ಬಳ್ಳಾರಿ | ಜರ್ಮನಿಯ ಲಿಂಡೌ ನೊಬೆಲ್ ಸಭೆಗೆ ಜಿಲ್ಲೆಯ ಇಬ್ಬರು ವಿದ್ಯಾರ್ಥಿನಿಯರು ಆಯ್ಕೆ

Date:

ಜರ್ಮನಿಯ ಲಿಂಡೌನಲ್ಲಿ ಜೂನ್ 29ರಿಂದ ಜುಲೈ 4ರವರೆಗೆ ಜರುಗಲಿರುವ ಪ್ರತಿಷ್ಠಿತ ಅಂತಾರಾಷ್ಟ್ರೀಯ ಲಿಂಡೌ ನೊಬೆಲ್ ಪುರಸ್ಕೃತರ ಸಭೆಗೆ ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ರಸಾಯನಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿಗಳಾದ ಗೌತಮಿ ಪಾಟೀಲ್ ಮತ್ತು ಡಾ.ನಸೀಮ್ ಕೌಸರ್ ಆಯ್ಕೆಯಾಗಿದ್ದಾರೆ.

ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯದ ಡಿಎಸ್‌ಟಿ ದೇಶವ್ಯಾಪಿ ಆಯ್ಕೆ ಮಾಡಿರುವ ಒಟ್ಟು 29 ಯುವ ವಿಜ್ಞಾನಿಗಳ ಪೈಕಿ ಬಳ್ಳಾರಿಯ ಇಬ್ಬರು ವಿದ್ಯಾರ್ಥಿಗಳು ಸ್ಥಾನ ಪಡೆದಿರುವುದು ವಿಶೇಷ ಹಾಗೂ ರಾಜ್ಯದ ಹೆಮ್ಮೆ.

ಪ್ರತಿವರ್ಷ ಜರುಗುವ ಲಿಂಡೌ ಜಾಗತಿಕ ಸಭೆಯಲ್ಲಿ ವಿಶ್ವದ ಆಯ್ದ 600 ಯುವ ವಿಜ್ಞಾನಿಗಳನ್ನು ಆಹ್ವಾನಿಸಿ ನೊಬೆಲ್ ಪ್ರಶಸ್ತಿ ಪುರಸ್ಕೃತ ದಿಗ್ಗಜರೊಂದಿಗೆ ಚರ್ಚಾಕೂಟ, ದುಂಡು ಮೇಜಿನ ಪರಿಷತ್ತುಗಳನ್ನು ನಡೆಸುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

74ನೇ ಆವೃತ್ತಿಯ ಸಮ್ಮೇಳನವು ಈ ಬಾರಿ ರಸಾಯನಶಾಸ್ತ್ರ ವಿಷಯಕ್ಕೆ ಮೀಸಲಿಟ್ಟಿದ್ದು, ಆಯ್ಕೆಗೊಂಡಿರುವ ವಿದ್ಯಾರ್ಥಿಗಳ ಪ್ರವಾಸ ಹಾಗೂ ಇನ್ನಿತರ ಖರ್ಚು, ವೆಚ್ಚಗಳನ್ನು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ (ಡಿಎಸ್‌ಟಿ) ನಿಭಾಯಿಸಲಿದೆ.
ಈ ಸಂಶೋಧನಾರ್ಥಿಗಳು ವಿವಿಯ ರಸಾಯನಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಪ್ರೊ.ಕೆ.ಎಸ್ ಲೋಕೇಶ್ ಇವರ ಮಾರ್ಗದರ್ಶನದಲ್ಲಿ ಪಿಹೆಚ್‌ಡಿ ಮಾಡುತ್ತಿದ್ದಾರೆ.

ಇದನ್ನೂ ಓದಿ: ಬಳ್ಳಾರಿ | ಸರ್ಕಾರಿ ಆದರ್ಶ ವಿದ್ಯಾಲಯದ ಪ್ರವೇಶ ಪತ್ರ ಪ್ರಕಟ

ಲಿಂಡೌ ನೊಬೆಲ್ ಸಭೆಗೆ ಆಯ್ಕೆಯಾದ ವಿದ್ಯಾರ್ಥಿನಿಯರಿಗೆ ವಿವಿ ಕುಲಪತಿ ಪ್ರೊ.ಎಂ ಮುನಿರಾಜು, ಕುಲಸಚಿವ ಎಸ್.ಎನ್ ರುದ್ರೇಶ್ ಹಾಗೂ ಮೌಲ್ಯಮಾಪನ ಕುಲಸಚಿವ ಪ್ರೊ.ಎನ್.ಎಂ. ಸಾಲಿ ಹಾಗೂ ವಿಭಾಗದ ಸಿಬ್ಬಂದಿ ಶುಭಾಶಯ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...