ದಲಿತ ಯುವಕನ ಮೇಲೆ ಹಲ್ಲೆ ನಡೆಸಿದ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ, ಕರ್ನಾಟಕ ಜನಶಕ್ತಿ, ಪ್ರಗತಿಪರ ಸಂಘಟನೆಗಳ ಒಕ್ಕೂಟ, ದಲಿತ ಸಂಘಟನೆ ಪದಾಧಿಕಾರಿಗಳು ಗ್ರಾಮದಿಂದ ಪಟ್ಟಣದ ಪೊಲೀಸ್ ಠಾಣೆವರೆಗೆ ಪ್ರತಿಭಟನೆ ನಡೆಸಿದರು.
ಕಂಪ್ಲಿ ತಾಲ್ಲೂಕಿನ ನಂ.10 ಮುದ್ದಾಪುರ ಗ್ರಾಮದಲ್ಲಿ ಫೆ.11ರಂದು ರಸಿಕ ಎಂಬ ಯುವಕನ ಮೇಲೆ ಹಲ್ಲೆ ನಡೆಸಿದ ಆರೋಪಿಗಳನ್ನು ಕಠಿಣ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ಡಿವೈಎಸ್‌ಪಿ ಪ್ರಸಾದ್ ಕೆ. ಗೋಖಲೆ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಮಾದಿಗ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಕರಿಯಪ್ಪ ಗುಡಿಮನಿ, ದಲಿತರ ಮೇಲೆ ನೀಡಿದ ಸುಳ್ಳು ಆರೋಪವನ್ನು ವಜಾಗೊಳಿಸಬೇಕು. ಆರೋಪಿಗಳಿಗೆ ಸಹಕರಿಸಿದ ಪೊಲೀಸ್ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು. ಗ್ರಾಮದಲ್ಲಿ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ಜರುಗಿಸಬೇಕು ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಕಟ್ಟಡದ ಮೆಟ್ಟಿಲುಗಳು ಕುಸಿದು ಬಿದ್ದು; ದಂಪತಿ ಸಾವು
ಈ ವೇಳೆ ದಲಿತ ಪರ ಸಂಘಟನೆಗಳ ಪದಾಧಿಕಾರಿಗಳಾದ ವಸಂತರಾಜ ಕಹಳೆ, ಇ. ಧನಂಜಯ, ನೀಲಪ್ಪ ಪೇಂಟರ್, ಶಾಂತಪ್ಪ ಪೂಜಾರಿ, ಯಮುನಾ, ಶೋಭಾ, ಚನ್ನಮಲ್ಲಮ್ಮ, ಎಮ್ಮಿಗನೂರು ಜಡೆಪ್ಪ, ಮುದ್ದಾಪುರ ರಾಮಂಚದ್ರ, ಕುಮಾರಸ್ವಾಮಿ ಇದ್ದರು.





