ಬೆಂಗಳೂರು | ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತ ಆತ್ಮಹತ್ಯೆ

Date:

ಮಡಿಕೇರಿ ಮೂಲದ ಬಿಜೆಪಿ ಕಾರ್ಯಕರ್ತರೊಬ್ಬರು ಬೆಂಗಳೂರಿನ ನಾಗವಾರದ ಬಿಜೆಪಿ ಕಚೇರಿಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ವಿನಯ್ ಸೋಮಯ್ಯ (35) ಆತ್ಮಹತ್ಯೆ ಮಾಡಿಕೊಂಡ ಕಾರ್ಯಕರ್ತ.

ಸಾವಿಗೂ ಮುನ್ನ ಸಾಮಾಜಿಕ ಜಾಲತಾಣಗಳಲ್ಲಿ ಡೆತ್ ನೋಟ್ ಪೋಸ್ಟ್ ಮಾಡಿದ್ದು, ತನ್ನ ಮೇಲೆ ರಾಜಕೀಯ ಪ್ರೇರಿತ ಎಫ್‌ಐಆರ್‌ ದಾಖಲಾಗಿರುವುದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತಿಳಿಸಿದ್ದಾರೆ.

ಈ ಹಿಂದೆ ವಿನಯ್ ಸೋಮಯ್ಯ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರ ಎ ಎಸ್ ಪೊನ್ನಣ್ಣ ಬಗ್ಗೆ ಅಪಹಾಸ್ಯ ಮಾಡಿ ವಾಟ್ಸಪ್ ಪೋಸ್ಟ್ ಮಾಡಿದ್ದರು. ಈ ಪೋಸ್ಟ್‌ ವಿರುದ್ಧ ಕಾಂಗ್ರೆಸ್ ಮುಖಂಡ ತನ್ನೀರ ಮೈನಾ ಮಡಿಕೇರಿ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆ ವಿನಯ್ ಸೋಮಯ್ಯ ಅವರನ್ನು ಪೊಲೀಸರು ಎರಡು ತಿಂಗಳ ಹಿಂದೆ ಬಂಧಿಸಿದ್ದರು. ಬಂಧನದ ಬಳಿಕ ಬಹಳ ಮನನೊಂದಿದ್ದ ವಿನಯ್‌ ಇಂದು ಮುಂಜಾನೆ 4:30ರ ವೇಳೆಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮ್ಯಾನ್ ಪವರ್ ಸಪ್ಲೈ ಕಂಪನಿಯಲ್ಲಿ ಆಪರೇಷನ್ ಮ್ಯಾನೇಜರ್ ಆಗಿದ್ದ ವಿನಯ್‌ ಅವರಿಗೆ ಮದುವೆಯಾಗಿ ಮಗು ಇದ್ದು ಕುಟುಂಬ ಬೆಂಗಳೂರಿನಲ್ಲಿ ವಾಸವಾಗಿತ್ತು.

ಇದನ್ನೂ ಓದಿ: ಬೆಂಗಳೂರು | ಬಿಎಂಟಿಸಿ ಬಸ್‌ ಡಿಕ್ಕಿ; ಇಬ್ಬರ ಸಾವು

ಘಟನೆ ಸಂಬಂಧ ಬಿಜೆಪಿ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಸುವ ನಿರೀಕ್ಷೆ ಇದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...