ಬೆಂಗಳೂರು | ನ.4ರಂದು ಬ್ಯಾರಿಸ್ ಸೆಂಟ್ರಲ್ ಕಮಿಟಿಯ ನೂತನ ಕಚೇರಿ ಉದ್ಘಾಟನೆ, ಸಾಧಕರಿಗೆ ಸನ್ಮಾನ

Date:

ದೂರದ ಕರಾವಳಿಯಿಂದ ಬೆಂಗಳೂರಿಗೆ ಉದ್ಯೋಗ ಮತ್ತು ವಿವಿಧ ಉದ್ದೇಶಗಳಿಗಾಗಿ ಬಂದು ನೆಲೆಸಿರುವ ಬ್ಯಾರಿ ಸಮುದಾಯದ ಸರ್ವತೋಮುಖ ಅಭಿವೃದ್ಧಿಯ ದೃಷ್ಟಿಕೋನದಿಂದ ಸ್ಥಾಪಿಸಲಾಗಿರುವ ಬ್ಯಾರಿಸ್ ಸೆಂಟ್ರಲ್ ಕಮಿಟಿಯ ನೂತನ ಕಚೇರಿ ಉದ್ಘಾಟನೆ, ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ನವೆಂಬರ್ 4ರಂದು ಸಂಜೆ 5ಕ್ಕೆ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಸಂಘಟನೆಯ ಅಧ್ಯಕ್ಷರಾದ ಶಬೀರ್ ಬ್ರಿಗೇಡ್ ತಿಳಿಸಿದ್ದಾರೆ.

ಮಂಗಳವಾರ ಸಂಜೆ 5ಕ್ಕೆ ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿರುವ ಹಿಂದೂಸ್ತಾನ್ ಕಾಂಪ್ಲೆಕ್ಲ್‌ನಲ್ಲಿ ಕಚೇರಿಯು ಉದ್ಘಾಟನೆಗೊಳ್ಳಲಿದ್ದು, ರಾಜ್ಯದ ವಿಧಾನಸಭಾ ಸ್ಪೀಕರ್ ಯು. ಟಿ. ಖಾದರ್ ಅವರು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಸಚಿವ ದಿನೇಶ್ ಗುಂಡೂರಾವ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಇತ್ತೀಚೆಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಬ್ಯಾರಿ ಸಮುದಾಯ ಅನಿವಾಸಿ ಉದ್ಯಮಿ ಝಕರಿಯಾ ಜೋಕಟ್ಟೆ, ಹಿರಿಯ ಪತ್ರಕರ್ತರಾದ ಬಿ ಎಂ ಹನೀಫ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕಗೊಂಡಿರುವ ಎಂ ಎ ಗಫೂರ್ ಹಾಗೂ ಕಾರ್ಮಿಕರ ಕನಿಷ್ಠ ವೇತನ ಮಂಡಳಿಯ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಶಾಹಿದ್ ತೆಕ್ಕಿಲ್ ಅವರನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದು ಶಬೀರ್ ಬ್ರಿಗೇಡ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಪೊಲೀಸ್, ಸರ್ಕಾರಿ ಸೇವೆ ಸೇರ್ಪಡೆಗೆ ತರಬೇತಿ ಯೋಜನೆ: ಕರಾವಳಿಗರು ಮನಸ್ಸು ಮಾಡುತ್ತಿಲ್ಲವೇಕೆ?

ಕಾರ್ಯಕ್ರಮಕ್ಕೆ ವಿಶೇಷ ಆಹ್ವಾನಿತರಾಗಿ ಬೆಂಗಳೂರಿನ ಬ್ಯಾರಿ ಸಮುದಾಯದ ಹಿರಿಯ ವಕೀಲರಾದ ಕಮಾಲ್, ಅಡ್ವೊಕೇಟ್ ಮುಝಫ್ಫರ್ ಅಹ್ಮದ್, ಅಡ್ವೊಕೇಟ್ ಲತೀಫ್, ಬೆಂಗಳೂರಿನ ಸುಲ್ತಾನ್ ಗೋಲ್ಡ್ ನಿರ್ದೇಶಕರಾದ ರಿಯಾಝ್, ಎಂಪೈರ್ ಗ್ರೂಪ್ ಎಂ ಡಿ ಶಾಕಿರ್, ಎಂಫಾರ್ ಕನ್ಸ್‌ಸ್ಟ್ರಕ್ಷನ್ಸ್ ಮ್ಯಾನನೇಜಿಂಗ್ ಡೈರೆಕ್ಟರ್ ರಿಝ್ವಾನ್, ಡ್ರೀಮ್ ಡೀಲ್ ಗ್ರೂಪ್‌ನ ಎಂ ಡಿ ಸುಹೇಲ್, ಎಕ್ಸ್ ಟೆನ್ ಗ್ರೂಪ್‌ನ ಮಾಲೀಕರಾದ ದಾವೂದ್, ಸೀಮಾ ಎಂಟರ್ ಪ್ರೈಸಸ್‌ನ ಮುಖ್ಯಸ್ಥರಾದ ಆರಿಫ್, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಉಮರ್ ಯು ಹೆಚ್, ಯುವ ರಾಜಕೀಯ ಮುಖಂಡ ಸುಹೈಲ್ ಕಂದಕ್, ಬ್ಯಾರಿಸ್ ಸೆಂಟ್ರಲ್ ಕಮಿಟಿಯ ಸಲಹಾ ಸಮಿತಿ ಸದಸ್ಯರಾದ ಹನೀಫ್ ಖಾನ್ ಕೊಡಾಜೆ, ಹ್ಯಾಮರ್ & ನೇಲ್‌ನ ಎಂಡಿ ಸರ್ಫರಾಝ್, ಹಿಂದುಸ್ತಾನ್ ಹೋಟೆಲ್ ಮಾಲೀಕರಾದ ಉಮೈರ್ ಅವರು ಭಾಗವಹಿಸಲಿದ್ದಾರೆ ಎಂದು ಬ್ಯಾರಿಸ್ ಸೆಂಟ್ರಲ್ ಕಮಿಟಿಯ ಅಧ್ಯಕ್ಷರಾದ ಶಬೀರ್ ಬ್ರಿಗೇಡ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...