ಬೆಂಗಳೂರು | ಟೈಕೋ ಎಲೆಕ್ಟ್ರಾನಿಕ್ಸ್ ಕಾರ್ಮಿಕರಿಗೆ ಕೆಲಸ ಕೊಡಲು ಆಗ್ರಹ

Date:

ಸ್ವಿಟ್ಜರ್ಲೆಂಡ್‌‌‌ ಮೂಲದ ಬಹು ರಾಷ್ಟ್ರೀ ಕಂಪೆನಿಗಳಲ್ಲಿ ಒಂದಾಗಿರುವ ಟಿಇ ಕನೆಕ್ಟಿವಿಟಿ ಇಂಡಿಯಾ ಪ್ರೈ. ಲಿಮಿಟೆಡ್‌ನಲ್ಲಿ ಕೆಲಸ ಮಾಡುತ್ತಿದ್ದ 200ಕ್ಕೂ ಹೆಚ್ಚಿನ ಖಾಯಂ ಕಾರ್ಮಿಕರಿಗೆ ಕೂಡಲೇ ಕೆಲಸ ಕೊಡಬೇಕು ಎಂದು ಟೈಕೋ ಎಲೆಕ್ಟ್ರಾನಿಕ್ಸ್ ಎಂಪ್ಲಾಯೀಸ್ ಯೂನಿಯನ್‌ನ ಕಾನೂನು ಸಲಹೆಗಾರ ಕೆ ಎ ಗಂಗಣ್ಣ ಆಗ್ರಹಿಸಿದ್ದಾರೆ.

ಬೆಂಗಳೂರು ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಸದರಿ ಕಂಪೆನಿಯಲ್ಲಿ 2011ರಲ್ಲಿ 607 ಜನ ಖಾಯಂ ಕಾರ್ಮಿಕರಿದ್ದು, 1500ಕ್ಕೂ ಹೆಚ್ಚು ಗುತ್ತಿಗೆ ಕಾರ್ಮಿಕರು, ಅಷ್ಟೇ ಪ್ರಮಾಣದಲ್ಲಿ ಮೇಲ್ವಿಚಾರಕರು, ಇಂಜಿನಿಯರ್ ಹಾಗೂ ಮೇಲ್ಮಟ್ಟದ ಅಧಿಕಾರಿಗಳು ಕೆಲಸ ಮಾಡುತ್ತಿದ್ದರು. ಇದರೊಂದಿಗೆ ನೂರಾರು ಕೋಟಿ ರೂ.ಗಳ ವಹಿವಾಟು ನಡೆಸುತ್ತಿದ್ದರು. ಕಂಪೆನಿಯು ವೇಗವಾಗಿ ಬೆಳೆಯುತ್ತಿದ್ದ ಸಂದರ್ಭದಲ್ಲಿ ಆಡಳಿತ ಮಂಡಳಿ ಸ್ವಯಂ ನಿವೃತ್ತಿ ಯೋಜನೆಯ ಹೆಸರಿನಲ್ಲಿ ಕಾರ್ಮಿಕರನ್ನು ಮನೆಗೆ ಕಳುಹಿಸಲು ಒತ್ತಾಯಿಸಲು ಆರಂಭಿಸಿತು. ಇದಕ್ಕೆ ಒಪ್ಪದೇ ಇದ್ದಾಗ 2017ರಲ್ಲಿ 607 ಜನ ಇದ್ದ ಕಾರ್ಮಿಕರನ್ನು 262ಕ್ಕೆ ಇಳಿಸಿತು ಮತ್ತು ಕಾರ್ಮಿಕರನ್ನು ಕಂಪೆನಿಯ ಒಳಗೆ ನಿರಾಕರಿಸಿತು. ಆದರೆ ಕಾರ್ಮಿಕರಿಗೆ ಸಂಬಳ ಕೊಡುತ್ತಾ ಬಂತು. 2024ರಲ್ಲಿ ಏಕಾಏಕಿ ಧಾರವಾಡಕ್ಕೆ ಸ್ಥಳಾಂತರಿಸಿ, ಕೆಲಸ ಬೇಕೆಂದರೆ ಅಲ್ಲಿಗೆ ಬರಬೇಕೆಂದು ಸೂಚಿಸಿತು” ಎಂದು ಅವರು ಮಾಹಿತಿ ನೀಡಿದರು.

“ವಾಸ್ತವದಲ್ಲಿ ಕಾರ್ಮಿಕರನ್ನು ಮನೆಗೆ ಕಳುಹಿಸುವ ದುರುದ್ದೇಶದಿಂದ ಆಡಳಿತ ಮಂಡಳಿ ಧಾರವಾಡದಲ್ಲಿ ಕೆಲಸ ಕೊಡುತ್ತೇವೆ ಎಂದು ನಂಬಿಸಿ ವಂಚಿಸಿದೆ. ಕಾರ್ಮಿಕರು ಬೆಂಗಳೂರಿನಲ್ಲಿಯೇ ಕೆಲಸ ಬೇಕೆಂದು ಒತ್ತಾಯಿಸಿ ಆಡಳಿತ ಮಂಡಳಿಗೆ ಪತ್ರ ವ್ಯವಹಾರ ಮಾಡಿದರು. ಇದಿರಂದ ಆಡಳಿತ ಮಂಡಳಿ ಮತ್ತೊಮ್ಮೆ ಕಾರ್ಮಿಕರನ್ನು ಮನೆಯಲ್ಲಿಯೇ ಕೂರಿಸಿತು. 2025ರ ಮೇ ತಿಂಗಳಿನಿಂದ 200ಕ್ಕೂ ಹೆಚ್ಚಿನ ಕಾರ್ಮಿಕರಿಗೆ ವೇತನ ನೀಡಿಲ್ಲ. ಇದರಿಂದ ಕಾರ್ಮಿಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೂಡಲೇ ಟಿಇ ಕನೆಕ್ಟಿವಿಟಿ ಕಂಪೆನಿಯವರು ಎಲ್ಲ ಕಾರ್ಮಿಕರಿಗೂ ಬಾಕಿ ವೇತನದ ಜೊತೆಗೆ ಕೆಲಸ ಕೊಡಬೇಕು” ಎಂದು ಗಂಗಣ್ಣ ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಬೆಂಗಳೂರು | ಕೇಂದ್ರದ ನೀತಿಗಳು, ರಾಜ್ಯ ಸರ್ಕಾರದ ಧೋರಣೆಗಳ ವಿರುದ್ಧ ಗುಡುಗಿದ ರೈತ-ಕಾರ್ಮಿಕರು

ಸುದ್ದಿಗೋಷ್ಠಿಯಲ್ಲಿ ಅಧ್ಯಕ್ಷ ನಾಗೇಶ್, ಪ್ರಧಾನ ಕಾರ್ಯದರ್ಶಿ ರಂಗನಾಥ ಬಿ, ಉಪಾಧ್ಯಕ್ಷ ಜಗದೀಶ್ ಎಸ್ ಕೆ, ಖಜಾಂಚಿ ಸಿದ್ದಲಿಂಗ ಸ್ವಾಮಿ ಕೆ, ಕಾರ್ಯದರ್ಶಿ ಮಹೇಶ್ ರಾಥೋಡ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...