ಬಳ್ಳಾರಿ | ಜಾತಿಗಣತಿಯಲ್ಲಿ ಪರಿಶಿಷ್ಟ ಜಾತಿಯೆಂದು ಸ್ಪಷ್ಟವಾಗಿ ದಾಖಲಿಸಬೇಕು: ಶಿವಕುಮಾರ್ ಮನವಿ

Date:

ರಾಜ್ಯದಲ್ಲಿ ಪರಿಶಿಷ್ಟ ಜಾತಿಗಣತಿ ವೇಳೆ ಸಿಂದೋಳು, ಬೇಡ, ಬುಡ್ಗ ಜಂಗಮ, ದಕ್ಕಲಿಗ, ಹಂದಿ ಜೋಗಿ, ಸಿಳ್ಳೇಕ್ಯಾತ, ದೊಂಬರು, ಚನ್ನದಾಸರು, ಸುಡುಗಾಡು ಸಿದ್ಧರು ಗಣತಿ ಕಾರ್ಯದ ವೇಳೆ ಅರ್ಜಿಗಳನ್ನು ಭರ್ತಿ ಮಾಡುವಾಗ ಸ್ಪಷ್ಟವಾಗಿ ʼಪರಿಶಿಷ್ಟ ಜಾತಿʼ ಎಂಬುದನ್ನು ಕಡ್ಡಾಯವಾಗಿ ಬರೆಸಬೇಕು’ ಎಂದು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ, ಅಲೆಮಾರಿ ಸಂಘಟನೆಗಳ ಮಹಾ ಒಕ್ಕೂಟದ ಜಿಲ್ಲಾಧ್ಯಕ್ಷ ವೈ ಶಿವಕುಮಾರ್ ತಿಳಿಸಿದರು.

ಬಳ್ಳಾರಿ ನಗರದ ಸ್ಥಳೀಯ ಖಾಸಗಿ ಹೋಟೆಲ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, “ಈ ಕುರಿತು ನಾವೀಗಾಗಲೇ ಸಮುದಾಯದಲ್ಲಿ ಜಾಗೃತಿ ಮೂಡಿಸುತ್ತಿದ್ದು ಕರ್ನಾಟಕ ರಾಜ್ಯ ಎಸ್‌ಸಿ, ಎಸ್‌ಟಿ, ಅಲೆಮಾರಿ ಬುಡಕಟ್ಟು ಮಹಾಸಭಾ ಬಳ್ಳಾರಿ ಜಿಲ್ಲಾ ಘಟಕ, ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡ ಅಲೆಮಾರಿ ಸಂಘಟನೆಗಳ ಮಹಾ ಒಕ್ಕೂಟಗಳು ಸಲಹೆ ನೀಡಿದಂತೆ ಸಮುದಾಯದ ಜನರು ಜಾತಿ ಗಣತಿಯಲ್ಲಿ ಪರಿಶಿಷ್ಟ ಜಾತಿ ಎಂದು ನಮೂದಿಸಬೇಕು” ಎಂದು ಹೇಳಿದರು.

“ಸರ್ವೋಚ್ಛ ನ್ಯಾಯಾಲಯವು ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ನೀಡಲು ರಾಜ್ಯ ಸರ್ಕಾರಗಳಿಗೆ ಅಧಿಕಾರ ಇದೆಯೆಂದು ತೀರ್ಪು ನೀಡಿದೆ. ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿ ಇರುವ ಜಾತಿಗಳನ್ನು ಉಪ ವರ್ಗಿಕರಣ ಮಾಡಿ ಒಳಮಿಸಲಾತಿಯನ್ನು ನೀಡಬಹುದು. ನಿವೃತ್ತ ನ್ಯಾಯಮೂರ್ತಿ ಹೆಚ್ ಎನ್ ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ವರದಿ ನೀಡಲು ಏಕಸದಸ್ಯ ಆಯೋಗ ರಚನೆ ಮಾಡಿದೆ. ಆಯೋಗದ ಶಿಫಾರಸಿನ ಅನ್ವಯ ಒಳಮಿಸಲಾತಿ ಕಲ್ಪಿಸುವ ಸಂಬಂಧ ಸಮೀಕ್ಷೆ ನಡೆಸಲು ಸರ್ಕಾರ ತೀರ್ಮಾನ ಮಾಡಿದೆ. ಈ ಸಮೀಕ್ಷೆ ಮೇ 5ರಿಂದ ಆರಂಭವಾಗಲಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಳ್ಳಾರಿ ಜಿಲ್ಲೆಯ ಅಲೆಮಾರಿ ಪರಿಶಿಷ್ಟ ಜಾತಿಯ ಪಟ್ಟಿಗೆ ಸೇರಿರುವ ಸಿಂದೋಳು, ಬೇಡ, ಬುಡ್ಗ, ದಕ್ಕಲಿಗ, ಹಂದುಜೋಗಿ, ಸಿಳ್ಳೆಕ್ಯಾತ, ದೊಂಬರು, ಚನ್ನದಾಸರು, ಸುಡುಗಾಡುಸಿದ್ದ ಜನರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ರಾಜಕೀಯ, ಔದ್ಯೋಗಿಕ ಪ್ರಾತಿನಿಧ್ಯತೆ ಸೇರಿದಂತೆ ಇನ್ನಿತರ ಸ್ಥಿತಿಗತಿಗಳ ಬಗ್ಗೆ ಸಮೀಕ್ಷೆ ಮಾಡುವುದು ಆಯೋಗದ ಉದ್ದೇಶವಾಗಿದೆ. ದತ್ತಾಂಶ ಸಂಗ್ರಹ ಮಾಡುವುದರಿಂದ ಅಲೆಮಾರಿ ಪರಿಶಿಷ್ಟ ಜಾತಿಗೆ ಸೇರಿರುವ ಈ ಸಮುದಾಯಗಳ ಜನಸಂಖ್ಯೆಗಳ ಎಷ್ಟಿದೆ ಎಂಬ ಮಾಹಿತಿ ಸರ್ಕಾರದ ಗಮನಕ್ಕೆ ಹೋಗುತ್ತದೆ” ಎಂದರು.

“ಕರ್ನಾಟಕ ರಾಜ್ಯ ಎಸ್‌ಸಿ/ಎಸ್‌ಟಿ, ಅಲೆಮಾರಿ ಬುಡಕಟ್ಟು ಮಹಾಸಭಾ ಬಳ್ಳಾರಿ ಜಿಲ್ಲಾ ಘಟಕ ಈ ಸಂಘದಿಂದ ಬಳ್ಳಾರಿ ಜಿಲ್ಲಾ ಸಮುದಾಯಗಳ ಜಾತಿಗೆ ಒಳಮೀಸಲಾತಿ ನೀಡುವ ಬಗ್ಗೆ ಮನವಿ ಸಲ್ಲಿಸಲಾಗಿದೆ. ನಿವೃತ್ತ ನ್ಯಾಯಮೂರ್ತಿ ಹೆಚ್ ಎನ್ ನಾಗಮೋಹನ್ ದಾಸ್ ಇವರನ್ನು ಭೇಟಿ ನೀಡಿ ಈಗಾಗಲೇ ಮನವಿ ಪತ್ರವನ್ನು ಸಲ್ಲಿಸಲಾಗಿದೆ” ಎಂದು ವಿವರಗಳನ್ನು ನೀಡಿದರು.

“ರಾಜ್ಯದಲ್ಲಿ ಪರಿಶಿಷ್ಟ ಜಾತಿಗೆ ಜಾತಿಗಣತಿ ಕಾರ್ಯಕ್ಕೆ ಸರ್ಕಾರ ದಿಟ್ಟ ಕ್ರಮಕೈಗೊಂಡಿದೆ. ಈ ಅವಧಿಯಲ್ಲಿ ಈಗಾಗಲೇ ನಾವು ಸೂಚಿಸಿದ ಜಿಲ್ಲೆಯ ಸಮುದಾಯದ ಜನರು ಅತ್ಯಂತ ಜವಾಬ್ದಾರಿಯುತವಾಗಿ ವರ್ತಿಸಬೇಕು. ಜಾತಿಗಣತಿ ಕಾರ್ಯ ಪೂರ್ಣಗೊಳ್ಳುವವರೆಗೂ ಜಾತ್ರೆಗಳು, ಉತ್ಸವ, ಹಬ್ಬ, ಜಯಂತಿಗಳ ಆಚರಣೆಯಲ್ಲಿ ತೊಡಗಬಾರದು. ಜಾತಿಗಣತಿ ಕಾರ್ಯ ಪೂರ್ಣಗೊಂಡು ಒಳಮೀಸಲು ಜಾರಿಯಾಗುವವರೆಗೂ ನಾವೆಲ್ಲ ಮನೆಯಲ್ಲಿದ್ದು, ಗಣತಿದಾರರು ಬಂದಾಗ ಅವರೊಂದಿಗೆ ಸೇರಿ ಬಡಾವಣೆ ಸುತ್ತಬೇಕು. ಸಮುದಾಯದವರು ಪರಿಶಿಷ್ಟ ಜಾತಿಗೆ ಸೇರಿದ ಎಲ್ಲರೂ ಪರಿಶಿಷ್ಟ ಜಾತಿಯೆಂದು ಕಡ್ಡಾಯವಾಗಿ ಬರೆಸಬೇಕು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ವಿಜಯನಗರ | ಮೇ 20ರಂದು ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ: ಶಾಸಕ ನಾರಾ ಭರತ್ ರೆಡ್ಡಿ

“ಜಿಲ್ಲೆ, ತಾಲೂಕು, ಪಟ್ಟಣಗಳಲ್ಲಿ ಗ್ರಾಮ, ಪಟ್ಟಣ, ಹೋಬಳಿ, ವಾರ್ಡ್‌ಗಳಲ್ಲಿ, ಕಾಲೋನಿಯಗಳಲ್ಲಿ, ನಗರಗಳಲ್ಲಿ ಜಿಲ್ಲಾ ಮಟ್ಟದ ಅಲೆಮಾರಿ ಸಮುದಾಯದ ಜನರಲ್ಲಿ ಜಾಗೃತಿ ಮೂಡಿಸಬೇಕು. ಯಾವುದೇ ಕುಟುಂಬಗಳು ಬಿಟ್ಟು ಹೋಗದಂತೆ ಸಮೀಕ್ಷೆ ಮಾಡುವುದು ಮುಖ್ಯವಾಗಿದೆ. ನಮ್ಮ ಸಂಘದ ರಾಜ್ಯ ಪದಾಧಿಕಾರಿಗಳು ಜಿಲ್ಲಾ, ತಾಲೂಕು, ಅಧ್ಯಕ್ಷರು, ಉಪಾಧ್ಯಕ್ಷರು ಕಾರ್ಯದರ್ಶಿಗಳು, ಮುಖಂಡರು, ಖಜಾಂಚಿ, ಸಮಾಜದ ಕುಲಬಾಂಧವರು ಈ ದಿಸೆಯಲ್ಲಿ ಕಾರ್ಯಪ್ರವೃತ್ತರಾಗಬೇಕು” ಎಂದು ಹೇಳಿದರು.

ಸಂಘಟನೆಗಳ ಪದಾಧಿಕಾರಿಗಳಾದ ಡಿ ರಂಗಯ್ಯ, ಸುಬ್ಬಣ್ಣ, ರಾಮಾಂಜಿನಿ, ಹುಚ್ಚಪ್ಪ, ಹನುಮಂತಪ್ಪ, ಗಾದಿಲಿಂಗ, ಹುಲುಗನ್ನ, ಅಜಪ್ಪ, ಕೆ ಚನ್ನಬಸಪ್ಪ, ವೆಂಕಟೇಶ್, ಶೈಲಾ ಸೀತಾರಾಮ್, ಕಂಡಪ್ಪ ಸೇರಿದಂತೆ ವಿವಿಧ ಎಸ್‌ಸಿ ಹಾಗೂ ಅಲೆಮಾರಿ ಸಮುದಾಗಳ ಮುಖಂಡರು ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...