ಬೆಳ್ತಂಗಡಿ | ಹೊಸ ಸ್ಥಳದಲ್ಲಿ ಸಿಗದ ಅಸ್ಥಿಪಂಜರ; ತನಿಖೆ ಇನ್ನಷ್ಟು ತೀವ್ರ

Date:

ಧರ್ಮಸ್ಥಳ ಗ್ರಾಮದಲ್ಲಿ ಬಾಲಕಿ ಶವ ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ (ಆ.8) ಧರ್ಮಸ್ಥಳ ‌ಗ್ರಾಮದ ಬೊಳಿಯಾರ್ ಗೋಂಕ್ರತಾರ್ ಸಮೀಪದ ಹೊಸ ಸ್ಥಳದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಯಾವುದೇ ಅಸ್ಥಿಪಂಜರ ದೊರೆತಿಲ್ಲ‌ ಎಂದು ಉನ್ನತ ‌ಮೂಲಗಳು‌ ಖಚಿತ ಪಡಿಸಿವೆ.

ಇಂದು ನಡೆದ ಕಾರ್ಯಾಚರಣೆಯಲ್ಲಿ ಪುತ್ತೂರು ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್, ಎಸ್‌ಐಟಿ ಎಸ್.ಪಿ. ಜಿತೇಂದ್ರ ಕುಮಾ‌ರ್ ದಯಾಮ ಮತ್ತಿತರ ಅಧಿಕಾರಿಗಳು ಜತೆಯಲ್ಲಿದ್ದರು. ಈ ತಂಡದ ಜತೆಗೆ 10-15 ಕಾರ್ಮಿಕರು ಕಾಡಿನೊಳಗೆ ತೆರಳಿದ್ದಾರೆ. ಶಾಲಾ ಬ್ಯಾಗ್ ಸಮೇತ ಬಾಲಕಿ ಶವವನ್ನು ಹೂತಿಡಲಾಗಿದೆ ಎಂಬ ಆರೋಪದ ಬಗ್ಗೆ ಆಧಾರಿತವಾಗಿ, ಮಧ್ಯಾಹ್ನ 1 ಗಂಟೆಯಿಂದ ಸಂಜೆ 5.50 ರವರೆಗೆ ಶೋಧ ನಡೆಯಿತು. ಆದರೆ, ಈ‌ ಜಾಗದಲ್ಲಿ ಯಾವುದೇ ಕುರುಹುಗಳು ಪತ್ತೆಯಾಗಿಲ್ಲ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಧರ್ಮಸ್ಥಳ | ಯೂಟ್ಯೂಬರ್‌ಗಳ ಮೇಲೆ ಹಲ್ಲೆ; ಆರೋಪಿಗಳ ಬಂಧನಕ್ಕೆ ಪ್ರೆಸ್ ಕ್ಲಬ್ ಕೌನ್ಸಿಲ್ ಆಗ್ರಹ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೂರುದಾರ ಮೊದಲ ದಿನ ನೇತ್ರಾವತಿ ಸ್ನಾನ ಘಟ್ಟದ ಬಯಲಿನಲ್ಲಿ ತೋರಿಸಿದ್ದ 13ನೇ ಜಾಗದಲ್ಲಿ ಶೋಧ ಕಾರ್ಯ ಬಾಕಿ ಇದೆ. ಅಲ್ಲಿ ನೆಲ ಅಗೆಯುವ ಕಾರ್ಯ ಶುಕ್ರವಾರವೂ ನಡೆದಿಲ್ಲ.

ದೂರುದಾರ ಮೊದಲ ದಿನ ತೋರಿಸಿದ್ದ 13 ಜಾಗ ಹಾಗೂ ಅ ಬಳಿಕ ತೋರಿಸಿದ್ದ ಎರಡು ಜಾಗಗಳ ಪೈಕಿ ಇದುವರೆಗೆ 14 ಕಡೆ ಕಾಡಿನೊಳಗೆ ಶೋಧ ನಡೆಸಲಾಗಿದೆ. ದೂರುದಾರನ್ನು ನೇತ್ರಾವತಿ ನದಿ ಪಕ್ಕದ ಬಂಗ್ಲೆಗುಡ್ಡೆಯಲ್ಲಿ ತೋರಿಸಿದ್ದ 6ನೇ ಪಾಯಿಂಟ್‌ನಲ್ಲಿ ನೆಲದಡಿ ಮೃತದೇಹದ ಅವಶೇಷ ಪತ್ತೆಯಾಗಿದ್ದರೆ, ಆತ ಕಾಡಿನೊಳಗೆ ತೋರಿಸಿದ್ದ, ಗುರುತು ಮಾಡದ ಇನ್ನೊಂದು ಜಾಗದಲ್ಲಿ ಮೃತದೇಹದ ತಲೆಬುರುಡೆ, ಬೆನ್ನುಮೂಳೆ ಸೇರಿದಂತೆ 100ಕ್ಕೂ ಹೆಚ್ಚು ಮೂಳೆಗಳು ಸಿಕ್ಕಿದ್ದವು. ಇನ್ನೂ ಉಳಿದ 12 ಜಾಗಗಳಲ್ಲಿ ಯಾವುದೇ ಅಸ್ಥಿಪಂಜರ ಪತ್ತೆಯಾಗಿಲ್ಲ.

ಇದನ್ನೂ ಓದಿ: ಧರ್ಮಸ್ಥಳ ಪ್ರಕರಣ | ಮಾನಹಾನಿಕರ ವರದಿ ಪ್ರಸಾರ ತಡೆ ಕೋರಿ ಅರ್ಜಿ; ರಾಜ್ಯದ ವಿಚಾರಣಾ ನ್ಯಾಯಾಲಯಕ್ಕೆ ವರ್ಗಾಯಿಸಿದ ಸುಪ್ರೀಂ

ತನಿಖೆಗೆ ಹೊಸ ತಿರುವು

ಇದೇ ವೇಳೆ, ಇಚಿಲಂಪಾಡಿಯ ನಿವಾಸಿ ಜಯಂತ್ ಟಿ. ಎಂಬವರು ಬೆಳ್ತಂಗಡಿ ಎಸ್‌ಐಟಿ ಕಚೇರಿಗೆ ಆಗಮಿಸಿದ್ದು ಗಮನಾರ್ಹ. ಈ ಹಿಂದೆ ಅವರು ಧರ್ಮಸ್ಥಳದಲ್ಲಿ ಶವವನ್ನು ಹೂತು‌ ಹಾಕುತ್ತಿರುವುದನ್ನು‌ ನೋಡಿದ್ದೇನೆ ಎಂದು ಮಾಹಿತಿ‌ ನೀಡಿದ್ದರು. ಈ ಹಿನ್ನೆಲೆ ಅವರಿಗೆ ಎಸ್‌ಐಟಿ ಅಧಿಕಾರಿಗಳಿಂದ ಕಚೇರಿಗೆ ಬಂದು ಮಾಹಿತಿ ನೀಡುವಂತೆ ತಿಳಿಸಿದರು. ಅದರಂತೆ ಇಂದು ಅಧಿಕಾರಿಗಳು ಅವರಿಂದ ಹೆಚ್ಚಿನ ಮಾಹಿತಿ ಪಡೆದುಕೊಂಡಿದ್ದಾರೆ. ಜುಲೈ 4ರಂದು ಅವರು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...