ಬೆಂಗಳೂರು | ಮದುವೆ ಹಿಂದಿನ ದಿನ ವರ ಪರಾರಿ; ಅರ್ಧ ಕೆಜಿ ಚಿನ್ನ, ಬೆಂಜ್‌ ಕಾರಿಗೆ ಬೇಡಿಕೆ

Date:

ವರದಕ್ಷಿಣೆ ನೀಡಿಲ್ಲವೆಂಬ ಕಾರಣಕ್ಕೆ ಮದುವೆ ಹಿಂದಿನ ದಿನ ವರ ಹಾಗೂ ಆತನ ಕುಟುಂಬ ಮದುವೆ ಮನೆಯಿಂದ ಪರಾರಿಯಾಗಿರುವ ಘಟನೆ ನಡೆದಿದೆ. ಹೀಗೆಂದು ಆರೋಪಿಸಿ ಯುವತಿಯ ತಂದೆ ಉಪ್ಪಾರಪೇಟೆ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದು, ಎಫ್‌ಐಆರ್‌ ದಾಖಲಾಗಿದೆ.

ವರ ಪ್ರೇಮ್‌ಚಂದ್‌ ಹಾಗೂ ವಧು ಫ್ರಾನ್ಸ್‌ನ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ ವರ್ಷ ಬೆಂಗಳೂರಿನಲ್ಲಿ ನಿಶ್ಚಿತಾರ್ಥವೂ ಆಗಿತ್ತು. ಮಾ.2ರಂದು ಮದುವೆ ದಿನ ನಿಗದಿಯಾಗಿತ್ತು. ಇದೆಲ್ಲದರ ನಡುವೆ ಫೆಬ್ರವರಿಯಲ್ಲಿ ಯುರೋಪಿಯನ್‌ ಸಂಸ್ಕೃತಿ ಎಂದು ಪುಸಲಾಯಿಸಿ ಯುವತಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮದುವೆ ಸಮಾರಂಭಕ್ಕಾಗಿ ಗಾಂಧಿನಗರದ ರೈಲ್ವೆ ಎನ್‌ಕ್ಲೇವ್‌ನ ನಂದಿ ಕ್ಲಬ್‌ ಬುಕ್‌ ಮಾಡಲಾಗಿತ್ತು. ಮಾ.1ರ ರಾತ್ರಿ ವರನ ಪೋಷಕರು ಯುವತಿಯ ತಂದೆಗೆ ಫೋನ್‌ ಮಾಡಿ ₹50 ಲಕ್ಷ ನಗದು, ಅರ್ಧ ಕೆಜಿ ಚಿನ್ನ ಹಾಗೂ ಬೆಂಜ್‌ ಕಾರನ್ನು ವರದಕ್ಕಿಣೆಯಾಗಿ ಕೊಡುವಂತೆ ಬೇಡಿಕೆ ಇಟ್ಟಿದ್ದರು ಎಂದು ಯುವತಿಯ ತಂದೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಬೆಂಗಳೂರು | ಕೆಪಿಸಿಎಲ್ 622 ಹುದ್ದೆಗಳಿಗೆ ಪರೀಕ್ಷೆ ನಡೆದರೂ ನೇಮಕಾತಿಯಾಗಿಲ್ಲ; ಅರ್ಹರಿಗೆ ನೇಮಕಾತಿ ಪತ್ರ ನೀಡಲು ಆಗ್ರಹ

ಈಗಾಗಲೇ ಮದುವೆಗಾಗಿ ₹25 ಖರ್ಚಾಗಿದೆ. ಮತ್ತೂ ಕೊಡಲು ಸಾಧ್ಯವಿಲ್ಲ ಎಂದು ಯುವತಿಯ ತಂದೆ ಹೇಳಿದ್ದಾರೆ. ಆಗ ವರ ಹಾಗೂ ಆತನ ಪೋಷಕರು ರಾತ್ರೋರಾತ್ರಿ ಮದುವೆ ಮನೆಯಿಂದ ಪರಾರಿಯಾಗಿದ್ದಾರೆ ಎಂದು ಹೇಳಿದ್ದಾರೆ.

ವಧುವಿನ ತಂದೆಯ ದೂರು ಆಧರಿಸಿ ಪ್ರೇಮ್‌ಚಂದ್‌, ಆತನ ತಂದೆ ಶಿವಕುಮಾರ್‌, ತಾಯಿ ರಾಧಾ ಮತ್ತು ಸ್ನೇಹಿತ ಮಂಜು ಭರತ್‌ ವಿರುದ್ಧ ವಂಚನೆ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...