ಬೆಳ್ತಂಗಡಿ | ಮೂರುಗೋಳಿಯ ಪ್ರವೀಣ್ ಎಂ‌‌ ಅವರಿಗೆ ಮುಖ್ಯಮಂತ್ರಿ ಪದಕ ಪ್ರದಾನ

Date:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಂಭೀರ ಪ್ರಕರಣ ನಡೆದರೂ ವಿಶೇಷ ಪೊಲೀಸ್ ತಂಡದ ಜತೆಗಿದ್ದು, ಹಿರಿಯ ಅಧಿಕಾರಿಗಳು ಹೇಳಿದಂತೆ ಪ್ರಕರಣ ಭೇದಿಸುವ ಪೊಲೀಸ್ ಹೆಡ್ ಕಾನ್‌ಸ್ಟೆಬಲ್‌ ಮೂರುಗೋಳಿಯ ಪ್ರವೀಣ್ ಎಂ ಅವರಿಗೆ ಈ ಬಾರಿ ಮುಖ್ಯಮಂತ್ರಿ ಪದಕ ಪ್ರದಾನ ಮಾಡಿದರು.

ಎಪ್ರಿಲ್ 2ರಂದು ಕರ್ನಾಟಕ ಪೊಲೀಸ್ ಧ್ವಜಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಪದಕ ಪ್ರದಾನ ಮಾಡಿದರು.

ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದ ಮೂರುಗೋಳಿ ನಿವಾಸಿ ಅಣ್ಣು ದೇವಾಡಿಗ ಮತ್ತು ಬೇಬಿ ದೇವಾಡಿಗ ದಂಪತಿಯ ಪ್ರಥಮ ಪುತ್ರ ಪ್ರವೀಣ್ ಎಂ ಅವರು 2002ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೊದಲ ಕರ್ತವ್ಯವನ್ನು ಮಂಗಳೂರು ಬಂದರು ಪೊಲೀಸ್ ಠಾಣೆಯಲ್ಲಿ ಸಲ್ಲಿಸಿದ್ದು, ಬಳಿಕ ಬೆಳ್ತಂಗಡಿ ವೃತ್ತ ಕಚೇರಿ, ದಕ್ಷಿಣ ಕನ್ನಡ ಜಿಲ್ಲಾ ಅಪರಾಧ ಪತ್ತೆ ದಳ(ಡಿಸಿಐಬಿ), ಬಂಟ್ವಾಳ ಡಿವೈಎಸ್‌ಪಿ ವಿಶೇಷ ಅಪರಾಧ ದಳ, ವೇಣೂರು ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಈ ಸದ್ಯ ದಕ್ಷಿಣ ಕನ್ನಡ ಸೈಬರ್ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ಎನ್‌ಐಎ ಅಧಿಕಾರಿಗಳ ಜತೆ ಕರ್ತವ್ಯ:

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಸಂದರ್ಭದಲ್ಲಿ ಎನ್‌ಐಎ ತನಿಖಾ ದಳದೊಂದಿಗೆ 6 ತಿಂಗಳ ಕರ್ತವ್ಯ ನಿರ್ವಹಿಸಿದ್ದು, ಬಳಿಕ ಬಿಹಾರದಲ್ಲಿ ಮೋದಿ ಹತ್ಯೆ ಯತ್ನ ಪ್ರಕರಣದಲ್ಲಿ ಎನ್‌ಐಎ ಜತೆ 3 ತಿಂಗಳು ಕರ್ತವ್ಯ ನಿರ್ವಹಿಸಿದ್ದಾರೆ. ಈ ನಡುವೆ ಎರಡೂ ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ದಳ(ಎನ್‌ಐಎ)ದ ಜೊತಗೆ ಕರ್ತವ್ಯ ನಿರ್ವಹಿಸಿದ್ದಾರೆ.

ಹಲವು ಗಂಭೀರ ಪ್ರಕರಣದಲ್ಲಿ ದಕ್ಷತೆಯಿಂದ ಸೇವೆ

ಶರತ್ ಮಾಡಿವಾಳ ಹತ್ಯೆ ಪ್ರಕರಣ, ಫರಂಗಿಪೇಟೆ ಡಬಲ್ ಮರ್ಡರ್, ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ, 9 ದೇವಾಲಯ ಕಳವು ಪ್ರಕರಣ, ಬೆಳ್ತಂಗಡಿ ಬಂಗಾಡಿ ಬಸದಿ ಸೇರಿ 9 ದೇವಾಲಯ ಕಳ್ಳತನ ಪ್ರಕರಣ, ವಿಟ್ಲ ಕರ್ನಾಟಕ ಬ್ಯಾಂಕ್ ದರೋಡೆ, ಪುತ್ತೂರು ಗ್ರಾಮಾಂತರ ವ್ಯಾಪ್ತಿಯಲ್ಲಿ ನಡೆದ ದರೋಡೆ, ವಗ್ಗ ಮನೆ ದರೋಡೆ ಪ್ರಕರಣ, ವಿಟ್ಲ ಸಿಂಗಾರಿ ಬೀಡಿ ನಕಲಿ ಇಡಿ ಅಧಿಕಾರಿಗಳ ಸೋಗಿನಲ್ಲಿ ದರೋಡೆ, ಫರಂಗಿಪೇಟೆ ದಿಗಂತ್ ನಾಪತ್ತೆ ಪ್ರಕರಣ ಸೇರಿದಂತೆ ಇತರ ಗಂಭೀರ ಪ್ರಕರಣದಲ್ಲಿ ವಿಶೇಷ ತಂಡದ ಜತೆ ಪ್ರಮುಖ ಪಾತ್ರ ವಹಿಸಿ ಪ್ರಕರಣ ಭೇದಿಸಿ ಹಿರಿಯ ಅಧಿಕಾರಿಗಳ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ವಿಟ್ಲ | ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ; ಆರೋಪಿ ಬಂಧನಕ್ಕೆ ಆಗ್ರಹ

ನಗದು ಪುರಸ್ಕಾರ ಮತ್ತು ಪ್ರಶಸ್ತಿ: ಪ್ರವೀಣ್ ಅಪರಾಧ ಪತ್ತೆ ಪ್ರಕರಣದ ಕರ್ತವ್ಯಕ್ಕೆ ಸುಮಾರು 57 ನಗದು ಪುರಸ್ಕಾರ ಹಾಗೂ ಇತರ ಪ್ರಶಸ್ತಿಗಳು ಲಭಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...