ಬಳ್ಳಾರಿ | ರೈತ ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್‌ಗೆ ಸಂಯುಕ್ತ ಹೋರಾಟ ಕರ್ನಾಟಕ ಬೆಂಬಲ

Date:

ಕನಿಷ್ಠ ಬೆಂಬಲ ಬೆಲೆ ಕಾನೂನಿಗಾಗಿ ಆಗ್ರಹಿಸಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಹಿರಿಯ ರೈತ ನಾಯಕ ಜಗಜಿತ್ ಸಿಂಗ್ ದಲ್ಲೆವಾಲ ಅವರ ಹೋರಾಟವನ್ನು ಬೆಂಬಲಿಸಿ ಸಂಯುಕ್ತ ಹೋರಾಟ ಕರ್ನಾಟಕ ಸಮಿತಿಯಿಂದ ಬಳ್ಳಾರಿ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿ ಮತ್ತು ಪ್ರಧಾನಮಂತ್ರಿಗೆ ಮನವಿ ಸಲ್ಲಿಸಿತು.

ಸಂಗನಕಲ್ಲು ಕೃಷ್ಣಪ್ಪ ಮಾತನಾಡಿ, “ಐತಿಹಾಸಿಕ ದೆಹಲಿ ರೈತ ಹೋರಾಟದ ವಾಪಸಾತಿ ಸಂದರ್ಭದಲ್ಲಿ ಪ್ರಧಾನಿಗಳು ನೀಡಿದ್ದ ಲಿಖಿತ ಭರವಸೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಮಾಡುತ್ತಿರುವ ಹಿರಿಯ ರೈತ ನಾಯಕ ಜಗಜಿತ್ ಸಿಂಗ್ ದಲ್ಲೆವಾಲರವರ ಪ್ರಾಣ ಉಳಿಸಲು, ರೈತರ ಬೇಡಿಕೆ ಈಡೇರಿಸಲು ಕೂಡಲೇ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸುವಂತೆ ರಾಜ್ಯಾದ್ಯಂತ ಪ್ರತಿಭಟನೆ/ಧರಣಿ ಸತ್ಯಾಗ್ರಹ ನಡೆಸಲಾಗುತ್ತಿದೆ” ಎಂದರು.

“ರೈತರ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿಗೆ ಕಾನೂನು ಜಾರಿ, ಸಾಲ ಮನ್ನಾ ಮುಂತಾದ ಆಗ್ರಹಗಳನ್ನು ಈಡೇರಿಸುವಂತೆ ಒತ್ತಾಯಿಸಿ ನವೆಂಬರ್ 26ರಿಂದ ಪಂಜಾಬ್-ಹರಿಯಾಣ ಗಡಿಯಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿ ಇಂದಿಗೆ 51ನೇ ದಿನಕ್ಕೆ ಕಾಲಿಟ್ಟಿದ್ದು, ದೇಹ ನಿತ್ರಾಣಗೊಂಡು, ಮಾಂಸಖಂಡಗಳು ತಮ್ಮ ತೂಕವನ್ನು ಕಳೆದುಕೊಂಡಿವೆ. ರಕ್ತದೊತ್ತಡ ಕೂಡ ಅಪಾಯಕಾರಿ ಮಟ್ಟಕ್ಕೆ ಕುಸಿದಿದ್ದು, ಯಾವಾಗ ಬೇಕಾದರೂ ಪ್ರಾಣ ಹೋಗುವಂತಹ ಸನ್ನಿವೇಶ ಉಂಟಾಗಿದೆ. ಆದರೆ, ಕೇಂದ್ರ ಸರ್ಕಾರ ರೈತರ ಸಾವನ್ನು ನಿರೀಕ್ಷಿಸುತ್ತಿದೆ. ಅವರ ಗೋರಿ ಮೇಲೆ‌ ಬಂಡವಾಳಶಾಹಿಗಳ ಮಹಲ್ ಕಟ್ಟಲು ಹವಣಿಸುತ್ತಿದೆ” ಎಂದು ಆಕ್ರೋಶ‌ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾದವರೆಡ್ಡಿ ಮಾತನಾಡಿ, “ದೆಹಲಿ ರೈತ ಹೋರಾಟದ ಸಂದರ್ಭದಲ್ಲಿ, ರೈತರ ಜೀವನ ಹಾಗೂ ಕೃಷಿ ರಕ್ಷಣೆಗೆ ಮಾರಕವಾಗಿದ್ದ ಕೃಷಿ ಕಾಯ್ದೆಗಳ ರದ್ದತಿ, ಕನಿಷ್ಟ ಬೆಂಬಲ ಬೆಲೆ ಖಾತರಿಗೆ ಕಾನೂನು ಸೇರಿದಂತೆ ಹಲವು ಹಕ್ಕೊತ್ತಾಯಗಳನ್ನು ಮುಂದಿಟ್ಟಿತ್ತು. ನೂರಾರು ದಿನಗಳ ಅನಿರ್ದಿಷ್ಟ ಹೋರಾಟದ ನಂತರ ರೈತ ಹೋರಾಟಕ್ಕೆ ಮಣಿದ ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿತು. ಉಳಿದ ಹಕ್ಕೊತ್ತಾಯಗಳನ್ನು ಈಡೇರಿಸಲು ಲಿಖಿತ ಭರವಸೆಯನ್ನೂ ನೀಡಿತ್ತು. ಆದರೆ, ಭರವಸೆಗೆ ವಿರುದ್ಧವಾಗಿ ನಡೆದುಕೊಂಡಿತು. ರೈತ ವಿರೋಧಿ ನೀತಿ ಅನುಸರಿಸಿದ್ದ ಎನ್‌ಡಿಎ ಸರ್ಕಾರ ಬಹುಮತ ಕಳೆದುಕೊಂಡಿದ್ದರೂ ಮತ್ತೆ ಆದೇ ರೈತ ವಿರೋಧಿ ನೀತಿ ಅನುಸರಿಸುತ್ತಿದೆ. ಇನ್ನೆಂತಹ ಲಜ್ಜೆಗೇಡಿ ಸರ್ಕಾರ ಇರಬಹುದು” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ?: ಬಳ್ಳಾರಿ | ಗುಬ್ಬಿಯಲ್ಲಿ ದಲಿತ ಯುವಕರ ಮೇಲೆ ಹಲ್ಲೆ; ರೈಲ್ವೆ ಪೊಲೀಸ್‌ ಚಂದ್ರಶೇಖರ್‌ ಬಂಧನಕ್ಕೆ ರೈತ ಸಂಘ ಒತ್ತಾಯ

ಶಿವಶಂಕರ ಮಾತನಾಡಿ, “ಮೂರು ವರ್ಷಗಳ ನಂತರವೂ ರೈತರ ಹಕ್ಕೊತ್ತಾಯಗಳನ್ನು ನಿರ್ಲಕ್ಷ್ಯ ಮಾಡಿದ್ದು ಮಾತ್ರವಲ್ಲದೆ ವರ್ಷಕ್ಕಿಂತ ಹೆಚ್ಚು ಕಾಲ ಲಕ್ಷಾಂತರ ರೈತರು ಹೋರಾಟ ನಡೆಸಿ ರದ್ದುಪಡಿಸಿಕೊಂಡ ಕೃಷಿ ಕಾಯ್ದೆಗಳನ್ನು ಹಿಂಬಾಗಿಲ ಮೂಲಕ ಜಾರಿ ಮಾಡಲಾಗುತ್ತಿದೆ. ಕೃಷಿ ಉತ್ಪನ್ನ ಮಾರುಕಟ್ಟೆ ನಿಯಂತ್ರಣವನ್ನು ರದ್ದುಪಡಿಸುವ ಹಾಗೂ ಕೃಷಿ ಮಾರುಕಟ್ಟೆ ರಾಷ್ಟ್ರೀಯ ಚೌಕಟ್ಟು ಧೋರಣೆಯನ್ನು ಜಾರಿ ಮಾಡುವ ಪ್ರಯತ್ನ ನಡೆಸುತ್ತಿದೆ” ಎಂದು ಕೇಂದ್ರ ಸರ್ಕಾರದ‌ ಕೆಟ್ಟ ಧೋರಣೆಯನ್ನು ಖಂಡಿಸಿದರು.

ಎಐಕೆಕೆಎಂಎಸ್ ಜಿಲ್ಲಾ ಅಧ್ಯಕ್ಷ ಗೋವಿಂದ ಮಾತನಾಡಿ, “ದೇಶಾದ್ಯಂತ ಎಲ್ಲ ರೈತರ ಪಂಪಸೆಟ್‌ಗಳಿಗೆ ಮೀಟರ್ ಅಳವಡಿಸಿ ವಿದ್ಯುತ್ ಪಾವತಿ ಮಾಡುವಂತೆ ರೈತರನ್ನು ಬಲವಂತಗೊಳಿಸಲಾಯಿತು. ಯಾವುದೇ ರೈತರ ಬೆಳೆಗಳನ್ನು ಸಕಾಲದಲ್ಲಿ ಬೆಂಬಲ ಬೆಲೆಯಲ್ಲಿ ಖರೀದಿಸುತ್ತಿಲ್ಲ. ಇಂತಹ ಹಲವು ರೈತ ವಿರೋಧಿ ಧೋರಣೆಗಳು ಹಾಗೂ ರೈತರ ಆಗ್ರಹಗಳನ್ನು ನಿರ್ಲಕ್ಷ್ಯ ಮಾಡಿದ್ದರ ಫಲವಾಗಿ ರೈತ ನಾಯಕರ ಪ್ರಾಣ ಹೋಗುವಂತಹ ಪರಿಸ್ಥಿತಿ ಉಂಟಾಗಿದೆ. ಹಾಗಾಗಿ ರಾಷ್ಟ್ರಪತಿ ಹಾಗೂ ಪ್ರಧಾನ ಮಂತ್ರಿಗಳು ಕೂಡಲೇ ಮಧ್ಯಪ್ರವೇಶ ಮಾಡಬೇಕು” ಎಂದು ಒತ್ತಾಯಿಸಿದರು.

“ರಾಜ್ಯ ಸರ್ಕಾರವೂ ಕೂಡ ರೈತ ನಾಯಕರ ಪ್ರಾಣ ಉಳಿಸಲು ಕೂಡಲೇ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪ್ರಧಾನ ಮಂತ್ರಿಗಳಿಗೆ ಪತ್ರ ಬರೆಯಬೇಕು” ಎಂದು ಆಗ್ರಹಿಸಿದರು.

ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ, ಕರ್ನಾಟಕ ಜನಶಕ್ತಿ, ಗ್ರಾಮೀಣ ಕೂಲಿ ಕಾರ್ಮಿಕರ ಸಂಘ ಮತ್ತು ಎಐಕೆಕೆಎಂಎಸ್‌ನ ಹೋರಾಟಗಾರರು ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...