ಬಳ್ಳಾರಿ | ₹7 ಕೋಟಿ ವೆಚ್ಚದ ʼಕ್ಲಾಕ್‌ ಟವರ್ʼ ಕಾಮಗಾರಿ ಸ್ಥಗಿತ

Date:

ನಗರ ಸುಂದರೀಕಣ ಮತ್ತು ಪ್ರವಾಸೋದ್ಯಮಕ್ಕೆ ಆದ್ಯತೆ ನೀಡುವ ಉದ್ದೇಶದಿಂದ ಬಳ್ಳಾರಿ ನಗರದ ಗಡಗಿ ಚೆನ್ನಪ್ಪ (ರಾಯಲ್) ಸರ್ಕಲ್‌ನಲ್ಲಿ ಲೆಬನಾನ್ ದೇಶದ ಮಾದರಿಯಲ್ಲೇ ಸುಮಾರು ಏಳು ಕೋಟಿ ರೂಪಾಯಿ ವೆಚ್ಚದಲ್ಲಿ ಕ್ಲಾಕ್ ಟವರ್ ಮತ್ತು ರಸ್ತೆ ನಿರ್ಮಾಣ ಕಾಮಗಾರಿ ಅರ್ಧಕ್ಕೆ ನಿಂತಿದೆ.

ಬಳ್ಳಾರಿ ಜಿಲ್ಲೆ ವಿಭಜನೆ ಆಗಿ ಹೊಸದಾಗಿ ವಿಜಯನಗರ ಜಿಲ್ಲೆಯಾದ ಬಳಿಕ ಬಳ್ಳಾರಿಯಲ್ಲಿ ಪ್ರವಾಸೋದ್ಯಮ, ವ್ಯಾಪಾರ ವಹಿವಾಟು ಉತ್ತೇಜನಕ್ಕೆ ಕ್ಲಾಕ್ ಟವರ್ ಅನ್ನು ಬಳ್ಳಾರಿ ಅಸ್ಮಿತೆಯನ್ನಾಗಿ ಮಾಡಲು ಕ್ಲಾಕ್ ಟವರ್‌ಗೆ ಚಾಲನೆ ನೀಡಲಾಯಿತು.

ಬಿಜೆಪಿ ನೇತೃತ್ವದ ಸರ್ಕಾರದ ಅವಧಿಯಲ್ಲಿನ ರಾಯಲ್ ವೃತ್ತದಲ್ಲಿನ ʼಕ್ಲಾಕ್ ಟವರ್ʼ ನಿರ್ಮಾಣ ಕಾಮಗಾರಿಗೆ ಮಾಜಿ ಸಚಿವ ಬಿ ಶ್ರೀರಾಮುಲು 2022ರ ಆಗಸ್ಟ್ 15ರಂದು ಭೂಮಿ ಪೂಜೆ ನೆರವೇರಿಸಿದ್ದರು. ಶರವೇಗದಲ್ಲಿ ಕಾಮಗಾರಿಯೂ ನಡೆಯುತ್ತಿತ್ತು. ಇದೀಗ 7 ಕೋಟಿ ವೆಚ್ಚದ ಕಾಮಗಾರಿ ಅರ್ಧಕ್ಕೆ ನಿಂತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಯಲ್ ಗಡಗಿ ಚನ್ನಪ್ಪ ಸರ್ಕಲ್ ನಗರದಲ್ಲಿನ ಮೋತಿ (ಗವಿಯಪ್ಪ ವೃತ್ತ, ಸಂಗಮ್ ಇಂದಿರಾಗಾಂಧಿ ವೃತ್ತಿ) ದುರ್ಗಮ್ಮ ಗುಡಿ, ಬೆಂಗಳೂರು ರೋಡ್ ನಗರದ ಮುಂತಾದ ಪ್ರಮುಖ ವೃತ್ತಗಳಿಗೆ ಸಂಪರ್ಕವಾಗಿದೆ.

ಕ್ಲಾಕ್ ಟವರ್ ವಿಶೇಷತೆ

ಲೆಬನಾನ್ ದೇಶದ ಗಡಿಯಾರದ ಮಾದರಿಯಲ್ಲೇ ಅಂದಾಜು ಏಳು ಕೋಟಿ ರೂಪಾಯಿ ವೆಚ್ಚದಲ್ಲಿ ಕ್ಲಾಕ್ ಟವರ್ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ ಹಾಗೂ ಈ ಕ್ಲಾಕ್ ಟವರ್‌ಗೆ ಲಿಫ್ಟ್, ಮೆಟ್ಟಿಲು ವ್ಯವಸ್ಥೆ ಮಾಡಲಾಗಿದೆ. ಗೋಪುರ 120 ಅಡಿ ಎತ್ತರ 16 ಮೀಟರ್ ರೆಡಿಯಾಸ್ ಇದೆ.

ಕ್ಲಾಕ್ ಟವರ್ ಇತಿಹಾಸ

1946ರಲ್ಲಿ ಬಳ್ಳಾರಿಯ ಗಡಗಿ ಚನ್ನಪ್ಪ ಸರ್ಕಲ್ ನಲ್ಲಿ ಆಂಧ್ರ- ಕರ್ನಾಟಕ ಸೌಹಾರ್ದತೆ ಸಂಕೇತವಾಗಿ ಗಡಿಯಾರ ಗೋಪುರ ನಿರ್ಮಿಸಲಾಗಿತ್ತು. ಆದರೆ 2008ರಲ್ಲಿ ದುಷ್ಕರ್ಮಿಗಳು ರಾತೋರಾತ್ರಿ ಧ್ವಂಸಗೊಳಿಸಿದ್ದರು. ನಂತರ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಅದೇ ಸ್ಥಳದಲ್ಲಿ ಕ್ಲಾಕ್ ಟವರ್ ನಿರ್ಮಿಸಿತ್ತು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಬಸ್‌ ಸೌಲಭ್ಯಕ್ಕಾಗಿ ವಿದ್ಯಾರ್ಥಿಗಳ ಆಕ್ರೋಶ

ಸರ್ಕಾರದಿಂದ ಅನುದಾನ ತಡೆ

“5 ಕೋಟಿ ಅನುದಾನ ಕ್ಲಾಕ್ ಟವರ್ ನಿರ್ಮಾಣಕ್ಕೆ, 2 ಕೋಟಿ ಅನುದಾನ ರಸ್ತೆ ಕಾಮಗಾರಿಗೆ ನೀಡಲಾಗಿದೆ. ಕ್ಲಾಕ್ ಟವರ್ ನಿರ್ಮಾಣ ಕಾಮಗಾರಿಗೆ ಈಗಾಗಲೇ 1.80 ಕೋಟಿ  ಅನುದಾನ ವೆಚ್ಚವಾಗಿದೆ. 72 ಅಡಿ ಗೋಪುರ ಎತ್ತರ ಈಗಾಗಲೇ ನಿರ್ಮಾಣವಾಗಿದೆ. ಉಳಿದ ಅನುದಾನ ಸರ್ಕಾರದಿಂದ ಬಿಡುಗಡೆ ಆಗಿಲ್ಲ” ಎಂದು ಬಳ್ಳಾರಿ ಸಹಾಯಕ ಎಂಜಿನಿಯರ್‌ ಎಂ ಗವಿಯಪ್ಪ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...