ಬಳ್ಳಾರಿ | ರೇಷನ್ ಕಾರ್ಡ್ ತಿದ್ದುಪಡಿಗೆ ಸರ್ವರ್ ಡೌನ್‌; ಇನ್ನಷ್ಟು ಕಾಲಾವಕಾಶಕ್ಕೆ ಬೇಡಿಕೆ

Date:

ಬಳ್ಳಾರಿ ಜಿಲ್ಲೆಯ ಬಳ್ಳಾರಿ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ಸೆ.18, ಬುಧವಾರದಂದು ರೇಷನ್ ಕಾರ್ಡ್ ತಿದ್ದುಪಡಿಗೆ ಮತ್ತು ಸೇರ್ಪಡೆಗೆ ದಿನ ಪೂರ್ತಿ ಸರ್ವರ್ ಡೌನ್ ಸಮಸ್ಯೆ ಎದುರಾಗಿದ್ದರಿಂದ ಜನ ಸರತಿ ಸಾಲಿನಲ್ಲಿ ಕಾದು ಕಾದು ಹೈರಾಣಾಗಿದ್ದಾರೆ.

ಜಿಲ್ಲೆಯಲ್ಲಿನ ಗ್ರಾಮ ಒನ್ ಕೇಂದ್ರದಲ್ಲಿ ಹಾಗೂ ನಗರದ ಮಹಾನಗರ ಪಾಲಿಕೆ ಆವರಣದಲ್ಲಿರುವ ಬಳ್ಳಾರಿ ಒನ್ ಕೇಂದ್ರದಲ್ಲಿ ಆಧಾರ್ ಕಾರ್ಡ್ ತಿದ್ದುಪಡಿ, ರೇಷನ್ ಕಾರ್ಡ್ ತಿದ್ದುಪಡಿ, ಗೃಹ ಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಿಕೊಳ್ಳಲು ನೂರಾರು ಜನ ಮುಗಿಬಿದ್ದರು.

ಗೃಹ ಲಕ್ಷ್ಮೀ ಯೋಜನೆಗೆ  ಸೇರಿದಂತೆ ಮುಂತಾದ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ರೇಷನ್ ಕಾರ್ಡ್ ಕಡ್ಡಾಯವಾಗಿದೆ. ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಿದವರ ರೇಷನ್ ಕಾರ್ಡ್‌ನಲ್ಲಿನ ತಪ್ಪು ಮಾಹಿತಿಯಿಂದ 2000 ರೂಪಾಯಿ ಹಣ ಜಮಾ ಆಗಿಲ್ಲ ಎಂದು ಹೇಳಲಾಗುತ್ತಿದೆ. ಆದ್ದರಿಂದ ರೇಷನ್ ಕಾರ್ಡ್ ತಿದ್ದುಪಡಿಗೆ  ಜನರು ಪರದಾಡುವಂತಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಕ್ಟೋಬರ್‌ 16, 17, 18ಮೂರು ದಿನಗಳ ಕಾಲ ರೇಷನ್ ಕಾರ್ಡ್ ತಿದ್ದುಪಡಿಗೆ ಮತ್ತು ಸೇರ್ಪಡೆಗೆ ಅವಕಾಶ ನೀಡಲಾಗಿತ್ತು. ಆದರೆ, ಮೂರು ದಿನಗಳ ಕಾಲ ಸರ್ವರ್ ಡೌನ್ ಸಮಸ್ಯೆ ಎದುರಾದ ಹಿನ್ನೆಲೆಯಲ್ಲಿ, ಬುದವಾರದಂದು ರೇಷನ್ ಕಾರ್ಡ್ ತಿದ್ದುಪಡಿಗೆ ಕೊನೆಯ ದಿನವಾದ ಹಿನ್ನೆಲೆ ನೂರಾರು ಜನ ಬಳ್ಳಾರಿ ಒನ್ ಕೇಂದ್ರಕ್ಕೆ ಮುಗಿಬಿದ್ದರು.

ಬಳ್ಳಾರಿ ಒನ್ ಕೇಂದ್ರದಲ್ಲಿ ಟೋಕನ್ ವ್ಯವಸ್ಥೆ ಮಾಡಲಾಗಿದೆ. ಬೆಳಿಗ್ಗೆಯಿಂದ ಸರ್ವರ್ ಡೌನ್ ಆಗಿದೆ ಅದ್ದರಿಂದ ರೇಷನ್ ಕಾರ್ಡ್ ತಿದ್ದುಪಡಿ, ಸೇರ್ಪಡೆ, ಗೃಹ ಲಕ್ಷ್ಮಿ ನೋಂದಣಿ ಮಾಡುವುದಕ್ಕೆ ಸಾಧ್ಯವಾಗುತ್ತಿಲ್ಲ ಎಂದು ಬಳ್ಳಾರಿ ಒನ್ ಕೇಂದ್ರದ ಸಿಬ್ಬಂದಿ ಹೇಳುತ್ತಿದ್ದಾರೆ.

ಕೋಳೂರು ಗ್ರಾಮದಲ್ಲಿನ ಗ್ರಾಮ ಒನ್ ನಾಗರಿಕರ ಸೇವಾ ಕೇಂದ್ರದಲ್ಲಿ ರೇಷನ್ ಕಾರ್ಡ್ ತಿದ್ದುಪಡಿಗೆ ಮತ್ತು ಸೇರ್ಪಡೆಗೆ ಬೆಳಿಗ್ಗೆಯಿಂದ ಸಂಜೆಯವರೆಗೆ ಸರ್ವರ್ ಸಮಸ್ಯೆ ಎದುರಾಗಿದೆ. ತಿದ್ದುಪಡಿಗೆ ಇನ್ನಷ್ಟು ಕಾಲಾವಕಾಶ ಕೊಡಬೇಕಿದೆ ಎಂದು ಆಪರೇಟರ್‌ ಮಹೇಶ್ ಕೇಳಿಕೊಂಡಿದ್ದಾರೆ.

ಇನ್ನು ಸಮಸ್ಯೆ ಬಗ್ಗೆ ಪ್ರತಿಕ್ರಿಯಿಸಿರುವ, ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕ ಶರಣ ಬಸಯ್ಯ, ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ರೇಷನ್ ಕಾರ್ಡ್ ತಿದ್ದುಪಡಿಗೆ ಮತ್ತು ಸೇರ್ಪಡೆಗೆ ಸರ್ವರ್ ಡೌನ್ ಸಮಸ್ಯೆ ಎದುರಾಗಿರುವುದರಿಂದ ಅಕ್ಟೋಬರ್‌ 19ರವರೆಗೂ ರೇಷನ್ ಕಾರ್ಡ್ ತಿದ್ದುಪಡಿಗೆ ಮತ್ತು ಸೇರ್ಪಡೆಗೆ ಅವಕಾಶ ಕಲ್ಪಿಸುವ ಸಾಧ್ಯತೆ ಇದೆ ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...