ಬೆಂಗಳೂರು ನಗರದ ಕೆ.ಆರ್.ಪುರಂ ಪೊಲೀಸ್ ಠಾಣೆ ವ್ಯಾಪ್ತಿಯ ತ್ರಿವೇಣಿನಗರದಲ್ಲಿ ಅಡುಗೆಮನೆಯಲ್ಲಿ ಸಂಭವಿಸಿದ ಭಾರೀ ಸಿಲಿಂಡರ್ ಸ್ಫೋಟದಿಂದ ಓರ್ವ ಮಹಿಳೆ ಮೃತಪಟ್ಟಿದ್ದು, ಐದು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.
ಸ್ಫೋಟದ ತೀವ್ರತೆಗೆ ಮನೆ ಸಂಪೂರ್ಣವಾಗಿ ಧ್ವಂಸವಾಗಿದ್ದು, ಅಕ್ಕಪಕ್ಕದ ಮನೆಗಳಿಗೂ ಭಾರೀ ಹಾನಿಯಾಗಿದೆ. ಗಾಯಾಳುಗಳನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಕೆ.ಆರ್.ಪುರಂ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಜೊತೆಗೆ ಬಾಂಬ್ ಸ್ಕ್ವಾಡ್, ಡಾಗ್ ಸ್ಕ್ವಾಡ್ ಹಾಗೂ ಎಫ್‌ಎಸ್ಎಲ್ (ಸೋಕೊ) ತಂಡಗಳು ಸ್ಥಳಕ್ಕೆ ಭೇಟಿ ನೀಡಿ ತಾಂತ್ರಿಕ ಪರಿಶೀಲನೆ ನಡೆಸಿವೆ.
ಇದನ್ನೂ ಓದಿ: ಬೆಂಗಳೂರು | ಪಶ್ಚಿಮ ಬಂಗಾಳದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ
ಆದರೆ ಘಟನಾ ಸ್ಥಳದಲ್ಲಿ ಸಿಲಿಂಡರ್ ಹಾಗೂ ಸ್ಟೌವ್ ಅಥವಾ ಅದರ ಪೈಪ್‌ಗಳಿಗೆ ಯಾವುದೇ ಹಾನಿಯಾಗಿದೆ ಎಂಬುದು ಕಾಣಿಸದಿರುವುದರಿಂದ ಸ್ಫೋಟದ ನಿಜವಾದ ಕಾರಣ ಕುರಿತು ಹಲವು ಅನುಮಾನಗಳು ವ್ಯಕ್ತವಾಗಿವೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.





