ಬೆಂಗಳೂರು | ಜೂ. 1ರಿಂದ 10ರವರೆಗೆ ‘ಬಕ್ರೀದ್‌ ವೇಳೆ ಸ್ವಚ್ಛತೆ ಕಾಪಾಡೋಣ’: ಜಾಗೃತಿ ಅಭಿಯಾನ

Date:

ಸಾಲಿಡಾರಿಟಿ ಯೂತ್ ಮೂವ್ಮೆಂಟ್ ವತಿಯಿಂದ ಜೂನ್ 1 ರಿಂದ 10ರವರೆಗೆ ‘ಬಕ್ರಿದ್‌ ವೇಳೆ ಸ್ವಚ್ಛತೆ ಕಾಪಾಡೋಣ’ ಎಂಬ ಶೀರ್ಷಿಕೆಯಡಿ ಬೆಂಗಳೂರಿನಲ್ಲಿ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ.

ಈ ಅಭಿಯಾನದ ಉದ್ದೇಶ ಜೂನ್ 5ರಂದು ಆಚರಿಸಲಾಗುವ ಪರಿಸರ ದಿನಾಚರಣೆಯ ಅಂಗವಾಗಿ, ಹಬ್ಬಗಳ ಆಚರಣೆಯ ಸಮಯದಲ್ಲಿ ಪರಿಸರಕ್ಕೆ ಹಾನಿಯಿಲ್ಲದ ರೀತಿಯಲ್ಲಿ ಹಾಗೂ ಸ್ವಚ್ಛತೆ ಕಾಪಾಡುತ್ತ ಹಬ್ಬವನ್ನು ಆಚರಿಸುವ ಸಂದೇಶವನ್ನು ಹಂಚಲಾಗುವುದು ಎಂದು ತಿಳಿಸಿದೆ.

ಅಭಿಯಾನದ ಮುಖ್ಯ ಅಂಶಗಳು: ಮಸೀದಿಗಳಲ್ಲಿ ಪೋಸ್ಟರ್‌ ಅಂಟಿಸುವುದು ಮತ್ತು ಜುಮಾ ಖುತ್ಬಾ ನಂತರ ಈ ಬಗ್ಗೆ ಘೋಷಣೆ ಮಾಡುವುದು, ಸಾಮಾಜಿಕ ಜಾಲತಾಣಗಳಲ್ಲಿ ಪರಿಸರ ಸಂರಕ್ಷಣೆ ಹಾಗೂ ಸ್ವಚ್ಛತೆಯ ಕುರಿತು ಪ್ರಭಾವಶಾಲಿ ವ್ಯಕ್ತಿಗಳ ಸಂದೇಶವಿರುವ ವಿಡಿಯೋ ಮತ್ತು ಪೋಸ್ಟರ್‌ಗಳನ್ನು ಹಂಚುವುದು, ಬಕ್ರೀದ್‌ ಸಮಯದಲ್ಲಿ ಬಿಬಿಎಂಪಿಯ ಸಹಕಾರದೊಂದಿಗೆ ತ್ಯಾಜ್ಯ ಸಂಗ್ರಹಣೆ ಹಾಗೂ ಸ್ವಚ್ಛತೆಯ ಕಾಯಕ, ದೇಶದಲ್ಲಿ ನಡೆಯುವಂತಹ ಎಲ್ಲ ಹಬ್ಬಗಳಲ್ಲಿ ಪರಿಸರ ಮತ್ತು ಸ್ವಚ್ಛತೆಗೆ ಪ್ರಾಮುಖ್ಯತೆ ನೀಡಬೇಕೆಂಬ ಸಂದೇಶವನ್ನು ಜನಸಾಮಾನ್ಯರಲ್ಲಿ ಹರಡುವ ಉದ್ದೇಶದಿಂದ ಈ ಅಭಿಯಾನ ಹಮ್ಮಿಕೊಳ್ಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ವಿಜಯಪುರ | ಪ್ರತಿಯೊಬ್ಬರೂ ಒಂದೊಂದು ಸಸಿ ನೆಟ್ಟು ಕಾಪಾಡಿ, ಪರಿಸರ ಸಂರಕ್ಷಿಸಿ: ಸಂಸದ ರಮೇಶ ಜಿಗಜಿಣಗಿ

ಈ ಅಭಿಯಾನದ ಪೋಸ್ಟರ್‌ ಬಿಡುಗಡೆ ಜೂನ್ 1ರಂದು ಬೆಂಗಳೂರಿನಲ್ಲಿ ನಡೆಯಿತು.
ಈ ಕಾರ್ಯಕ್ರಮದಲ್ಲಿ ಜೆಐಹೆಚ್ ರಾಷ್ಟ್ರೀಯ ಉಪಾಧ್ಯಕ್ಷ ಮೌಲಾನ ವಲಿವುಲ್ಲಾ ಸಯೀದಿ ಫಲಾಹಿ, ರಾಜ್ಯಾಧ್ಯಕ್ಷರ ಡಾ. ಸಾದ್ ಬೆಳ್ಗಾಮಿ ಹಾಗೂ ರಾಜ್ಯ ಕಾರ್ಯದರ್ಶಿಗಳು, ಸೋಲಿಡಾರಿಟಿ ಯೂತ್ ಮೂವ್ಮೆಂಟ್ ರಾಜ್ಯಾಧ್ಯಕ್ಷ ಡಾ.ನಸೀಮ್ ಅಹ್ಮದ್, ಬೆಂಗಳೂರು ನಗರಾಧ್ಯಕ್ಷ ಸುಹೈಲ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...