ಬಳ್ಳಾರಿ | ಎಐಕೆಕೆಎಂಎಸ್‌ನಿಂದ ಪ್ರತಿಭಟನೆ; ಪ್ರಸ್ತುತ ಕೇಂದ್ರ ಬಜೆಟ್‌ ಪ್ರತಿ ಸುಟ್ಟು ಆಕ್ರೋಶ

Date:

ಮೋದಿಯವರ ವಿಕಸಿತ ಭಾರತದ ಕನಸು ಕೇವಲ ಭಾಷಣಕ್ಕಷ್ಟೇ ಸೀಮಿತವಾಗಿರುವುದು ಈ ಬಾರಿಯ ಕೇಂದ್ರ ಬಜೆಟ್ ನೋಡಿದರೆ ಗೊತ್ತಾಗುತ್ತದೆ. ಅವರ ವಿಕಸಿತ ಭಾರತ ದೊಡ್ಡ ದೊಡ್ಡ ಬಂಡವಾಳಶಾಹಿಗಳದ್ದೇ ಹೊರತು, ರೈತ, ಕೃಷಿ, ಕಾರ್ಮಿಕರಿಗಲ್ಲ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ ಎಂದು ಎಐಕೆಕೆಎಂಎಸ್ ಸಂಘದ ಜಿಲ್ಲಾಧ್ಯಕ್ಷ ಗೋವಿಂದ್ ಅಭಿಪ್ರಾಯ ವ್ಯಕ್ತಪಡಿಸಿದರು.

ಬಳ್ಳಾರಿ ನಗರದ ತಾಲೂಕು ಕಚೇರಿ ಮುಂಭಾಗ ಎಐಕೆಕೆಎಂಎಸ್ ರೈತ ಸಂಘಟನೆಯಿಂದ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ 2025-2026ನೇ ಸಾಲಿನ ಬಜೆಟ್‌ ಪ್ರತಿ ಸುಟ್ಟು ಆಕ್ರೋಶ ವ್ಯಕ್ತಪಡಿಸುತ್ತ ಮಾತನಾಡಿದರು.

“ಈ ಬಾರಿಯ ಬಜೆಟ್‌ನಲ್ಲಿ ಮನರೇಗಾ ಯೋಜನೆಗೆ ಸುಮಾರು ₹4,000 ಕೋಟಿ, ಕೃಷಿಗೆ ₹4 ಲಕ್ಷ ಕೋಟಿಗಿಂತ ಅಧಿಕ ಹಣ ಕಡಿತ ಗೊಳಿಸಲಾಗಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಯಚೂರು | ಕಟಾವಿಗೆ ಬಂದ ಜೋಳದ ಬೆಳೆಗೆ ಬೆಂಕಿ; ₹2 ಲಕ್ಷ ಮೌಲ್ಯ ಬೆಳೆನಾಶ

ಜಿಲ್ಲಾ ಕಾರ್ಯದರ್ಶಿ ಗುರಳ್ಳಿ ರಾಜ ಮಾತನಾಡಿ, “ಕೇಂದ್ರ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರೈತರ ಆದಾಯವನ್ನು ದುಪ್ಪಟ್ಟು ಮಾಡುವೆವೆಂದು ಹೇಳುತ್ತಲೇ ಇದೆ. ಆದರೆ ನಮ್ಮ ರೈತರ ಬದುಕು ನೋಡಿದರೆ ಎಷ್ಟರ ಮಟ್ಟಿಗೆ ಶ್ರೀಮಂತಗೊಳಿಸಿದ್ದಾರೆ ಎಂಬುದು ತಿಳಿಯುತ್ತದೆ. ಒಟ್ಟಾರೆ ಇಂದು ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದರೂ ಈ ವ್ಯವಸ್ಥೆಯಲ್ಲಿ ಬಂಡವಾಳಶಾಹಿಗಳ ಪರವಾಗಿ ಕೆಲಸ ಮಾಡುತ್ತಾರೆ. ಇದನ್ನು ನಾವು ಅರ್ಥ ಮಾಡಿಕೊಂಡು ನಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಬಲಿಷ್ಠ ಹೋರಾಟಕಟ್ಟಬೇಕು” ಎಂದು ಹೇಳಿದರು.

ಈ ಸಂದರ್ಭದಲ್ಲಿ ಬಳ್ಳಾರಿ ತಾಲೂಕು ಕಾರ್ಯದರ್ಶಿ ಧನರಾಜ, ರೈತ ಹನುಮಂತ, ನಿಂಗಣ್ಣ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ ಘರ್ಷಣೆ ತನಿಖೆಗೆ ಗೃಹ ಸಚಿವ ಜಿ. ಪರಮೇಶ್ವರ ಸೂಚನೆ

ಮಹರ್ಷಿ ವಾಲ್ಮೀಕಿ ಬ್ಯಾನರ್ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಬಳ್ಳಾರಿ ಘರ್ಷಣೆಯಲ್ಲಿ...

ಬ್ಯಾನರ್ ಅಳವಡಿಕೆ ಘರ್ಷಣೆ: ಶಾಸಕ ಜನಾರ್ದನ ರೆಡ್ಡಿ ಸೇರಿ 11 ಮಂದಿ ವಿರುದ್ಧ ಪ್ರಕರಣ ದಾಖಲು

ಬಳ್ಳಾರಿ ನಗರದ ಅವ್ವಂಬಾವಿಯಲ್ಲಿನ ಶಾಸಕ ಜನಾರ್ದನ ರೆಡ್ಡಿ ಮನೆ ಬಳಿ ಗುರುವಾರ...

ಬಳ್ಳಾರಿ | ಬ್ಯಾನರ್ ವಿಷಯಕ್ಕೆ ಗಲಾಟೆ, ಗುಂಡಿನ ಮೊರೆತ: ಒಬ್ಬನ ಸಾವು

ಬಳ್ಳಾರಿಯಲ್ಲಿ ಬಿಜೆಪಿ ಶಾಸಕ ಜನಾರ್ದನ ರೆಡ್ಡಿ ಅವರ ಮನೆ ಎದುರು ಬ್ಯಾನರ್...

ಬಳ್ಳಾರಿ | ಜ.1ರಿಂದ 30ರವರೆಗೆ ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನ: ನ್ಯಾ. ರಾಜೇಶ್ ಎನ್ ಹೊಸಮನೆ

ಬಳ್ಳಾರಿ ಜಿಲ್ಲೆಯಲ್ಲಿ 2026ರ ಜನವರಿ 1ರಿಂದ 30ರವರೆಗೆ ರಸ್ತೆ ಸುರಕ್ಷತಾ ಜಾಗೃತಿ...