ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಬಿ-ಖಾತಾ ನಿವೇಶನ ಮಾಲೀಕರಿಗೆ ಬಿ-ಖಾತಾದಿಂದ ಎ-ಖಾತಾಗೆ ಪರಿವರ್ತನೆ ಹಾಗೂ ಹೊಸ ನಿವೇಶನಗಳಿಗೂ ಎ-ಖಾತಾ ಲಭ್ಯವಾಗುವಂತೆ ಹೊಸದಾಗಿ ಜಾರಿಗೊಳಿಸಿರುವ ಆನ್‌ಲೈನ್ ವ್ಯವಸ್ಥೆಗೆ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ ಕೆ ಶಿವಕುಮಾರ್ ಇಂದು (ಅ.15) ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಶಾಸಕರುಗಳಾದ ವಿಜಯಾನಂದ ಕಾಶಪ್ಪನವರ್, ಶ್ರೀನಿವಾಸ್, ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿ ನಾಥ್, ಮುಖ್ಯ ಆಯುಕ್ತ ಮಹೇಶ್ವರ್ ರಾವ್, ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್, ಜಂಟಿ ಆಯುಕ್ತರಾದ ಲಕ್ಷ್ಮೀ ದೇವಿ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ: ಬೆಂಗಳೂರು | ಆದ್ಯತೆ ಮೇಲೆ ರಸ್ತೆ ಕಾಮಗಾರಿ ಕೈಗೊಳ್ಳಿ: ರಾಜೇಂದ್ರ ಚೋಳನ್





