ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ನಿಡುಗುರ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಟೀನ್ ಕಂಬ ಹಾಗೂ ಉತ್ತರ ಮಲೈ ನಡುವೆ ಕೆಎಸ್‌ಆರ್‌ಟಿಸಿ ಬಸ್ ನೆಲಕ್ಕುರುಳಿದ್ದು, ಅಪಘಾತದಲ್ಲಿ ಶಾಲಾ ಮಕ್ಕಳು ಸೇರಿದಂತೆ 40ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.
ಗಾಯಾಳುಗಳನ್ನು ಸಂಡೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಂಭೀರವಾಗಿ ಗಾಯಗೊಂಡಿರುವ ಹತ್ತು ಮಕ್ಕಳನ್ನು ಆ್ಯಂಬುಲೆನ್ಸ್ ಮೂಲಕ ಬಳ್ಳಾರಿಯ ವಿಮ್ಸ್‌ಗೆ ಕರೆದೊಯ್ಯಲಾಗಿದೆ. ಅಪಘಾತದಲ್ಲಿ ಬಸ್ ಕಂಡಕ್ಟರ್ ಕೈ ಮುರಿದಿದೆ ಎನ್ನಲಾಗಿದೆ.
ಈ ಸುದ್ದಿ ಓದಿದ್ದೀರಾ? ವಿಜಯನಗರ | ವಿದ್ಯಾರ್ಥಿನಿ ಸಾವು; ಡೆಂಗಿ ಶಂಕೆ
ಚಿಕಿತ್ಸೆ ನೀಡಲಾಗುತ್ತಿರುವ ಸಂಡೂರು ಸಾರ್ವಜನಿಕ ಆಸ್ಪತ್ರೆಗೆ ಬಳ್ಳಾರಿ ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ಭೇಟಿ ನೀಡಿದ್ದಾರೆ. ಅಪಘಾತಕ್ಕೆ ಖಚಿತ ಕಾರಣ ಇನ್ನೂ ತಿಳಿದುಬಂದಿಲ್ಲ.
ಗಿರೆನಹಳ್ಳಿ, ಉತ್ತರ ಮಲೈ ಭಾಗದಿಂದ ಸಂಡೂರಿಗೆ ಬರುತ್ತಿದ್ದ ಬಸ್‌ನಲ್ಲಿ ಶಾಲೆ-ಕಾಲೇಜು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣ ಮಾಡುತ್ತಿದ್ದರು ಎನ್ನಲಾಗಿದೆ.





