ಬೆಳ್ತಂಗಡಿ| ಬಾಲಕಿಯ ಮಾನಭಂಗ ಯತ್ನ: ಬಿಜೆಪಿ ಮುಖಂಡನ ವಿರುದ್ಧ ಪೋಕ್ಸೋ ಕೇಸ್ ದಾಖಲು

Date:

ಅಪ್ರಾಪ್ತ ಬಾಲಕಿಯ ಮಾನಭಂಗಕ್ಕೆ ಯತ್ನಿಸಿದ ಆರೋಪದಲ್ಲಿ ಬಿಜೆಪಿ ಮುಖಂಡನ ವಿರುದ್ಧ ಪೋಕ್ಸೋ ಪ್ರಕರಣವನ್ನು ದಾಖಲಿಸಲಾಗಿದೆ.

ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಬೆಳ್ತಂಗಡಿ ಬಿಜೆಪಿ ಮಂಡಲದ ಎಸ್ಟಿ ಮೊರ್ಚಾದ ಅಧ್ಯಕ್ಷ, ಕಳೆಂಜ ಗ್ರಾಮದ ನಿವಾಸಿ ರಾಜೇಶ್.ಎಮ್.ಕೆ. ಆರೋಪಿ (33) ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಬಿಜೆಪಿ ಮುಖಂಡನ ವಿರುದ್ಧ ಜೂ.5ರಂದು ಮಾನಭಂಗ ಯತ್ನ, ಅವ್ಯಾಚ ಶಬ್ದಗಳಿಂದ ನಿಂದನೆ ಹಾಗೂ ಪೋಕ್ಸೋ ಅಡಿಯಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ಬೆಳ್ತಂಗಡಿ | ದಿನವಿಡೀ ಹೈಡ್ರಾಮಾದ ಬಳಿಕ ಪೊಲೀಸರಿಗೆ ಶರಣಾದ ಬಿಜೆಪಿ ಶಾಸಕ ಹರೀಶ್ ಪೂಂಜಾ

ಮತ್ತೊಂದೆಡೆ ಜೂ.4ರಂದು ರಾತ್ರಿ ಬಿಜೆಪಿ ಮುಖಂಡ ರಾಜೇಶ್‌ನ ಕೊಲೆ ಯತ್ನ ನಡೆಸಿದ ಆರೋಪ ಮಾಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಧರ್ಮಸ್ಥಳ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಕಳೆಂಜ ನಿವಾಸಿ ಕುಶಲಪ್ಪ ಗೌಡ (48) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜೇಶ್ ಮೇಲೆ ಕುಶಲಪ್ಪ ಗೌಡ ಕ್ಷುಲ್ಲಕ ಕಾರಣಕ್ಕೆ ಜಾತಿ‌ ನಿಂದನೆ ಮಾಡಿ, ಮರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ. ಚಿನ್ನ ದರೋಡೆ ಮಾಡಿದ ಪ್ರಕರಣವು ದಾಖಲಾಗಿದೆ.

ಆರೋಪಿ ಕುಶಲಪ್ಪ ಗೌಡನನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದು ಮಂಗಳೂರು ಸೆಷನ್ಸ್ ಕೋರ್ಟ್ ನ್ಯಾಯಧೀಶರ ಮನೆಗೆ ರಾತ್ರಿ ಹಾಜರುಪಡಿಸಿದ್ದಾರೆ. ನ್ಯಾಯಾಧೀಶರು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...