ಬಳ್ಳಾರಿ | ಸಾಹಿತಿ ಶಿವಲಿಂಗಪ್ಪ ಹಂದಿಹಾಳುಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕಾರ

Date:

ಕೇಂದ್ರ ಸಾಹಿತ್ಯ ಅಕಾಡೆಮಿ ವತಿಯಿಂದ ನೀಡುವ 2025ನೇ ಸಾಲಿನ ಬಾಲ ಪುರಸ್ಕಾರ ಪ್ರಶಸ್ತಿ ಬಳ್ಳಾರಿ ತಾಲೂಕಿನ ಹಂದಿಹಾಳ ಗ್ರಾಮದ ಶಿಕ್ಷಕ, ಮಕ್ಕಳ ಸಾಹಿತಿ ಡಾ. ಹಂದಿಹಾಳು ಶಿವಲಿಂಗಪ್ಪರಿಗೆ ಲಭಿಸಿದೆ.

ಹಂದಿಹಾಳು ಗ್ರಾಮದ ಶಿಕ್ಷಕ ಡಾ. ಶಿವಲಿಂಗಪ್ಪ ಅವರ ಮಕ್ಕಳ ಕಥಾ ಸಂಕಲನ “ನೋಟ್ ಬುಕ್” ಮಕ್ಕಳ ಸಾಹಿತ್ಯ ಕೃತಿಗೆ ಈ ಬಾಲ ಸಾಹಿತ್ಯ ಪುರಸ್ಕಾರ ದೊರೆತಿದೆ.

‘ನೋಟ್‌ಬುಕ್‌’ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಬಾಲ ಸಾಹಿತ್ಯ ಪುರಸ್ಕಾರ, ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕ ಸೊಗಸು ಪ್ರಶಸ್ತಿ, ಕರ್ನಾಟಕ ಬಾಲವಿಕಾಸ ಅಕಾಡೆಮಿ ಪ್ರಶಸ್ತಿ, ವೀಚಿ ಪ್ರಶಸ್ತಿ ಲಭಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೃತಿಗಳು: ನಾನು ಮತ್ತು ಕನ್ನಡಕ (ಕವನ ಸಂಕಲನ), ಎಳೆಬಿಸಿಲು (ಮಕ್ಕಳ ಸಾಹಿತ್ಯ ಸಂಪದ), ಶಾವೋಲಿನ್  (ಇಂಗ್ಲಿಷ್ ಮೂಲ ಮಕ್ಕಳ ಕತೆಗಳು), ಆನಂದಾವಲೋಕನ (ಭಾರತೀಯ ಮಕ್ಕಳ ಸಾಹಿತ್ಯ ಕುರಿತು), ಬಳ್ಳಾರಿಯ ಬೆಡಗು (ಪ್ರಾತಿನಿಧಿಕ ಕತಾ ಸಂಕಲನ), ದಿ ಯಂಗ್ ಸೈಂಟಿಸ್ಟ್, (ಮಕ್ಕಳ ಕಾದಂಬರಿ) ಕೃತಿಗಳನ್ನು ರಚಿಸಿದ್ದಾರೆ.

ಪ್ರಶಸ್ತಿ-ಪುರಸ್ಕಾರಗಳು: ಅವರ  ಶಾವೋಲಿನ್ ಕೃತಿಗೆ ಜಿ.ಬಿ.ಹೊಂಬಳ ಮಕ್ಕಳ ಸಾಹಿತ್ಯ ಪ್ರಶಸ್ತಿ, ‘ನಾನು ಮತ್ತು ಕನ್ನಡಕ’ ಕೃತಿಗೆ ಕನ್ನಡ ಪುಸ್ತಕ ಪ್ರಾಧಿಕಾರದಿಂದ ಧನ ಸಹಾಯ (2010), ಕರವೇ ನಲ್ನುಡಿ ಕತಾ ಪ್ರಶಸ್ತಿ (2012), ಆಜೂರು ಪ್ರತಿಷ್ಠಾನ ಪ್ರಶಸ್ತಿ (2017), ಅಷ್ಠ ದಿಗ್ಗಜ ಪ್ರಶಸ್ತಿ (2017), ಹೈದರಾಬಾದಿನ ಗುತ್ತಿ ನಾರಾಯಣರೆಡ್ಡಿ ತೆಲುಗು ಪೀಠಂ ವತಿಯಿಂದ, ಮಕ್ಕಳ ಸಾಹಿತ್ಯ ಕ್ಷೇತ್ರದ ಸೇವೆಗಾಗಿ ‘ರಾಜ್ಯ ಮಟ್ಟದ ಸಾಹಿತ್ಯ ಸಿರಿ ಪ್ರಶಸ್ತಿ’ 2020, ಶ್ರೀ ಕೃಷ್ಣ ದೇವರಾಯ ವಂಶಸ್ಥರಿಂದ ಕೊಡಲ್ಪಟ್ಟ ರಾಷ್ಟ್ರೀಯ ಪ್ರಶಸ್ತಿ ಲಭಿಸಿವೆ.

ಇದನ್ನೂ ಓದಿ: ಬಳ್ಳಾರಿ | ಜೂ.25ರೊಳಗೆ ತುಂಗಭದ್ರಾ ಜಲಾಶಯದ ಮೂರೂ ಕಾಲುವೆಗಳಿಗೆ ನೀರು ಬಿಡಿ: ಕರೂರ್ ಮಾಧವ ರೆಡ್ಡಿ

“ಶಿವಲಿಂಗಪ್ಪ ಹಳ್ಳಿಯಲ್ಲಿ ಬೆಳೆದವರು. ಅವರು ಬೋಧಿಸುವ ಶಾಲೆಯೂ ಹಳ್ಳಿಯದೇ ಆಗಿದೆ. ಹಳ್ಳಿಯ ಮಕ್ಕಳ ಕಷ್ಟ, ಸಂತಸ, ಕನಸುಗಳೊಂದಿಗೆ ಗ್ರಾಮೀಣ ಮಕ್ಕಳ ವಾಸ್ತವ ಚಿತ್ರಣವನ್ನು ಹಿತವಾದ ಕಲ್ಪನಾ ಲೋಕದೊಂದಿಗೆ ಕಥೆಗಳಲ್ಲಿ ವಿಸ್ತರಿಸಿದ್ದಾರೆ. ಮಕ್ಕಳನ್ನು ಹಾಗೂ ತನ್ನ ವೃತ್ತಿಯನ್ನು ಪ್ರೀತಿಸುವ ಶಿಕ್ಷಕ ಮಕ್ಕಳ ಒಳಿತಿಗಾಗಿ ಏನೇನೋ ಪ್ರಯತ್ನದಲ್ಲಿ ತೊಡಗುತ್ತಾರೆ. ಮಕ್ಕಳ ಸಾಹಿತ್ಯವನ್ನು ಸದಾ ತಮ್ಮ ತುಡಿತವಾಗಿಸಿಕೊಂಡವರು. ಬಹಳಷ್ಟು ಸಾರಿ ಅದರ ಕುರಿತಾಗಿಯೇ ಮಾತಿಗಿಳಿಯುತ್ತಾರೆ. ಅವರು ‘ಕನ್ನಡ ಮಕ್ಕಳ ಸಾಹಿತ್ಯ: ಫ್ಯಾಂಟಸಿಯ ಸ್ವರೂಪ’ ವಿಷಯದ ಕುರಿತಾಗಿ ಆಳವಾದ ಅಧ್ಯಯನದೊಂದಿಗೆ ಪಿಎಚ್‍ಡಿ ಪದವಿ ಪಡೆದಿದ್ದಾರೆ” ಎಂದು ಸಾಹಿತಿ ವಿರೇಂದ್ರ ರಾವಿಹಾಳ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...