ಬೆಳ್ತಂಗಡಿ | 100% ಫಲಿತಾಂಶದ ಗೀಳು; ಪದ್ಮುಂಜ ಸರ್ಕಾರಿ ಶಾಲೆಯಲ್ಲಿ ಎರಡು ಹೆಣ್ಣು ಮಕ್ಕಳಿಗೆ ಅನ್ಯಾಯ

Date:

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ಪದ್ಮುಂಜ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಿಂದ 2 ಹೆಣ್ಣುಮಕ್ಕಳನ್ನು ಅವಕಾಶ ವಂಚಿತರಾಗಿಸಿರುವ ಘಟನೆ ವರದಿಯಾಗಿದೆ.

ಖಾಸಗಿ ಶಾಲೆಗಳು 100% ಫಲಿತಾಂಶಕ್ಕಾಗಿ ಕಲಿಕೆಯಲ್ಲಿ ಹಿಂದಿರುವ ಮಕ್ಕಳನ್ನು ಒಂಬತ್ತನೇ ತರಗತಿಯಿಂದಲೇ ಬೇರೆ ಶಾಲೆಗೆ ವರ್ಗಾಯಿಸುತ್ತಿರುವ ಬಗ್ಗೆ ದೂರುಗಳು ಸಹಜವಾಗಿ ಬರುತ್ತಿರುವುದು ಹೊಸದೇನಲ್ಲ. ಆದರೆ, ಸರ್ಕಾರಿ ಶಾಲೆಯೊಂದು ಎಲ್ಲಾ ತರಹದ ಮಕ್ಕಳಿಗೂ ಸಮಾನ ಶಿಕ್ಷಣ ಹಾಗೂ ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಗೆ ಪೂರಕವಾಗಿ ನಡೆದುಬರುವುದರ ಬದಲಾಗಿ ಶೇ.100 ಎನ್ನುವ ಗೀಳಿಗೆ ಬಿದ್ದು ಎರಡು ಹೆಣ್ಣು ಮಕ್ಕಳನ್ನು ಕಲಿಕೆಯಲ್ಲಿ ಹಿಂದುಳಿದಿದ್ದಾರೆ ಎನ್ನುವ ಕಾರಣಕ್ಕೆ ಪರೀಕ್ಷೆಗೆ ಅವಕಾಶ ಕೊಡದೆ ಇರುವುದು ಅಕ್ಷಮ್ಯ ಅಪರಾಧವಾಗಿದೆ.

ಈ ಬಗ್ಗೆ ಖುದ್ದು ಅವಕಾಶ ವಂಚಿತಳಾಗಿರುವ ಹೆಣ್ಣು ಮಗಳು ಮಕ್ಕಳ ಹಕ್ಕುಗಳ ಆಯೋಗ, ಉಪನಿರ್ದೇಶಕರು, ಶಿಕ್ಷಣಾಧಿಕಾರಿ ಹಾಗೂ ಕರ್ನಾಟಕ ರಾಜ್ಯ ಎಸ್‌ಡಿಎಂಸಿ ಸಮನ್ವಯ ಕೇಂದ್ರ ವೇದಿಕೆಯ ಸಂಚಾಲಕರಿಗೆ ಪತ್ರ ಬರೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 03 29 at 9.42.02 AM

ಘಟನೆ ಕುರಿತು ಕೂಲಂಕಷವಾಗಿ ತನಿಖೆ ನಡೆಸಿ, ತಪ್ಪಿತಸ್ಥರಾದ ಶಿಕ್ಷಕರ ಮೇಲೆ ಕಾನೂನು ಕ್ರಮ ಕೈಗೊಳ್ಳುವುದರೊಂದಿಗೆ ಆ ಮಕ್ಕಳಿಗೆ ಇನ್ನುಳಿದ ಪರೀಕ್ಷೆ ಬರೆಯಲು ಕೂಡಲೇ ವ್ಯವಸ್ಥೆ ಮಾಡಿಕೊಡಲು ಕರ್ನಾಟಕ ರಾಜ್ಯ ಎಸ್‌ಡಿಎಂಸಿ ಸಮನ್ವಯ ಕೇಂದ್ರ ವೇದಿಕೆಯ ರಾಜ್ಯ ಸಂಚಾಲಕ ಮೊಯ್ದಿನ್ ಕುಟ್ಟಿ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಬೆಳ್ತಂಗಡಿ | ಹಿರಿಯ ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ

ಕಡಿಮೆ ದಾಖಲಾತಿ ನೆಪ ಹೇಳಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿರುವ ಸರ್ಕಾರ ಒಂದು ಕಡೆಯಾದರೆ.. ಇರುವ ಮಕ್ಕಳಿಗೂ ಸರಿಯಾದ ಶಿಕ್ಷಣ ಕೊಡದೆ ಅವರ ಮೂಲಭೂತ ಹಕ್ಕನ್ನೇ ಕಸಿದುಕೊಳ್ಳಲು ಮುಂದಾಗಿರುವ ಶಿಕ್ಷಕ ವರ್ಗ ಇನ್ನೊಂದೆಡೆ. ಕಲಿಕೆಯಲ್ಲಿ ಹಿಂದುಳಿದಿರುವ ಒಂದೇ ಕಾರಣಕ್ಕೆ ಪರೀಕ್ಷೆಯಿಂದ, ಶಾಲೆಯಿಂದ ಹೊರಗಿಡುವುದು ಎಷ್ಟು ಸರಿ? ಇರುವ ಮಕ್ಕಳೆಲ್ಲ ಶೇ.100ರಷ್ಟು ಫಲಿತಾಂಶ ಕೊಡುವವರಾದರೆ ಅಥವಾ ಕಲಿಕೆಯ ಸಾಮರ್ಥ್ಯ ಇರುವವರಾದರೆ ಶಿಕ್ಷಕರಾಗಿ ಇವರೇಕೆ ಬೇಕು ಎನ್ನುವ ಪ್ರಶ್ನೆಯನ್ನು ಪದ್ಮುಂಜ ಶಾಲೆಯ ಶಿಕ್ಷಕರು ಅವರಿಗವರೇ ಕೇಳಿಕೊಳ್ಳಬೇಕು.

WhatsApp Image 2025 03 29 at 9.42.03 AM 1
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...