ಬೇಲೂರು, ಹಳೆಬೀಡು, ಸೋಮನಾಥಪುರ ದೇವಾಲಯಕ್ಕೆ ‘ವಿಶ್ವ ಪಾರಂಪರಿಕ ತಾಣ’ ಮನ್ನಣೆ

Date:

ಹಾಸನ ಜಿಲ್ಲೆಯ ಬೇಲೂರು, ಹಳೆಬೀಡು ಹಾಗೂ ಮೈಸೂರು ಜಿಲ್ಲೆಯ ಸೋಮನಾಥಪುರದ ಹೊಯ್ಸಳರ ಕಾಲದ ದೇವಾಲಯಗಳನ್ನು ‘ವಿಶ್ವ ಪಾರಂಪರಿಕ ತಾಣ’ ಪಟ್ಟಿಗೆ ಸೇರಿಸಲು ಯುನೆಸ್ಕೋ ಅನುಮೋದನೆ ನೀಡಿದೆ ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ್ ತಿಳಿಸಿದ್ದಾರೆ.

ಸೋಮವಾರ ಸೌದಿ ಅರೆಬಿಯಾದ ರಿಯಾದ್‌ನಲ್ಲಿ ನಡೆದ ಯೂನೆಸ್ಕೋ ಸರ್ವ ಸದಸ್ಯರ ಸಭೆಯಲ್ಲಿ ಈ ಮೂರು ತಾಣಗಳನ್ನು ವಿಶ್ವ ಪಾರಂಪರಿಕ ಪಟ್ಟಿಗೆ ಸೇರಿಸಲು ಅನುಮೋದನೆ ನೀಡಲಾಗಿದೆ. ಈ ಬಗ್ಗೆ ಪ್ರತಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಚಿವರು, “ರಾಜ್ಯ ಸರ್ಕಾರದ ಸತತ ಪರಿಶ್ರಮದ ಫಲವಾಗಿ ರಾಜ್ಯದ ಮೂರು ದೇವಾಲಯಗಳ ಕಲೆ ಮತ್ತು ಪರಂಪರೆಯನ್ನು ಯುನೆಸ್ಕೋ ಗುರುತಿಸಿದೆ. ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸಿದೆ” ಎಂದಿದ್ದಾರೆ.

ಜಾಗತಿಕ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿರುವುದರಿಂದ ಈ ತಾಣಗಳಿಗೆ ಭೇಟಿ ನೀಡುವವರ ಸಂಖ್ಯೆ ಹೆಚ್ಚಾಗಲಿದೆ. ಇದರಿಂದ ಸ್ಥಳೀಯ ಕರಕುಶಲ ಮತ್ತು ಗುಡಿ ಕೈಗಾರಿಕೆ ಉತ್ಪನ್ನಗಳಿಗೆ ಮಾರುಕಟ್ಟೆ ದೊರೆಯಲಿದೆ. ಸ್ಥಳೀಯವಾಗಿ ಉದ್ಯೋಗ ಸೃಷ್ಟಿಗೆ ಅವಕಾಶ ಸಿಗಲಿದೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...