ಬೆಂಗಳೂರು | ಮಲ್ಲೇಶ್ವರಂ ಸರ್ಕಾರಿ ಶಾಲೆಯ 5 ಮಕ್ಕಳು ಜಾಗತಿಕ ರೋಬೋಟಿಕ್ಸ್ ಸ್ಪರ್ಧೆಗೆ ಆಯ್ಕೆ

Date:

ರಾಜ್ಯದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಲ್ಲಿ ನವೀನತೆಯ ಹಾದಿಯತ್ತ ಸಾಗುತ್ತಿರುವ ಶಕ್ತಿಯುತ ಬೆಳವಣಿಗೆಯ ಮತ್ತೊಂದು ಉದಾಹರಣೆಯಾಗಿ, ಮಲ್ಲೇಶ್ವರಂ 18ನೇ ಅಡ್ಡರಸ್ತೆಯ ಸರ್ಕಾರಿ ಪ್ರೌಢಶಾಲೆಯ ಅಟಲ್ ಟಿಂಕರಿಂಗ್ ಲ್ಯಾಬ್‌ನಲ್ಲಿ ಕಲಿಯುತ್ತಿರುವ 5 ಪ್ರತಿಭಾವಂತ ವಿದ್ಯಾರ್ಥಿಗಳು ಫಸ್ಟ್ ಗ್ಲೋಬಲ್ ಚಾಲೆಂಜ್ 2025ಕ್ಕೆ ಟೀಮ್ ಇಂಡಿಯಾಗೆ ಆಯ್ಕೆಯಾಗಿದ್ದಾರೆ.

ಅಮೆಜಾನ್ ಫ್ಯೂಚರ್ ಎಂಜಿನಿಯರ್ ಮೇಕರ್ ಸ್ಪೇಸ್ ಲ್ಯಾಬ್ನಲ್ಲಿ ತರಬೇತಿ ಪಡೆದಿರುವ ಈ ವಿದ್ಯಾರ್ಥಿಗಳು ಇದೇ ಅಕ್ಟೋಬರ್ 29 ರಿಂದ ನವೆಂಬರ್ 1 ರವರೆಗೆ ಉತ್ತರ ಅಮೆರಿಕಾದ ಪನಾಮಾದಲ್ಲಿ ನಡೆಯಲಿರುವ ಜಾಗತಿಕ ರೋಬೋಟಿಕ್ಸ್ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಮಲ್ಲೇಶ್ವರಂ ಸರ್ಕಾರಿ ಪದಿ ಪೂರ್ವ ಕಾಲೇಜಿನ 11ನೇ ತರಗತಿ ವಿದ್ಯಾರ್ಥಿಗಳಾದ ನಿಂಗರಾಜ್, ಪರಶುರಾಮ್ ಎಂ, ಅರ್ಜುನ್ ಕೆ ರಾಜ್ ಹಾಗೂ ಪ್ರೌಢಶಾಲಾ ವಿಭಾಗದ 10ನೇ ತರಗತಿಯ ವಿದ್ಯಾರ್ಥಿ ಗೌರೀಶ್‌ ಕೆ ಮತ್ತು 9ನೇ ತರಗತಿಯ ಜಿ ಎನ್‌ ಚಂದನ್‌ ರಾಜ್ ಈ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಬೆಂಗಳೂರು | ಜಿಬಿಎ ವ್ಯಾಪ್ತಿಯ 16.41 ಲಕ್ಷ ಮನೆಗಳ ಸಮೀಕ್ಷೆ ಪೂರ್ಣ

ಗ್ರಾಮೀಣ ಹಿನ್ನೆಲೆಯಿಂದ ಬಂದಿರುವ ಈ ವಿದ್ಯಾರ್ಥಿಗಳು ರೋಬೋಟಿಕ್ಸ್, ಕೋಡಿಂಗ್, ಎಲೆಕ್ಟ್ರಾನಿಕ್ಸ್ ಮತ್ತು ತಂಡದ ಕೆಲಸದಲ್ಲಿ ಅಸಾಧಾರಣ ಕೌಶಲ್ಯ ತೋರಿದ್ದಾರೆ.

“ಮಲ್ಲೇಶ್ವರಂ ಸರ್ಕಾರಿ ಪ್ರೌಢ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿಗಳು ‘ಫಸ್ಟ್ ಗ್ಲೋಬಲ್ ಚಾಲೆಂಜ್ 2025’ ಅಂತಾರಾಷ್ಟ್ರೀಯ ರೋಬೋಟಿಕ್ಸ್ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಈ ವಿದ್ಯಾರ್ಥಿಗಳೊಂದಿಗೆ ಮಾತನಾಡಿದಾಗ ಅವರ ಆತ್ಮವಿಶ್ವಾಸ, ಚಿಂತನೆ ಹಾಗೂ ತಾಂತ್ರಿಕ ಜ್ಞಾನದಿಂದ ನಾನು ಅತ್ಯಂತ ಪ್ರಭಾವಿತನಾದೆನು. ಸರ್ಕಾರಿ ಶಾಲೆಯ ತರಗತಿಯಿಂದ ಪ್ರಾರಂಭವಾದ ಇವರ ಪಯಣವು ಇಂದು ಜಾಗತಿಕ ವೇದಿಕೆಯಲ್ಲಿ ಕರ್ನಾಟಕದ ಹೆಸರನ್ನು ಎತ್ತಿ ಹಿಡಿಯುವ ಮಟ್ಟಕ್ಕೇರಿರುವುದು ನಮ್ಮ ರಾಜ್ಯದ ಶಿಕ್ಷಣ ಕ್ಷೇತ್ರದ ಬಲವರ್ಧಿತ ಪರಿಸರದ ಪ್ರತಿಬಿಂಬವಾಗಿದೆ. ಈ ಐದು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳು. ಪನಾಮಾದಲ್ಲಿ ನಡೆಯಲಿರುವ ಸ್ಪರ್ಧೆಯಲ್ಲಿ ಅವರು ಯಶಸ್ಸು ಸಾಧಿಸಿ, ವಿಶ್ವದ ಮುಂದೆಯೂ ಕರ್ನಾಟಕದ ಸರ್ಕಾರೀ ಶಾಲಾ ಶಿಕ್ಷಣದ ಕೀರ್ತಿಯನ್ನು ಬೆಳಗಲಿ ಎಂಬುದು ನನ್ನ ಹಾರೈಕೆ” ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...