ಬಳ್ಳಾರಿ | ಆಸ್ಪತ್ರೆಗಳ ಗುತ್ತಿಗೆ ಕಾರ್ಮಿಕರಿಗೆ ಸೇವಾ ಗುರುತಿನ ಚೀಟಿ ನೀಡುವಂತೆ ಆಗ್ರಹ

Date:

ಬಳ್ಳಾರಿ ಜಿಲ್ಲೆಯ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಗುತ್ತಿಗೆ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ನೌಕರರಿಗೆ ಸೇವಾ ಗುರುತಿನ ಚೀಟಿ ನೀಡಬೇಕೆಂದು ಗುತ್ತಿಗೆ ಕಾರ್ಮಿಕರ ಸಂಘ ಒತ್ತಾಯಿಸಿದೆ. ಸಂಘದ ಕಾರ್ಯಕರ್ತರು ಜಿಲ್ಲಾ ವೈದ್ಯಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದೆ.

ಹಕ್ಕೊತ್ತಾಯ ಪತ್ರ ಸಲ್ಲಿಸಿ ಮಾತನಾಡಿದ ಸಂಘದ ಮುಖಂಡ ಎಂ ಗೋಪಾಲ್, “ಸಿರುಗುಪ್ಪ ಸಾರ್ವಜನಿಕ ತಾಲೂಕು ಆಸ್ಪತ್ರೆಯಲ್ಲಿ ಹಲವಾರು ನೌಕರರು 2006ರಿಂದ ಹೊರಗುತ್ತಿಗೆ ಕಾರ್ಮಿಕರಾಗಿ ದುಡಿಯುತ್ತಿದ್ದಾರೆ. ಅವರೆಲ್ಲರಿಗೂ ಸೇವಾ ಪ್ರಮಾಣ ಪತ್ರ ಗುರುತಿನ ಚೀಟಿ ನೀಡಬೇಕು. ಈಗಾಗಲೇ ಹೊಸಪೇಟೆ ಆಸ್ಪತ್ರೆಯಲ್ಲಿ ಅಂತಹ ಪ್ರಮಾಣ ಪತ್ರಗಳನ್ನು ನೀಡಲಾಗಿದೆ” ಎಂದರು.

ಹಕ್ಕೊತ್ತಾಯ ಪತ್ರ ಸಲ್ಲಿಸುವ ವೇಳೆ ಸಂಘದ ಜಿಲ್ಲಾ ಉಪಾಧ್ಯಕ್ಷ ಎಂ ಹನುಮಂತ, ಆರ್ ಭಾಸ್ಕರ್ ರೆಡ್ಡಿ ಸೇರಿದಂತೆ ಅನೇಕರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ ಘರ್ಷಣೆ ತನಿಖೆಗೆ ಗೃಹ ಸಚಿವ ಜಿ. ಪರಮೇಶ್ವರ ಸೂಚನೆ

ಮಹರ್ಷಿ ವಾಲ್ಮೀಕಿ ಬ್ಯಾನರ್ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಬಳ್ಳಾರಿ ಘರ್ಷಣೆಯಲ್ಲಿ...

ಬ್ಯಾನರ್ ಅಳವಡಿಕೆ ಘರ್ಷಣೆ: ಶಾಸಕ ಜನಾರ್ದನ ರೆಡ್ಡಿ ಸೇರಿ 11 ಮಂದಿ ವಿರುದ್ಧ ಪ್ರಕರಣ ದಾಖಲು

ಬಳ್ಳಾರಿ ನಗರದ ಅವ್ವಂಬಾವಿಯಲ್ಲಿನ ಶಾಸಕ ಜನಾರ್ದನ ರೆಡ್ಡಿ ಮನೆ ಬಳಿ ಗುರುವಾರ...

ಬಳ್ಳಾರಿ | ಜ.1ರಿಂದ 30ರವರೆಗೆ ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನ: ನ್ಯಾ. ರಾಜೇಶ್ ಎನ್ ಹೊಸಮನೆ

ಬಳ್ಳಾರಿ ಜಿಲ್ಲೆಯಲ್ಲಿ 2026ರ ಜನವರಿ 1ರಿಂದ 30ರವರೆಗೆ ರಸ್ತೆ ಸುರಕ್ಷತಾ ಜಾಗೃತಿ...

ಜಿಂದಾಲ್ ಟೌನ್‌ಶಿಪ್‌ನಲ್ಲಿ ರೋಹಿಣಿ ಸಿಂಧೂರಿ ವಾಸ್ತವ್ಯ; ತನಿಖೆಗೆ ರೈತರ ಆಗ್ರಹ

ಬಳ್ಳಾರಿಯಲ್ಲಿ ಹೆಗ್ಗಿಲ್ಲದೆ ನಡೆಯುತ್ತಿರುವ ಗಣಿಗಾರಿಕೆಯಿಂದ ಕೃಷಿಗೆ ತೊಂದರೆಯಾಗುತ್ತಿದೆ ಎಂದು ರೈತರು ಪ್ರತಿಭಟನೆ...