ಬೆಂಗಳೂರಿನ ನ್ಯಾಷನಲ್ ಕೋ-ಆಪರೇಟಿವ್ ಬ್ಯಾಂಕ್‌ಗೆ ಆರ್‍‌ಬಿಐನಿಂದ ಆರು ತಿಂಗಳ ನಿರ್ಬಂಧ : ಆತಂಕದಲ್ಲಿ ಗ್ರಾಹಕರು

Date:

  • ಬೆಂಗಳೂರು, ಮೈಸೂರಿನಲ್ಲಿ ಒಟ್ಟು 13 ಶಾಖೆ ಹೊಂದಿರುವ ಬ್ಯಾಂಕ್
  • ಬ್ಯಾಂಕ್‌ನ ಪರವಾನಗಿ ರದ್ದುಗೊಳಿಸಿಲ್ಲ ಎಂದು ಸ್ಪಷ್ಟಪಡಿಸಿದ ಆರ್‍‌ಬಿಐ

ಸಹಕಾರ ಬ್ಯಾಂಕಿಂಗ್ ಕ್ಷೇತ್ರದಲ್ಲಿ ತನ್ನದೇ ಹೆಸರು ಗಳಿಸಿಕೊಂಡಿದ್ದ ಬೆಂಗಳೂರಿನ ‘ನ್ಯಾಷನಲ್ ಕೋ ಆಪರೇಟಿವ್ ಬ್ಯಾಂಕ್’ ವ್ಯವಹಾರಕ್ಕೆ ನಿರ್ಬಂಧ ಹೇರಿ, ಆರು ತಿಂಗಳ ಕಾಲಾವಕಾಶ ನೀಡಲಾಗಿದೆ ಎಂದು ಆರ್‌ಬಿಐ ಘೋಷಿಸಿದೆ.

ಈ ಬಗ್ಗೆ ಜುಲೈ 24ರಂದು ಹೇಳಿಕೆ ಹೊರಡಿಸಿರುವ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ, ‘ಆರ್ಥಿಕ ಮುಗ್ಗಟ್ಟಿನಲ್ಲಿರುವ ಬೆಂಗಳೂರು ನ್ಯಾಷನಲ್ ಕೋ ಆಪರೇಟಿವ್ ಬ್ಯಾಂಕ್ ಸಾಲ ನೀಡುವಂತಿಲ್ಲ. ಅಲ್ಲದೇ, ಗ್ರಾಹಕರಿಂದ ಹಣ ಜಮಾವಣೆ ಮಾಡಲು ಅನುಮತಿ ಪಡೆಯಬೇಕು. ಸದ್ಯ ಗ್ರಾಹಕರು 50,000 ರೂಪಾಯಿಯವರೆಗೆ ಮಾತ್ರ ಹಣ ಹಿಂಪಡೆಯಲು ಸಾಧ್ಯ’ ಎಂದು ತಿಳಿಸಿದೆ.

ಆರ್‍‌ಬಿಐ ಹೇಳಿಕೆ ಬಂದಿರುವ ಬೆನ್ನಲ್ಲೇ ಬ್ಯಾಂಕ್ ಗ್ರಾಹಕರ ಆತಂಕ ಹೆಚ್ಚಿಸಿದೆ. ವಿಷಯ ತಿಳಿದ ಹಿನ್ನೆಲೆಯಲ್ಲಿ ಬ್ಯಾಂಕ್ ಗ್ರಾಹಕರು ತಮ್ಮ ಹಣ ಕಳೆದುಕೊಳ್ಳುವ ಭೀತಿಯಲ್ಲಿ ಶಾಖೆಗಳಲ್ಲಿ ಸೇರತೊಡಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರು, ಮೈಸೂರಿನಲ್ಲಿ ಒಟ್ಟು 13 ಶಾಖೆಗಳನ್ನು ಹೊಂದಿರುವ ನ್ಯಾಷನಲ್ ಕೋ ಆಪರೇಟಿವ್ ಬ್ಯಾಂಕ್ ಲಕ್ಷಾಂತರ ಗ್ರಾಹಕರನ್ನು ಹೊಂದಿದೆ. ಈ ಬ್ಯಾಂಕ್‌ನಲ್ಲಿ ಹೂಡಿಕೆ ಮಾಡಿದ ಗ್ರಾಹಕರು ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಗ್ರಾಹಕರು 5 ಲಕ್ಷ ರೂಪಾಯಿವರೆಗೆ ವಿಮಾ ಹಣ ಪಡೆಯಲು ಅವಕಾಶ ನೀಡಿರುವ ಆರ್‍‌ಬಿಐ, ಬ್ಯಾಂಕಿನ ಪರವಾನಗಿಯನ್ನು ರದ್ದು ಮಾಡಿಲ್ಲ ಎಂದು ಸ್ಪಷ್ಟಪಡಿಸಿದೆ.

ಇದೇ ವೇಳೆ ನ್ಯಾಷನಲ್ ಕೋ ಆಪರೇಟಿವ್ ಬ್ಯಾಂಕ್ ವ್ಯವಹಾರ ಮುಂದುವರಿಸಲು ಅವಕಾಶ ನೀಡಿದ್ದು, ಬ್ಯಾಂಕ್‌ನ ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಕ್ರಮ ಕೈಗೊಳ್ಳಲಿದೆ. ಈಗಿನ ನಿರ್ದೇಶನವು ಆರು ತಿಂಗಳು ಚಾಲ್ತಿಯಲ್ಲಿರಲಿದೆ ಎಂದು ಆರ್‍‌ಬಿಐ ತಿಳಿಸಿದೆ.

ಗ್ರಾಹಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿಕೆಯಲ್ಲಿ ತಿಳಿಸಿರುವ ಆರ್‌ಬಿಐ, ನ್ಯಾಷನಲ್ ಕೋ ಆಪರೇಟಿವ್ ಬ್ಯಾಂಕ್ ಮುಂದಿನ ಎಲ್ಲ ವ್ಯವಹಾರ ಆರ್‌ಬಿಐ ನಿಗಾದಲ್ಲಿ ನಡೆಯಲಿದೆ. ಆರ್‌ಬಿಐ ಸೂಚನೆಯಂತೆ ಎಲ್ಲ ವ್ಯವಹಾರಗಳನ್ನು ಕೋ ಆಪರೇಟಿವ್ ಬ್ಯಾಂಕ್ ಮಾಡಲಿದೆ ಎಂದೂ ಕೂಡ ಮಾಹಿತಿ ನೀಡಿದೆ.

400 ಕೋಟಿ ಸಾಲ ವಸೂಲಿ ಬಾಕಿ
ಹೆಸರು ಹೇಳಲಿಚ್ಛಿಸದ ನ್ಯಾಷನಲ್ ಕೋ-ಆಪರೇಟಿವ್ ಬ್ಯಾಂಕ್‌ನ ಗ್ರಾಹಕರೊಬ್ಬರು ಈ ದಿನ.ಕಾಮ್‌ ಜೊತೆಗೆ ಮಾತನಾಡಿದ್ದು, ‘ಈಗಾಗಲೇ ಬ್ಯಾಂಕಿನಿಂದ ಸಾಲ ಪಡೆದವರು ಸರಿಯಾದ ಸಮಯಕ್ಕೆ ನೀಡುತ್ತಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸುಮಾರು 400 ಕೋಟಿ ಸಾಲ ವಸೂಲಿ ಬಾಕಿ ಇದೆ’ ಎಂದು ತಿಳಿಸಿರುವುದಾಗಿ ಮಾಹಿತಿ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...