ಬೆಂಗಳೂರಿಗೇ ನೀರಿಲ್ಲ – ತಮಿಳುನಾಡಿಗೆ ಹೇಗೆ ಕೊಡೋದು: ಸಚಿವ ಪರಮೇಶ್ವರ್

Date:

ಮುಂಗಾರು ವಿಫಲವಾಗಿದೆ. ನೀರಿನ ಸಮಸ್ಯೆಯಿದೆ. ಬೆಂಗಳೂರಿಗೇ ಕುಡಿಯಲು ನೀರಿಲ್ಲ. ಇಂತಹ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಬಿಡಲು ಹೇಗೆ ಸಾಧ್ಯ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಪ್ರಶ್ನಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, “ಶುಕ್ರವಾರ ಸುಪ್ರೀಂ ಕೋರ್ಟ್‌ನಲ್ಲಿ ಕಾವೇರಿ ನೀರಿನ ಹಂಚಿಕೆ ಬಗ್ಗೆ ವಿಚಾರಣೆ ನಡೆಯಲಿದೆ. ನೀರಿಲ್ಲದೆ ಇದ್ದರೂ ಕೋರ್ಟ್‌ನಲ್ಲಿ ದಾವೆ ಹೂಡುತ್ತಾರೆ. ಜಲಾಶಯದಲ್ಲಿಯೇ ನೀರು ಕಡಿಮೆ ಇರುವಾಗ, ತಮಿಳುನಾಡಿಗೆ ಹೇಗೆ ನೀರು ಬಿಡೋದು” ಎಂದರು.

“ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಐದು ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಲು ಸೂಚಿಸಿದೆ. ಅಷ್ಟೊಂದು ಪ್ರಮಾಣದ ನೀರು ಹರಿಸಲು ಸಾಧ್ಯವಿಲ್ಲವೆಂದು ಹೇಳಿದ್ದೇವೆ. ಹರಿಸಲೇಬೇಕು ಎಂದರೆ ಸರ್ವಪಕ್ಷಗಳ ನಿಯೋಗ ಕರೆದುಕೋಂಡು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡುತ್ತೇವೆ” ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...