ಬಳ್ಳಾರಿ | ಐದು ಮಂದಿ ಅಲ್ಲ, ಕ್ಷೇತ್ರದ ಪ್ರತಿಯೊಬ್ಬರೂ ಶಾಸಕರೇ; ಕೆಆರ್‌ಪಿಪಿಗೆ ಕಾಂಗ್ರೆಸ್ ಮುಖಂಡ ತಿರುಗೇಟು

Date:

ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಭರತ್ ರೆಡ್ಡಿ ಸೇರಿ ಐದು ಮಂದಿ ಎಂಎಲ್‌ಎಗಳು ಮಾತ್ರ ಇಲ್ಲ. ಕ್ಷೇತ್ರದ 2ಲಕ್ಷ 40 ಸಾವಿರ ಜನರೂ ಎಂಎಲ್‌ಎಗಳೇ ಎಂದು ಕೆಆರ್‌ಪಿಪಿಗೆ ಕಾಂಗ್ರೆಸ್ ಮುಖಂಡ ಚಾನಳ್ ಶೇಖರ್ ತಿರುಗೇಟು ನೀಡಿದ್ದಾರೆ.

ಬಳ್ಳಾರಿ ನಗರಕ್ಕೆ ಚುನಾಯಿತ ಶಾಸಕ ಭರತ್ ರೆಡ್ಡಿ ಮಾತ್ರವಲ್ಲ. ಅವರ ಕುಟಂಬಸ್ಥರೂ ಸೇರಿ ಐವರು ಶಾಸಕರಿದ್ದಾರೆಂದು ಕೆಆರ್‌ಪಿಪಿ ಮುಖಂಡ ಕಿಡಿಕಾರಿದ್ದರು. ಅವರ ಮಾತಿಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌ ಮುಖಂಡ ಚಾವಳ್‌ ಶೇಖರ್, ಕ್ಷೇತ್ರದ ಪ್ರತಿಯೊಬ್ಬರೂ ಶಾಸಕರೇ ಆಗಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

“ಜನಾರ್ಧನ ರೆಡ್ಡಿ ಗಂಗಾವತಿಯಲ್ಲಿ ಶಾಸಕನಾಗಿದ್ದಾರೆ. ಅವರು ಅಲ್ಲಿನ ಅಭಿವೃದ್ಧಿ ಮಾಡುವುದರ ಬಗ್ಗೆ ಚಿಂತಿಸಬೇಕು. ಅವರಿಗೆ ಬಳ್ಳಾರಿ ಅಭಿವೃದ್ಧಿ ಬಗ್ಗೆ ಏಕೆ ಚಿಂತೆ” ಎಂದು ಶಾಸಕ ಭರತ್‌ ರೆಡ್ಡಿ ಬೆಂಬಲಿಗರು ವಾಗ್ದಾಳಿ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮೂರು ತಿಂಗಳಲ್ಲಿ ನಗರದಲ್ಲಿ ಸಾಕಷ್ಠು ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ. ಇದಕ್ಕೆ ಶಾಸಕರು ಮತ್ತು ಅವರ ಕುಟುಂಬ ಶ್ರಮಿಸುತ್ತಿದೆ. ವಿಧಾನಸಭಾ ಚುನಾವಣೆಯಲ್ಲಿ ಭರತ್ ರೆಡ್ಡಿ ಅವರಿಗೆ ಟಿಕೆಟ್ ತಪ್ಪಿಸಲು ನೀವು ಯಾರ ಹತ್ತಿರ ಹೋಗಿ ಬಕೆಟ್ ಹಿಡಿಯುವ ಕೆಲಸ ಮಾಡಿದ್ದೀರಿ ಎಂಬುದು ನಮಗೆ ಗೊತ್ತಿದೆ. ನಿಮ್ಮಂಥವರು ನಮ್ಮ ನಾಯಕನ ಬಗ್ಗೆ ಮಾತನಾಡುವ ಅವಶ್ಯಕತೆ ಇಲ್ಲ” ಎಂದು ತಿರುಗೇಟು ನೀಡಿದರು.

“ಗಣಿ ಸಂಪತ್ತು ಲೂಟಿ ಮಾಡಿದ ಜನಾರ್ಧನ ರೆಡ್ಡಿಗೆ ನಮ್ಮ ಶಾಸಕ ನಾರಾ ಭರತ್ ರೆಡ್ಡಿ ಬಗ್ಗೆ ಮಾತಾಡುವ ನೈತಿಕತೆ ಇಲ್ಲ. ನಿಮ್ಮ ಅಧಿಕಾರದ ಅವಧಿಯಲ್ಲಿನ ಆಡಳಿತ ಮತ್ತು ಅಕ್ರಮ ಗಣಿಗಾರಿಕೆ ನೋಡಿ ಅಂದಿನ ಲೋಕಾಯುಕ್ತ ಸಂತೋಷ್ ಹೆಗ್ಡೆ ರಿಪಬ್ಲಿಕ್ ಆಫ್ ಬಳ್ಳಾರಿ ಎಂದು ಹೆಸರು ಇಟ್ಟಿದ್ದಾರೆ. ಅಕ್ರಮ ಗಣಿಗಾರಿಕೆ ವಿಚಾರಣೆಯಲ್ಲಿ ಜನಾರ್ಧನ್‌ ರೆಡ್ಡಿ ಅವರನ್ನು ಉಚ್ಛ ನ್ಯಾಯಾಲಯ ಗಡಿಪಾರು ಮಾಡಿದೆ” ಎಂದರು.

ಕಾಂಗ್ರೆಸ್ ಪಕ್ಷದ ಮುಖಂಡ ಸತೀಶ್ ರೆಡ್ಡಿ ಮಾತನಾಡಿ, “ಜನಾರ್ಧನ ರೆಡ್ಡಿ ಅವರು ಹಿಂಬಾಗಿಲ ರಾಜಕಾರಣ ಮಾಡಿದವರು. ಅವರು ಜನರ ಸೇವೆ ಮಾಡಲಿಲ್ಲ. ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಅಂತ ಹೆಸರಿಟ್ಟಿದ್ದಾರೆ. ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಕರ್ನಾಟಕ ಮತ್ತು ಆಂಧ್ರದ ಗಡಿ ಒತ್ತುವರಿ ಮಾಡಿದ ಬಗ್ಗೆ ಸಂತೋಷ್ ಹೆಗ್ಡೆ ಅವರು ವಿವರವಾಗಿ ವರದಿ ನೀಡಿದ್ದಾರೆ” ಎಂದರು.

“ಶಾಸಕ ಭರತ್ ರೆಡ್ಡಿ ಅವರು ಯಾವುದೋ ಅದೃಷ್ಟದಿಂದ ಎಂಎಲ್‌ಎ ಆಗಿಲ್ಲ. ಜನರು ಆರಿಸಿರುವ ಜನನಾಯಕನಾಗಿ ಎಂಎಲ್‌ಎ ಆಗಿದ್ದಾರೆ. ಶಾಸಕ ನಾರಾ ಭರತ್ ರೆಡ್ಡಿ ಅವರನ್ನು ಗಾಂಜಾ ಗಿರಾಕಿ ಎಂದು ನೀವು ಹೇಳಿದರೆ, ಅವರು ಜಿಲ್ಲೆಯಲ್ಲಿ ಗಾಂಜಾ, ಮಟ್ಕಾ, ಕ್ಲಬ್ ನಿಷೇಧ ಮಾಡಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ನಗರಕ್ಕೆ ಐವರು ಶಾಸಕರಿದ್ದಾರೆ; ಕೆಆರ್‌ಪಿಪಿ ಮುಖಂಡ ಕಿಡಿ

“ದೇವಿ ರೆಡ್ದಿ ಮೃತಪಟ್ಟ 22 ವರ್ಷದ ಬಳಿಕ ದೂರು ದಾಖಲಿಸಿದ್ದಾರೆ. ಪ್ರಕರಣ ಸದ್ಯ ಕೋರ್ಟ್‌ನಲ್ಲಿದೆ  ಅಪರಾಧಿಗಳು ಯಾರು ಎಂಬುದನ್ನು ಕೋಟ್ ನಿರ್ಧರಿಸಲಿದೆ” ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಅಭಿಲಾಶ್ ಬಯೋಪಾಟಿ ವಿಷ್ಣು, ನಂದೀಶ್, ಮಿಂಚು ಸೀನಾ, ಜಗನ್, ರಾಮಾಂಜನೇಯ, ಪೆರಂ ವಿವೇಕ್ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ ಘರ್ಷಣೆ ತನಿಖೆಗೆ ಗೃಹ ಸಚಿವ ಜಿ. ಪರಮೇಶ್ವರ ಸೂಚನೆ

ಮಹರ್ಷಿ ವಾಲ್ಮೀಕಿ ಬ್ಯಾನರ್ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಬಳ್ಳಾರಿ ಘರ್ಷಣೆಯಲ್ಲಿ...

ಬ್ಯಾನರ್ ಅಳವಡಿಕೆ ಘರ್ಷಣೆ: ಶಾಸಕ ಜನಾರ್ದನ ರೆಡ್ಡಿ ಸೇರಿ 11 ಮಂದಿ ವಿರುದ್ಧ ಪ್ರಕರಣ ದಾಖಲು

ಬಳ್ಳಾರಿ ನಗರದ ಅವ್ವಂಬಾವಿಯಲ್ಲಿನ ಶಾಸಕ ಜನಾರ್ದನ ರೆಡ್ಡಿ ಮನೆ ಬಳಿ ಗುರುವಾರ...

ಬಳ್ಳಾರಿ | ಜ.1ರಿಂದ 30ರವರೆಗೆ ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನ: ನ್ಯಾ. ರಾಜೇಶ್ ಎನ್ ಹೊಸಮನೆ

ಬಳ್ಳಾರಿ ಜಿಲ್ಲೆಯಲ್ಲಿ 2026ರ ಜನವರಿ 1ರಿಂದ 30ರವರೆಗೆ ರಸ್ತೆ ಸುರಕ್ಷತಾ ಜಾಗೃತಿ...

ಜಿಂದಾಲ್ ಟೌನ್‌ಶಿಪ್‌ನಲ್ಲಿ ರೋಹಿಣಿ ಸಿಂಧೂರಿ ವಾಸ್ತವ್ಯ; ತನಿಖೆಗೆ ರೈತರ ಆಗ್ರಹ

ಬಳ್ಳಾರಿಯಲ್ಲಿ ಹೆಗ್ಗಿಲ್ಲದೆ ನಡೆಯುತ್ತಿರುವ ಗಣಿಗಾರಿಕೆಯಿಂದ ಕೃಷಿಗೆ ತೊಂದರೆಯಾಗುತ್ತಿದೆ ಎಂದು ರೈತರು ಪ್ರತಿಭಟನೆ...