ಬಳ್ಳಾರಿ | ಪೈಗಂಬರ್‌ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಉಪನ್ಯಾಸಕ; ವಿದ್ಯಾರ್ಥಿಗಳು ಆಕ್ರೋಶ

Date:

ತರಗತಿಯಲ್ಲಿ ಪಾಠ ಮಾಡುವಾಗ ಉಪನ್ಯಾಸಕನೊಬ್ಬ ಪ್ರವಾದಿ ಮಹಮ್ಮದ್ ಪೈಗಂಬರ್ ಹಾಗೂ‌ ಇಸ್ಲಾಂ ಧರ್ಮದ ಆಚರಣೆಗಳ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅವರ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿರುವ ಘಟನೆ ಬಳ್ಳಾರಿಯ ಶ್ರೀ ಮೇಧ ಕಾಲೇಜಿನಲ್ಲಿ ನಡೆದಿದೆ.

ಕಾಲೇಜಿನ ಉಪನ್ಯಾಸಕ ಯು.ಎಸ್.ಗೌಡ ವಿರುದ್ದ ಮುಸ್ಲಿಂ ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉಪನ್ಯಾಸಕ ತರಗತಿಯಲ್ಲಿ ಪಾಠ ಮಾಡುವ ವೇಳೆ ಮುಸ್ಲಿಂ ಸಮುದಾಯದ ಧಾರ್ಮಿಕ ಹಕ್ಕು, ಆಚಾರ, ವಿಚಾರ, ಜೀವನ ಶೈಲಿಯ ಬಗ್ಗೆ ಕೆಟ್ಟದಾಗಿ ನಿಂದಿಸಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರವಾದಿ ಅವರು ನಾಲ್ಕು ಮದುವೆ ಮಾಡಿಕೊಂಡಿದ್ದಾರೆ. ನೀವು ಹಾಗೆ ಮಾಡಬೇಡಿ” ಎಂದು ಪಾಠದಲ್ಲಿ ಇರದ ವಿಚಾರಗಳನ್ನು ವಿದ್ಯಾರ್ಥಿಗಳಿಗೆ ಬೋಧಿಸಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಉಪನ್ಯಾಸಕರ ವಿರುದ್ದ ಕ್ರಮಕ್ಕೆ ಒತ್ತಾಯಿಸಿದರು.

ವಿದ್ಯಾರ್ಥಿಗಳ ಪ್ರತಿಭಟನೆ ಜೋರಾಗುತ್ತಿದ್ದಂತೆ ಉಪನ್ಯಾಸಕ ಕ್ಷಮೆ ಕೋರಿದ್ದಾರೆ ಎಂದು ತಿಳಿದು ಬಂದಿದೆ. ಆದರೆ ಇಂತಹ ಶಿಕ್ಷಕರು ನಮಗೆ ಬೇಡವೇ ಬೇಡ ಎಂದು ವಿದ್ಯಾರ್ಥಿಗಳು ಪಟ್ಟು ಹಿಡಿದು ವಾಗ್ವಾದ ನಡೆಸಿದರು. ನಂತರ ಮುಸ್ಲಿಂ ಸಮುದಾಯದ ಯುವಕರು, ವಿದ್ಯಾರ್ಥಿಗಳು ಎಸ್.ಪಿ. ಕಚೇರಿ ಮುಂಭಾಗದಲ್ಲಿ ಜಮಾವಣೆಗೊಂಡು ಕೆಲಕಾಲ ಪ್ರತಿಭಟನೆ ನಡೆಸಿದರು. ತಕ್ಷಣ ಮನವಿಗೆ ಸ್ಪಂದಿಸಿದ ಪೊಲೀಸ್ ಇನ್‌ಸ್ಪೆಕ್ಟರ್ ಸುಭಾಷ್ ಎಫ್ಐರ್ ದಾಖಲಿಸಿಕೊಂಡು ಮುಸ್ಲಿಂ ಮುಖಂಡರಿಗೆ ಮತ್ತು ಭೀಮ್ ಆರ್ಮಿ ಸಂಘಟನೆ ಪ್ರಮುಖರಿಗೆ ದೂರು ಪ್ರತಿ ನೀಡಿದ ನಂತರ ಶಾಂತಿಯುತವಾಗಿ ಪ್ರತಿಭಟನೆ ಹಿಂತೆಗೆದುಕೊಂಡರು.

ಈ ಸುದ್ದಿ ಓದಿದ್ದೀರಾ? ಬಸವಣ್ಣನವರನ್ನು ರಾಜ್ಯದ ಸಾಂಸ್ಕೃತಿಕ ನಾಯಕನೆಂದು ಘೋಷಿಸಿ: ಅನುಭವ ಮಂಟಪ ಆಗ್ರಹ

ಈ ಸಂದರ್ಭದಲ್ಲಿ ಮುಖಂಡರುಗಳಾದ ಅಯಾಜ್ ಅಹ್ಮದ್, ಅಲ್ಲಭಕಾಶ, ಖಾಲಿಲ್, ಬಾಯ, ಖಾಜಾ ಖಾನ್ ತನ್ವಿರ್ ಮತ್ತು ಭೀಮ್ ಆರ್ಮಿ ಸಂಘಟನೆಯ ಗಜೇಂದ್ರವರ್ಮ, ವೆಂಕಟೇಶ್, ರಘು ಹರಿಕೃಷ್ಣ ಸೇರಿದಂತೆ ಹಲವಾರು ಜನ ಉಪಸ್ಥಿತರಿದ್ದರು

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...