ಬೆಂಗಳೂರಿನ ಕಲಾಸಿಪಾಳ್ಯ ಬಸ್ ನಿಲ್ದಾಣದಲ್ಲಿ ಸ್ಫೋಟಕ ಪತ್ತೆಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಕಲಾಸಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೋಲಾರ ಮೂಲದ ಗಣೇಶ್, ಮುನಿರಾಜ್ ಮತ್ತು ಶಿವಕುಮಾರ್ ಬಂಧಿತರು.
ಬಂಧಿತರಿಂದ 22 ಜಿಲೆಟಿನ್ ಜೆಲ್, 30 ಡಿಟೋನೇಟರ್ಸ್ ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನೂ ಕೆಲವು ಆರೋಪಿಗಳ ಪತ್ತೆಗಾಗಿ ಪೊಲೀಸಋು ಹುಡುಕಾಟ ನಡೆಸಿದ್ದಾರೆ.
ಸ್ಫೋಟಕಗಳನ್ನು ಬ್ಯಾಗ್ನಲ್ಲಿ ತೆಗೆದುಕೊಂಡು ಬಂದಿದು, ನಂತರ ಬಸ್ ನಿಲ್ದಾಣದಲ್ಲಿರು ಶೌಚಾಲಯಕ್ಕೆ ತೆರಳಿದ್ದಾರೆ. ಹೊರ ಬಂದಾಗ ಅಲ್ಲಿ ಹೋಮ್ ಗಾರ್ಡ್ಸ್ ಇರುವುದನ್ನು ನೋಡಿ ಹೆದರಿ ಅಲ್ಲಿಯೇ ಬ್ಯಾಗ್ ಬಿಟ್ಟು ಹೋಗಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ಮಾಹಿತಿ ನೀಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಬೆಂಗಳೂರು | ಪ್ರಶಸ್ತಿ ಸಮಾರಂಭ: ಶ್ರೀರಂಗಪಟ್ಟಣ ರೋಟರಿ ಕ್ಲಬ್ ಪ್ರಶಸ್ತಿಗೆ ಭಾಜನ





