ಬೆಂಗಳೂರು | ಹೊಸ ಕೌಶಲ್ಯಾಭಿವೃದ್ಧಿ ನೀತಿ 2025–32ಗೆ ಅನುಮೋದನೆ: ಸಚಿವ ಪ್ರಿಯಾಂಕ್‌ ಖರ್ಗೆ

Date:

ಕರ್ನಾಟಕ ಸರ್ಕಾರವು ಕರ್ನಾಟಕ ರಾಜ್ಯ ಕೌಶಲ್ಯಾಭಿವೃದ್ಧಿ ನೀತಿ 2025–32ಕ್ಕೆ ಅನುಮೋದನೆ ನೀಡಿದ್ದು, ಇದು ಮಾಹಿತಿ ಹಾಗೂ ಜೈವಿಕ ತಂತ್ರಜ್ಞಾನ ಇಲಾಖೆಯ ಮಹತ್ವಾಕಾಂಕ್ಷಿ ಕಾರ್ಯಕ್ರಮವಾದ ‘ನಿಪುಣ’ ದೃಷ್ಟಿಕೋನಕ್ಕೆ ಪೂರಕವಾಗಿ, ಅತಿದೊಡ್ಡ ಕೌಶಲ್ಯ, ಉನ್ನತೀಕರಣ ಮತ್ತು ಮರುಕೌಶಲ್ಯ ಯೋಜನೆಯಾಗಿದೆ ಎಂದು ಗ್ರಾಮೀಣಾಭಿವೃದ್ಧಿ & ಪಂಚಾಯತ್‌ ರಾಜ್‌ ಹಾಗೂ ಮಾಹಿತಿ & ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಏಳು ವರ್ಷಗಳ ಮಾರ್ಗಸೂಚಿ ಮತ್ತು ರೂ. 4,432.5 ಕೋಟಿ ವೆಚ್ಚದೊಂದಿಗೆ ಈ ನೀತಿಯು ಕರ್ನಾಟಕವನ್ನು ಕೌಶಲ್ಯಪೂರ್ಣ ಕಾರ್ಯಪಡೆಯ ಪ್ರಮುಖ ಕೇಂದ್ರವನ್ನಾಗಿ ಮಾಡುವುದು ಹಾಗೂ 2032ರ ವೇಳೆಗೆ ರಾಜ್ಯದ 1 ಟ್ರಿಲಿಯನ್ ಡಾಲರ್‌ ಆರ್ಥಿಕ ಲಕ್ಷ್ಯವನ್ನು ಸಾಧಿಸುವ ಗುರಿ ಹೊಂದಿದೆ. ಕರ್ನಾಟಕವು ಭಾರತದ ತಂತ್ರಜ್ಞಾನ ಮತ್ತು ಹೂಡಿಕೆ ರಾಜಧಾನಿ ಮಾತ್ರವಲ್ಲ, ಇದು ಕೌಶಲ್ಯ ಮತ್ತು ಜ್ಞಾನ ರಾಜಧಾನಿಯೂ ಆಗಿದೆ ಹಾಗೂ ನಮ್ಮ ಜನರನ್ನು ದೊಡ್ಡ ಮಟ್ಟದಲ್ಲಿ ಬೆಂಬಲಿಸುವ ಮೂಲಕ ಈ ನಾಯಕತ್ವವನ್ನು ಮುಂದುವರಿಸಲು ನಾವು ಉದ್ದೇಶಿಸಲಾಗಿದೆ. ಬದಲಾಗುತ್ತಿರುವ ತಂತ್ರಜ್ಞಾನಗಳು ಮತ್ತು ಉದ್ಯಮದ ಅಗತ್ಯತೆಗಳನ್ನು ಈ ನೀತಿಯು ಪರಿಹರಿಸುತ್ತದೆ. ಕ್ರೆಡಿಟ್ ಆಧಾರಿತ ಕಾರ್ಯಕ್ರಮಗಳ ಮೂಲಕ ಶಾಲೆಗಳು, ಉನ್ನತ ಶಿಕ್ಷಣ ಹಾಗೂ ವಿಶ್ವವಿದ್ಯಾಲಯಗಳಲ್ಲಿ ವೃತ್ತಿಪರ ಶಿಕ್ಷಣವನ್ನು ಸಂಯೋಜಿಸುತ್ತದೆ ಹಾಗೂ ಅಪ್ರೆಂಟಿಸ್‌ಶಿಪ್‌ಗಳು ಮತ್ತು ತರಬೇತಿಯ ಮೂಲಕ ಉದ್ಯಮ ಸಹಯೋಗವನ್ನು ಬಲಪಡಿಸುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು | ವಿಶೇಷ ತರಗತಿಗೆಂದು ವಿದ್ಯಾರ್ಥಿನಿಯನ್ನು ಮನೆಗೆ ಕರೆಸಿ ಕಿರುಕುಳ; ಪ್ರಾಧ್ಯಾಪಕನ ಬಂಧನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರ್ನಾಟಕದ ಪ್ರತಿಯೊಬ್ಬ ಯುವಜನರು ನಾಳಿನ ಆರ್ಥಿಕತೆಗೆ, ಉದ್ಯೋಗಕ್ಕೆ ಸಿದ್ಧರಾಗಿದ್ದಾರೆ ಎಂದು ಖಚಿತಪಡಿಸಿಕೊಳ್ಳಲು, ಕೈಗಾರಿಕೆ ಮತ್ತು ಖಾಸಗಿ ಕ್ಷೇತ್ರಗಳು ಸೇರಿದಂತೆ ಸಕ್ರಿಯ ಭಾಗವಹಿಸುವಿಕೆಯ ಜೊತೆ, ಐಟಿ-ಬಿಟಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕೌಶಲ್ಯ ಅಭಿವೃದ್ಧಿ ಇಲಾಖೆ, ಕೆಕೆಆರ್‌ಡಿಬಿ ಸೇರಿದಂತೆ ಇತರೆ ಇಲಾಖೆಗಳು ಜಂಟಿಯಾಗಿ ಈ ಕಾರ್ಯಕ್ರಮವನ್ನು ಮುನ್ನೆಡಸಲಿವೆ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...