ಬ್ಯಾನರ್ ಅಳವಡಿಕೆ ಘರ್ಷಣೆ: ಶಾಸಕ ಜನಾರ್ದನ ರೆಡ್ಡಿ ಸೇರಿ 11 ಮಂದಿ ವಿರುದ್ಧ ಪ್ರಕರಣ ದಾಖಲು

Date:

ಬಳ್ಳಾರಿ ನಗರದ ಅವ್ವಂಬಾವಿಯಲ್ಲಿನ ಶಾಸಕ ಜನಾರ್ದನ ರೆಡ್ಡಿ ಮನೆ ಬಳಿ ಗುರುವಾರ ಸಂಜೆ ಬ್ಯಾನರ್ ಅಳವಡಿಕೆಗೆ ನಡೆದ ಮೊದಲ ಘರ್ಷಣೆಗೆ ಸಂಬಂಧಿಸಿದಂತೆ ಜನಾರ್ದನ ರೆಡ್ಡಿ ಸೇರಿದಂತೆ 11 ಮಂದಿ ವಿರುದ್ಧ ಪ್ರಕರಣ ದಾಖಲಾಗಿದ್ದು, ರೆಡ್ಡಿಯನ್ನು ಎ1 ಆರೋಪಿ ಎಂದು ಹೆಸರಿಸಲಾಗಿದೆ.

ನಗರ ಶಾಸಕ ನಾರಾ ಭರತ್ ರೆಡ್ಡಿ ಆಪ್ತ ಚಾನಾಳ್ ಶೇಖರ್ ನೀಡಿದ ದೂರು ಆಧರಿಸಿ ಜನವರಿ 1ರ ಮಧ್ಯರಾತ್ರಿ 1ರ ಸುಮಾರಿನಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

ಪ್ರಕರಣದಲ್ಲಿ ಸೋಮಶೇಖರ ರೆಡ್ಡಿ ಎ2, ಶ್ರೀರಾಮುಲು ಎ3, ಪಾಲಿಕೆ ವಿರೋಧ ಪಕ್ಷದ ನಾಯಕ‌ ಮೋತ್ಕರ್ ಶ್ರೀನಿವಾಸ ಅವರನ್ನು ಎ4 ಮಾಡಲಾಗಿದೆ. ಒಟ್ಟು 11 ಮಂದಿಯನ್ನು ಎಫ್ಐಆರ್‌ನಲ್ಲಿ ಹೆಸರಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಳ್ಳಾರಿಯ ವಾಲ್ಮೀಕಿ ವೃತ್ತದಲ್ಲಿನ ವಾಲ್ಮೀಕಿ ಪ್ರತಿಮೆ ಅನಾವರಣ ಪ್ರಯುಕ್ತ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದಕ್ಕಾಗಿ ನಗರದಲ್ಲಿ ಬ್ಯಾನರ್ ಅಳವಡಿಸಲಾಗುತ್ತಿತ್ತು. ಗುರುವಾರ ಸಂಜೆ ಜನಾರ್ದನ ರೆಡ್ಡಿ ಅವರ ಮನೆಯ ಹತ್ತಿರ ಸಿರುಗುಪ್ಪ ರಸ್ತೆಯ ಪಕ್ಕದಲ್ಲಿ ಹಾಕಿದ್ದ ಬ್ಯಾನರ್‌ಗಳನ್ನು ಜನಾರ್ದನ ರೆಡ್ಡಿ ಮತ್ತು ಇತರರು ಕಿತ್ತು ಹಾಕಿರುವುದನ್ನು ಸತೀಶ್ ರೆಡ್ಡಿ ಅವರು ಪ್ರಶ್ನೆ ಮಾಡಿದ್ದರು. ಜನಾರ್ದನ ರೆಡ್ಡಿ ಸೋಮಶೇಖ‌ರ್ ರೆಡ್ಡಿ ಹಾಗೂ ಅವರ ಬೆಂಬಲಿಗರು ಉದ್ದೇಶ ಪೂರ್ವಕವಾಗಿ ಬ್ಯಾನರ್‌ಗಳನ್ನು ಹರಿದಿದ್ದಾರೆ. ಸತೀಶ್ ರೆಡ್ಡಿ ಹಾಗೂ ಗನ್ ಮ್ಯಾನ್ ಬಸವರಾಜ್ ಜತೆಗೆ ಜಗಳ ತೆಗೆದಿದ್ದಾರೆ. ಬಳಿಕ ಹಲ್ಲೆ ಮಾಡಿದ್ದಾರೆ. ಘಟನೆಯಲ್ಲಿ ಪೊಲೀಸ್ ಸಿಬ್ಬಂದಿ ಶ್ರೀನಿವಾಸ ಎಂಬವರಿಗೂ ಪೆಟ್ಟಾಗಿದೆ. ಈ ಬಗ್ಗೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕು” ಎಂದು ಚಾನಾಳ್ ಶೇಖರ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ಬ್ಯಾನರ್ ವಿಷಯಕ್ಕೆ ಗಲಾಟೆ, ಗುಂಡಿನ ಮೊರೆತ: ಒಬ್ಬನ ಸಾವು

ದೂರು ಆಧರಿಸಿ ಬ್ರೂಸ್ ಪೇಟೆ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...