ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

Date:

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ ಭಾಗದ ಪುನರ್ ಸ್ಥಾಪನೆ ಕೆಲಸವನ್ನು ತ್ವರಿತವಾಗಿ ಮುಗಿಸಲು ಬಿಬಿಎಂಪಿ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದಲ್ಲಿ ರಸ್ತೆ ಗುಂಡಿಗಳು, ರಸ್ತೆಗಳನ್ನು ಅಗೆದಿರುವ ಭಾಗದ ದುರಸ್ತಿ ಕಾರ್ಯದ ವಿಚಾರವಾಗಿ ಮಲ್ಲೇಶ್ವರಂ ಐಪಿಪಿ ಕೇಂದ್ರದಲ್ಲಿ ಇಂದು ನಡೆದ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.

ನಗರದಲ್ಲಿ ಜಲಮಂಡಳಿ ವತಿಯಿಂದ ಕಾವೇರಿ ನೀರಿನ ಸಂಪರ್ಕ ಹಾಗೂ ಒಳಚರಂಡಿ ಕಾಮಗಾರಿ ನಡೆಸಿರುವ ಕಡೆ, ರಸ್ತೆ ಕತ್ತರಿಸಿದ ಭಾಗದ ಪುನರ್ ಸ್ಥಾಪನೆ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಗರದ ರಸ್ತೆಗಳಲ್ಲಿ ಜಲಮಂಡಳಿ ವತಿಯಿಂದ ಕುಡಿಯುವ ನೀರಿನ ಲೀಕೇಜ್, ಒಳಚರಂಡಿ ಪೈನ್ ಲೈನ್ ಮೇಲ್ಬಾಗ ಕುಸಿದು ವಾಹನಗಳ ಸಂಚಾರಕ್ಕೆ ಸಮಸ್ಯೆ ಆಗುತ್ತಿರುವ ರಸ್ತೆಗಳಲ್ಲಿ, ದುರಸ್ತಿ ಕಾರ್ಯ ನಡೆಸಲು ಅಧಿಕಾರಿಗಳಿಗೆ ಸೂಚಿಸಿದರು.

WhatsApp Image 2025 08 18 at 6.50.01 PM

ನಗರದಲ್ಲಿ ಪ್ರಮುಖ ರಸ್ತೆಗಳಾದ ಆರ್ಟಿರಿಯಲ್ ಹಾಗೂ ಸಬ್ ಆರ್ಟಿರಿಯಲ್ ರಸ್ತೆಗಳು 1,344 ಕಿ.ಮೀ ಇದ್ದು, ಈ ಎಲ್ಲ ರಸ್ತೆಗಳಲ್ಲಿ ಆದ್ಯತೆ ಮೇರೆಗೆ ಹಾಟ್ ಮಿಕ್ಸ್, ಕೋಲ್ಡ್ ಮಿಕ್ಸ್ ಹಾಗೂ ಇಕೋಫಿಕ್ಸ್ ಬಳಸಿಕೊಂಡು ತ್ವರಿತಗತಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಲು ಸೂಚಿಸಿದರು.

ಮೆಟ್ರೋ ಕಾಮಗಾರಿ ನಡೆಯುತ್ತಿರುವ ಕಡೆ ರಸ್ತೆ ಗುಂಡಿಗಳು ಇದ್ದಲ್ಲಿ ಅದನ್ನು ಪರಿಶೀಲಿಸಿ ಕೂಡಲೆ ಮುಚ್ಚುವ ಕೆಲಸ ಮಾಡಬೇಕು. ಬೊಮ್ಮಸಂದ್ರ-ಸಿಲ್ಕ್ ಬೋರ್ಡ್ ರಸ್ತೆಯಲ್ಲಿ ಮೆಟ್ರೋ ಹಾಗೂ ಜಲಮಂಡಳಿ ಅಧಿಕಾರಿಗಳು ಜಂಟಿ ಪರಿಶೀಲನೆ ನಡೆಸಿ ರಸ್ತೆ ದುರಸ್ತಿ ಕಾರ್ಯ ನಡೆಸಲು ಅಧಿಕಾರಿಗಳಿಗೆ ಸೂಚಿಸಿದರು.

ಬೆಸ್ಕಾಂ, ಕೆಪಿಟಿಸಿಎಲ್, ಬಿಡಿಎ, ಗೇಲ್, ರಾಷ್ಟ್ರೀಯ ಹೆದ್ದಾರಿ ನಿಗಮ ಸೇರಿದಂತೆ ಇನ್ನಿತರೆ ಇಲಾಖೆಗಳ ವತಿಯಿಂದ ಎಲ್ಲೆಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಬೇಕು ಅದರ ಪಟ್ಟಿ ಪಡೆದುಕೊಂಡು ಕಾಲಮಿತಿಯೊಳಗಾಗಿ ರಸ್ತೆಗುಂಡಿಗಳನ್ನು ಮುಚ್ಚಲು ತಿಳಿಸಿದ ಕಮಿಷನರ್, ನಗರದಲ್ಲಿ ಸಂಚಾರ ವಿಭಾಗದಿಂದ ಹೊಸದಾಗಿ ಟ್ರಾಫಿಕ್ ಸಿಗ್ನಲ್ಸ್‌ಗಳನ್ನು ಅಳವಡಿಸಲಾಗುತ್ತಿದ್ದು, ಕೇಬಲ್ ಅಳವಡಿಸಲು ರಸ್ತೆಯ ಆ ಬದಿಯಿಂದ ಈ ಬದಿಗೆ ರಸ್ತೆ ಕತ್ತರಿಸಿರುತ್ತಾರೆ. ಆದರೆ ಸರಿಯಾಗಿ ದುರಸ್ತಿ ಕಾರ್ಯ ಮಾಡಿಲ್ಲ. ಈ ಸಂಬಂಧ ಎಲ್ಲೆಲ್ಲಿ ಸರಿಯಾಗಿ ಕೆಲಸ ಮಾಡಿಲ್ಲ ಅಂತಹ ಕಡೆ ಸರಿಪಡಿಸಲು ಸೂಚಿಸಲಾಯಿತು.

ರಸ್ತೆ ಗುಂಡಿಗಳನ್ನು ಮುಚ್ಚುವ ಸಲುವಾಗಿ ಗುತ್ತಿಗೆದಾರರೊಂದಿಗೆ ಸಭೆ ನಡೆಸಿ, ದೋಷಮುಕ್ತ ರಸ್ತೆ (ಡಿ.ಎಲ್.ಪಿ) ಗಳಲ್ಲಿ ತ್ವರಿತವಾಗಿ ರಸ್ತೆಗುಂಡಿಗಳನ್ನು ಮುಚ್ಚಬೇಕು. ಇನ್ನು ಸಮರೋಪಾದಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಸಲುವಾಗಿ ವೆಟ್ ಮಿಕ್ಸ್ ಹಾಕಿದ ಬಳಿಕ, ಅವಶ್ಯಕ ಬಿಟಮಿನ್ ಪಡೆದು ಗುಣಮಟ್ಟ ಕಾಪಾಡಿಕೊಂಡು ರಸ್ತೆ ಗುಂಡಿಗಳನ್ನು ಮುಚ್ಚಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದನ್ನು ಓದಿದ್ದೀರಾ? ‘ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌’ನಲ್ಲಿ ಸ್ಥಾನ ಪಡೆದ ಕರ್ನಾಟಕ ಸರ್ಕಾರದ ‘ಶಕ್ತಿ ಯೋಜನೆ’

ಈ ವೇಳೆ ಕೆಪಿಟಿಸಿಎಲ್ ನ ವ್ಯವಸ್ಥಾಪಕ ನಿರ್ದೇಶಕರಾದ ಪಂಕಜ್ ಕುಮಾರ್ ಪಾಂಡೆ, ವಲಯ ಮುಖ್ಯ ಅಭಿಯಂತರರು, ಸಂಚಾರ ಪೊಲೀಸ್ ವಿಭಾಗ ಬೆಸ್ಕಾಂ, ಜಲಮಂಡಳಿ, ಮೆಟ್ರೋ, ಲೋಕೋಪಯೋಗಿ ಇಲಾಖೆ, ಎನ್.ಹೆಚ್.ಎ.ಐ, ಗೇಲ್ ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...