ಬಳ್ಳಾರಿ | ಮೇವು, ನೀರು ಅರಸಿ ಕೊಪ್ಪಳದಿಂದ ದನಕರುಗಳ ವಲಸೆ

Date:

ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ಹಳ್ಳಿಗಳಿಗೆ ಕೊಪ್ಪಳ ಜಿಲ್ಲೆಯ ಗೋಪಾಲಕರು ಮೇವು, ನೀರು ಅರಸಿ ತಮ್ಮ ಹಸುಗಳ ಸಮೇತ ವಲಸೆ ಬಂದಿದ್ದಾರೆ.

ಸಿರುಗುಪ್ಪ ತಾಲೂಕಿನ ಎಲ್‌ಎಲ್‌ಸಿ ಕಾಲುವೆ ಮತ್ತು ಇತರೆ ನೀರಿನ ಮೂಲಗಳನ್ನು ಬಳಸಿ ರೈತರು ಭತ್ತ, ಸಜ್ಜೆ, ಜೋಳ ಬೆಳೆದಿದ್ದು, ಕಟಾವು ನಡೆಯುತ್ತಿದ್ದು, ಕಟಾವಿನ ನಂತರ ಸಿಗುವ ಸಿಗುವ ಮೇವು ಮತ್ತು ರೈತರು ನೀಡುವ ಹಣಕ್ಕಾಗಿ ಈ ಹಸುಗಳ ಮಾಲೀಕರು ಕುಟುಂಬ ಸಮೇತ ದರೂರು, ಕರೂರು, ಚಾನಾಳ, ಬಗ್ಗೂರು, ಎಚ್.ಹೊಸಳ್ಳಿ, ತಾಳೂರು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ತಮ್ಮ ಹಸುಗಳೊಂದಿಗೆ ಬೀಡು ಬಿಟ್ಟಿದ್ದಾರೆ.

ಕೊಪ್ಪಳ ಜಿಲ್ಲೆಯ ಗಂಗಾವತಿ, ಕನಕಗಿರಿ ಮತ್ತು ಬೂದುಗುಪ್ಪ, ಮಲ್ಲಾಪುರ, ಬಂಕಾಪುರ, ಹಳೆಕುಮ್ಮಟ, ಎಚ್‌ಆರ್‌ಜಿ ಕ್ಯಾಂಪ್ ಗ್ರಾಮಗಳಿಂದ ಹಸುಗಳಿಗೆ ತಿನ್ನಲು ಹುಲ್ಲು, ನೀರು ಸಿಗದೆ ಸಾಮೂಹಿಕವಾಗಿ 200ರಿಂದ 400 ಹಸುಗಳ ಸುಮಾರು 80ಕ್ಕೂ ಹೆಚ್ಚು ಜನರ ಗುಂಪು ಕಾಲ್ನಡಿಗೆಯಲ್ಲಿ ಬಳ್ಳಾರಿ ಜಿಲ್ಲೆಗೆ ಬಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಾರಿಯ ಬರಗಾಲದಿಂದ ಹಸುಗಳ ಮಾಲೀಕರು ಹೀಗೆ ವಲಸೆ ಬಂದಿದ್ದು, ಭತ್ತ ಕೊಯ್ಲು ಆಗಿರುವ ಗದ್ದೆಗಳಲ್ಲಿ ಹಸುಗಳಿಗೆ ಹಸಿಮೇವು ಸಿಗುತ್ತದೆ ರೈತರ ಹೊಲಗಳಲ್ಲಿ ಒಂದು ರಾತ್ರಿ ಹಸುಗಳನ್ನು ಬಿಡಲು ರೈತರಿಂದ 5 ಸಾವಿರ ರೂ. ತೆಗೆದುಕೊಳ್ಳುತ್ತಿದ್ದು, ಜೀವನೋಪಾಯಕ್ಕೆ ಒಂದಷ್ಟು ಹಣ ದೊರೆಯುತ್ತಿದೆ ಎನ್ನುತ್ತಿದ್ದಾರೆ ವಲಸೆ ಬಂದ ಗೋಪಾಲಕರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...