ಬೆಂಗಳೂರು | ಆರೋಗ್ಯ ಸೇವಾ ಸಂಸ್ಥೆಯಿಂದ ‘ಪ್ರತಿಯೊಬ್ಬ ವೈದ್ಯನೂ ಸ್ವಯಂ ಸೇವಕ’ ಅಭಿಯಾನಕ್ಕೆ ಜು.1ರಂದು ಚಾಲನೆ

Date:

ಬಡವರಿಗೆ ಉಚಿತ ಆರೋಗ್ಯ ತಪಾಸಣೆ ನೀಡಬೇಕೆನ್ನುವ ಉದ್ದೇಶದೊಂದಿಗೆ ಆರೋಗ್ಯ ಸೇವಾ ಸಂಸ್ಥೆಯ ವತಿಯಿಂದ ಅಂತಾರಾಷ್ಟ್ರೀಯ ವೈದ್ಯರ ದಿನಾಚರಣೆ ಪ್ರಯುಕ್ತ ಜು.1 ರಂದು ಪ್ರತಿಯೊಬ್ಬ ವೈದ್ಯನೂ ಸ್ವಯಂ ಸೇವಕ ಎಂಬ ವಿನೂತನ ಅಭಿಯಾನಕ್ಕೆ ಚಾಲನೆ ನೀಡಲಾಗುವುದು ಎಂದು ಆರೋಗ್ಯ ಸೇವಾ ಸಂಸ್ಥಾಪಕ ಮತ್ತು ನಿರ್ದೇಶಕ ಡಾ.ದಯಾಪ್ರಸಾದ್ ಕುಲಕರ್ಣಿ ಹೇಳಿದ್ದಾರೆ.

ಮಂಗಳವಾರ ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ಆರೋಗ್ಯ ಸೇವಾ ಸಂಸ್ಥೆಯ ವತಿಯಿಂದ ಜು.1 ರಂದು ಅಂತಾರಾಷ್ಟ್ರೀಯ ವೈದ್ಯ ದಿನಾಚರಣೆ ಪ್ರಯುಕ್ತ ‘ಪ್ರತಿಯೊಬ್ಬ ವೈದ್ಯನೂ ಸ್ವಯಂ ಸೇವಕ’ ಎನ್ನುವ ಶೀರ್ಷಿಕೆಯಡಿಯಲ್ಲಿ ಈ ಅಭಿಯಾನವನ್ನು ರಾಜ್ಯದಲ್ಲಿ ಚಾಲನೆ ಮಾಡುತ್ತಿದ್ದೇವೆ. ದೇಶದಲ್ಲಿ 13 ಲಕ್ಷ ಜನ ಅಲೋಪತಿ ಮತ್ತು 5 ಆಯುಷ್ ವೈದ್ಯರು ಇದ್ದಾರೆ. ಅಂದು ಪ್ರತಿಯೊಬ್ಬ ಡಾಕ್ಟರ್ ತಿಂಗಳಲ್ಲಿ ಇಬ್ಬರ ರೋಗಿಗಳಿಗೆ ಉಚಿತ ಆರೋಗ್ಯ ತಪಾಸಣೆ ಮಾಡುತ್ತೇವೆಂದು ಅಭಿಯಾನದಲ್ಲಿ ಸಹಿ ಹಾಕಿದರೆ, ಪ್ರತಿ ತಿಂಗಳು 3 ಕೋಟಿಗೂ ಹೆಚ್ಚು ಜನರಿಗೆ ಅನುಕೂಲವಾಗುತ್ತದೆ. ಪ್ರತಿಯೊಬ್ಬ ವೈದ್ಯರೂ ಸ್ವಯಂ ಸೇವಕರಾಗಿ ಎಷ್ಟು ಸಾಧ್ಯವಾಗುತ್ತದೋ, ಅಷ್ಟು ಜನರಿಗೆ ಉಚಿತವಾಗಿ ಸೇವೆ ಸಲ್ಲಿಸಿ ಎಂದು ಅವರು ಕರೆ ನೀಡಿದರು.

ಆರೋಗ್ಯ ಸೇವಾ ಸಂಸ್ಥೆಯು ಹತ್ತು ವರ್ಷಗಳಿಂದ ಭಾರತದ ಹಲವು ರಾಜ್ಯಗಳಲ್ಲಿ 10 ಲಕ್ಷಕ್ಕೂ ಹೆಚ್ಚು ಜನರಿಗೆ ಸೇವೆ ಒದಗಿಸಿದೆ. ಅಮೆರಿಕ, ನೇಪಾಳ, ರುವಾಂಡಾ, ಮೆಕ್ಸಿಕೊ ಸೇರಿದಂತೆ ಇತರೆ ದೇಶಗಳಲ್ಲಿ ಬಡಸಮುದಾಯದ ಜನರಿಗೆ ಉಚಿತ ಆರೋಗ್ಯ ಸೇವೆಗಳನ್ನು ಒದಗಿಸುತ್ತಿದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಐಪಿಎಲ್‌ಗೆ ಇಂದು ಹೊಸ ಚಾಂಪಿಯನ್: ಟ್ರೋಫಿಗೆ ಮುತ್ತಿಕ್ಕಲಿರುವ 8ನೇ ತಂಡ – ಆರ್‌ಸಿಬಿ?

ಎಲ್ಲ ಬಡವರಿಗೂ ಆರೋಗ್ಯ ತಪಾಸಣೆ ಸಿಗಬೇಕೆನ್ನುವುದೇ ನಮ್ಮ ಗುರಿ. ಜನರು ಈ ಸೇವೆಯನ್ನು ಪಡೆದುಕೊಳ್ಳಲು ಮೊಬೈಲ್ ಅಪ್ಲಿಕೇಶನ್ ‘ಸೇವಾ ಗ್ಲೋಬಲ್ ಆಪ್’ ಡೌನ್‌ಲೋಡ್ ಮಾಡಿಕೊಂಡು ರಿಜಿಸ್ಟರ್ ಮಾಡಿಕೊಳ್ಳಬೇಕು ಅಥವಾ ಆರೋಗ್ಯ ಸೇವಾ ವೆಬ್‌ಸೈಟ್‌ನಲ್ಲಿ ರಿಜಿಸ್ಟರ್ ಮಾಡಿಕೊಂಡರೆ ನಮ್ಮ ಸಂಸ್ಥೆ ವತಿಯಿಂದ ವೈದ್ಯರನ್ನು ಸಂಪರ್ಕಿಸಿಕೊಡಲಾಗುವುದು ದಯಾಪ್ರಸಾದ್ ಕುಲಕರ್ಣಿ ಮಾಹಿತಿ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...