ಬಳ್ಳಾರಿ ಬಂದ್ | ತುಂಗಭದ್ರಾ ಜಲಾಶಯಯಿಂದ ಕಾಲುವೆಗೆ ನೀರು ಹರಿಸುವಂತೆ‌ ಆಗ್ರಹ

Date:

ತುಂಗಭದ್ರಾ ಜಲಾಶಯದ ಬಲದಂಡೆ ಮೇಲ್ಮಟ್ಟದ ಎಚ್.ಎಲ್.ಸಿ ಕಾಲುವೆಗೆ ನೀರು ಸರಬರಾಜು ಸ್ಥಗಿತಗೊಳಿಸಲಾಗಿದೆ. ಕೂಡಲೇ ಕಾಲುವೆಗೆ ನೀರು ಹರಿಸಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘ ಶುಕ್ರವಾರ ಬಳ್ಳಾರಿ ಬಂದ್‌ ನಡೆಸಿದೆ.

ಜಿಲ್ಲಾಧಿಕಾರಿ ಕಚೇರಿ ಮುಂದೆ ರೈತ ಸಂಘದ ಕಾರ್ಯಕರ್ತರು ಪ್ರತಿಭಟನಾ ಧರಣಿ ನಡೆಸಿದ್ದಾರೆ. ನೀರಾವರಿ ಸಲಹಾ ಸಮಿತಿಯ ಸಭೆ ಈ ಮೊದಲ ನಿರ್ಣಯದಂತೆ ನ.30ರ ವರೆಗೆ ನೀರು ಹರಿಸಬೇಕೆಂದು ತೀರ್ಮಾನ ತೆಗೆದುಕೊಳ್ಳಲಾಗಿತ್ತು. ಆದರೆ ಬೆಂಗಳೂರಿನಲ್ಲಿ ನಡೆದ ಮತ್ತೊಂದು ಸಭೆಯಲ್ಲಿ ನ. 10ರ ವರೆಗೆ ಮಾತ್ರ ನೀಡಲಿದೆ ಎಂದು ಹೇಳಿರುವುದನ್ನು ಖಂಡಿಸಿದ್ದಾರೆ.

ರೈತ ಸಂಘ ಕರೆ ನೀಡಿದ ಬಂದ್‌ ಗೆ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದವು, ನಗರದ ಬಹುತೇಕ ವಾಣಿಜ್ಯ ಮಳಿಗೆಗಳು ಬಂದ್‌ ಆಗಿದ್ವು, ಶಾಲಾ-ಕಾಲೇಜು, ಪೆಟೋಲ್‌ ಬಂಕ್‌, ಸಾರಿಗೆ ಬಸ್‌ ಸಂಚಾರ ಎಂದಿನಂತೆ ನಡೆದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಪೊಲೀಸರ ಕಣ್ತಪ್ಪಿಸಿ ಪರಾರಿಯಾಗಿದ್ದ ಕೆಇಎ ಪರೀಕ್ಷಾ ಅಕ್ರಮದ ಸೂತ್ರದಾರ ಆರ್.ಡಿ. ಪಾಟೀಲ್‌ ಬಂಧನ

“100 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲಿ ಸದ್ಯ 26 ಟಿಎಂಸಿ ಮಾತ್ರ ನೀರು ಇದೆ. ತುಂಗಭದ್ರಾ ಜಲಾಶಯದ ಹೆಚ್ಎಲ್ ಸಿ ಕಾಲುವೆ ಮೂಲಕ ನೀರು ಹರಿಯದಿದ್ದರೆ ಲಕ್ಷಾಂತರ ಎಕರೆ ಪ್ರದೇಶದಲ್ಲಿ ಬೆಳೆದ ಬೆಳೆ ಹಾನಿಯಾಗಲಿದೆ. ಆದರೆ ನವೆಂಬರ್‌ 1Oಕ್ಕೆ ಹೆಚ್ಎಲ್‌ ಸಿ ಕಾಲುವೆಗೆ ನೀರು ನಿಲ್ಲಿಸಲಿದೆ. ನವೆಂಬರ್ ಅಂತ್ಯದವರೆಗೆ ಎಚ್‌.ಎಲ್‌. ಸಿ ಕಾಲುವೆಗೆ ನೀರು ಬಿಡುವುದಾಗಿ ಹೇಳಿದ್ದ ತುಂಗಭದ್ರಾ ಜಲಾಶಯ ಆಡಳಿತ ಮಂಡಳಿ ಈಗ ಮಾತು ತಪ್ಪಿದೆ” ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...