ಬೆಳ್ತಂಗಡಿ | ಬೈಕ್ ಕಳ್ಳತನ ಆರೋಪ: ಇಬ್ಬರನ್ನು ಅರೆಬೆತ್ತಲೆಗೊಳಿಸಿ ಮರಕ್ಕೆ ಕಟ್ಟಿ ಹಲ್ಲೆ ನಡೆಸಿದ ಗುಂಪು

Date:

ಬೈಕ್ ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಇಬ್ಬರು ವ್ಯಕ್ತಿಗಳನ್ನು ಗುಂಪೊಂದು ಮರಕ್ಕೆ ಕಟ್ಟಿ‌ ಮನಬಂದಂತೆ ಥಳಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

ಹಲ್ಲೆಗೈದ ಘಟನೆಯು ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಮರೋಡಿ ಎಂಬಲ್ಲಿ ನಡೆದಿರುವುದಾಗಿ ವರದಿಯಾಗಿದ್ದು, ಮಂಗಳೂರಿನ ಬೆಂಗ್ರೆ ಕಸಬಾ ನಿವಾಸಿಗಳಾದ ಮೊಯ್ದಿನ್ ನಾಸಿರ್ ಹಾಗೂ ಅಬ್ದುಲ್ ಸಮದ್ ಹಲ್ಲೆಗೊಳಗಾದವರು ಎಂದು ಗುರುತಿಸಲಾಗಿದೆ.

ಈ ಸಂಬಂಧ ಹಲ್ಲೆಗೊಳಗಾದ ಮೊಯ್ದಿನ್ ನಾಸಿರ್ ಅವರ ಮಗಳು ನೀಡಿರುವ ದೂರಿನ ಆಧಾರದ ಮೇಲೆ ಸ್ಥಳೀಯರಾದ ಎಂಟು ಮಂದಿ ಹಾಗೂ ಇತರರ ವಿರುದ್ಧ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜೊತೆಗೆ, ಹಲ್ಲೆಗೊಳಗಾದವರ ಮೇಲೆ ಬೈಕ್ ಕಳವಿಗೆ ಯತ್ನಿಸಿದ ಬಗ್ಗೆಯೂ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎರಡೂ ಪ್ರಕರಣಗಳ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಘಟನೆಯ ವಿವರ:
ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ಪಳಾರಗೋಳಿ ಎಂಬಲ್ಲಿ ಜ.20ರಂದು ಬೆಳಗ್ಗಿನ ಜಾವ 2:30ರ ಸುಮಾರಿಗೆ ಈ ಘಟನೆ ನಡೆದಿದೆ. ಬೈಕ್ ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಮೊಯ್ದಿನ್ ನಾಸಿರ್ ಹಾಗೂ ಅಬ್ದುಲ್ ಸಮದ್‌ರನ್ನು ಸುಮಾರು 25-30 ಜನರಿದ್ದ ಗುಂಪೊಂದು ಹಿಡಿದು ಮರಕ್ಕೆ ಕಟ್ಟಿ ಥಳಿಸಿದೆ.

ಘಟನೆಯ ಮಾಹಿತಿ ಪಡೆದ ವೇಣೂರು ಪೊಲೀಸರು ಸ್ಥಳಕ್ಕೆ ಆಗಮಿಸಿ ಅವರಿಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದರು.

ಇಬ್ಬರನ್ನೂ ಮರಕ್ಕೆ ಹಗ್ಗದಲ್ಲಿ ಕಟ್ಟಿರುವ ಫೋಟೋ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...