಿಕಾರಿ ಗಮನಕ್ಕೆ ತಂದರೂ ನಿರ್ಲಕ್ಷ್ಯ ವಹಿಸುತ್ತಿದ್ದಾರೆ” ಎಂದು ಕರಿಯಪ್ಪ ಗುಡಿಮನೆ ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಭೂಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಮೊರೆ ಹೋಗಿದ್ದೇವೆ. ನ್ಯಾಯಾಲಯ ಎರಡು ತಿಂಗಳಲ್ಲಿ ಬಗೆಹರಿಸಿ ಕೊಡುವುದಾಗಿ ಹೇಳಿದ್ದು, ಆರು ತಿಂಗಳಾದರೂ ಬಗೆಹರಿಸಿಲ್ಲ” ಎಂದು ಅವಲತ್ತುಕೊಂಡಿದ್ದಾರೆ.

“ತಾಲೂಕಿನ ಚಾನಾಳ್ ಮತ್ತು ಹಂಪಾದೇವನಹಳ್ಳಿ ಗ್ರಾಮ ಸೇರಿದಂತೆ ಹಲವು ಗ್ರಾಮಗಳಲ್ಲೂ ಇದೇ ರೀತಿ ಆಗಿದ್ದು, ಸರ್ಕಾರ ನೀಡಿರುವ ಜಮೀನು ಉಳ್ಳವರ ಪಾಲಾಗಿದೆ. ಆದರೂ ಅಧಿಕಾರಿಗಳು ಸಮಸ್ಯೆ ಪರಿಹಾರಕ್ಕೆ ಮುಂದಾಗುತ್ತಿಲ್ಲ” ಎಂದು ಆರೋಪಿಸಿದರು.

“ಜಿಲ್ಲಾಡಳಿತ ಆದಷ್ಟು ಬೇಗ ಟ್ರಿಬುನಲ್ ಮತ್ತು ಭೂ ಮಂಜೂರಾತಿ ಕುರಿತು ಕ್ರಮ ಕೈಗೊಂಡು ಆದಷ್ಟು ಬೇಗ ಸ್ಥಳೀಯರಿಗೆ ಭೂಮಿ ಮತ್ತು ವಸತಿ ನೀಡಬೇಕು. ಜೊತೆಗೆ ಚಾನಳ್ ಗ್ರಾಮದಲ್ಲಿನ ಜಮೀನಿನ ಟ್ರಿಬುನಲ್ ಕೇಸ್‌ಗಳನ್ನು ಶರವೇಗದಲ್ಲಿ ಇತ್ಯರ್ಥ ಮಾಡಬೇಕು” ಎಂದು ಒತ್ತಾಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಬರದ ಭೀತಿ ಇದ್ದರೂ ರೈತರ ಸಭೆ ಕರೆಯದ ಜಿಲ್ಲಾಡಳಿತ; ಉಮೇಶ ಮುದ್ನಾಳ ಆರೋಪ

“ಕಂಪ್ಲಿ ತಾಲೂಕು ಹಂಪ ದೇವನಹಳ್ಳಿ ಗ್ರಾಮದಲ್ಲಿ 125 ಎಕರೆ ಭೂ ಪ್ರದೇಶವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ತೀವ್ರ ಹೋರಾಟ ಮಾಡುತ್ತೇವೆ” ಎಂದು ಚ್ಚರಿಕೆ ನೀಡಿದರು.

ವಸಂತರಾಜ್, ರಾಮಕೃಷ್ಣ, ರಾಜಶೇಖರ ರೆಡ್ಡಿ, ಮೋಹನ ಬಂಡಿಹಟ್ಟಿ, ರಾಮಕೃಷ್ಣ, ವಸಂತರಾಜ್ ಕಹಳೆ‌, ಎಸ್ ಕೆ ರಿಯಾಜ್ ಸೇರಿದಂತೆ ಇತರರು ಇದ್ದರು.

WhatsApp Image 2025 07 12 at 17.38.34 e1752322718567
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...