ಬೆಂಗಳೂರು ಗ್ರಾ. | ಮಹಿಳೆಗೆ ಲೈಂಗಿಕ ಕಿರುಕುಳ; ಬ್ರಹ್ಮಾನಂದ ಸ್ವಾಮೀಜಿ ವಿರುದ್ಧ ಎಫ್‌ಐಆರ್‌

Date:

ಮಹಿಳೆಯೊಬ್ಬರಿಗೆ ಸೈಟ್‌ ಕೊಡಿಸುವುದಾಗಿ ಭರವಸೆ ನೀಡಿ ಹಣ ಪಡೆದುಕೊಂಡು, ವಾಪಸ್‌ ಕೇಳಿದಾಗ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ಮಹರ್ಷಿ ಶ್ರೀ ವಾಲ್ಮೀಕಿ ಗುರುಕುಲ ಪೀಠದ ಸ್ವಾಮೀಜಿ ಬ್ರಹ್ಮಾನಂದ ಗುರೂಜಿ ವಿರುದ್ಧ ಪ್ರಕರಣ ದಾಖಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಮೆಳೆಕೋಟೆಯಲ್ಲಿ ಗುರುಕುಲ ಪೀಠ ನಡೆಸುತ್ತಿರುವ ಬ್ರಹ್ಮಾನಂದ ಗುರೂಪಿ ವಿರುದ್ದ ಮಹಿಳೆಯೊಬ್ಬರು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. “ನನ್ನ ಪತಿ ಸ್ವಾಮೀಜಿಯ ನಿವಾಸದ ಬಳಿಯೇ ವಾಸವಿದ್ದರು. ಆದ್ದರಿಂದ, ನಮಗೆ ಸ್ವಾಮೀಜಿ ಪರಿಚಯವಿತ್ತು. ಇದೇ ಪರಿಚಯದಲ್ಲಿ ತಮಗೆ ಪರಿಚಯ ಇರುವವರಿಂದ ಕಡಿಮೆ ಬೆಲೆಗೆ ನಿವೇಶನ ಕೊಡಿಸುತ್ತೇನೆಂದು ಸ್ವಾಮೀಜಿ ತಮ್ಮ ಬಳಿ 5 ಲಕ್ಷ ರೂ. ಹಣ ಪಡೆದುಕೊಂಡಿದ್ದರು. ಆದರೆ, ಸೈಟ್‌ ಕೊಡಿಸಿಲಿಲ್ಲ. ಹೀಗಾಗಿ, ಹಣ ವಾಪಸ್‌ ಕೇಳಿದಾಗ, ‘ಹಣ ಬೇಕೆಂದರೆ ನನ್ನ ರೂಮ್‌ಗೆ ಬಾ. ನಿಮಗೆ ಹಣ ಬೇಕು. ನನಗೆ ಮಜಾ ಬೇಕು’ ಎಂದು ಲೈಂಗಿಕ ಕುರುಕುಳ ನೀಡಿದ್ದಾರೆ” ಎಂದು ಮಹಿಳೆ ಆರೋಪಿಸಿದ್ದಾರೆ.

“13 ಲಕ್ಷ ರೂ. ಮೌಲ್ಯದ ಸೈಟ್‌ಅನ್ನು 12 ಲಕ್ಷ ರೂ.ಗಳಿಗೆ ಕೊಡಿಸುತ್ತೇನೆಂದು ಸ್ವಾಮೀಜಿ ಭರವಸೆ ನೀಡಿದ್ದರು. ಆದರೆ, ನನ್ನ ಬಳಿ ಕೇವಲ 8 ಲಕ್ಷ ರೂ. ಹಣ ಮಾತ್ರವೇ ಇದೆ ಎಂದಿದ್ದೆ. ಉಳಿದ ಹಣಕ್ಕೆ ಸಹಾಯ ಮಾಡುವುದಾಗಿ ಸ್ವಾಮೀಜಿ ಹೇಳಿದ್ದರು. 5 ಲಕ್ಷ ರೂ. ಮುಂಗಡ ಹಣವನ್ನು ಬೇರೊಬ್ಬರಿಗೆ ಕೊಡಿಸಿದ್ದರು. ಒಂದು ವರ್ಷ ಕಳೆದರೂ ಸೈಟ್‌ ಕೊಡಿಸಲಿಲ್ಲ. ಕೊಟ್ಟಿದ್ದ ಹಣವನ್ನು ವಾಪಸ್‌ ಕೇಳಿದರೂ ಕೊಟ್ಟಿಲ್ಲ” ಎಂದು ದೂರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೇಖನ ಓದಿದ್ದೀರಾ?: ಬ್ಯಾಂಕ್‌, ವಿಮಾ ಕಂಪನಿಗಳಲ್ಲಿ ಬಿದ್ದಿದೆ ಜನರ 78,000 ಕೋಟಿ ರೂ.; ಈ ಹಣ ಪಡೆಯುವುದು ಹೇಗೆ?

“ಹಣ ವಾಪಸ್‌ ಕೇಳಿದಾಗ, ‘ರೂಂಗೆ ಬಾ ಹಣ ಕೊಡಿಸುತ್ತೇನೆ. ನಿನಗೆ ಹಣ ಬೇಕು, ನನಗೆ ಮಜಾ ಬೇಕು’ ಎಂದು ಅಶ್ಲೀಲವಾಗಿ ಮಾತನಾಡಿದ್ದಾರೆ. ಫೋನ್‌ ಕರೆ, ಆಡಿಯೋ ಮೆಸೇಜ್ ಹಾಗೂ ವಿಡಿಯೋ ಕರೆಗಳ ಮೂಲಕ ನಿರಂತರವಾಗಿ ಕಿರುಕುಳ ನೀಡಿದ್ದಾರೆ. ಅವರ ಲೈಂಗಿಕ ಕಿರುಕುಳದ ಮಾತುಗಳನ್ನು ಆಡಿಯೋ ಮತ್ತು ವಿಡಿಯೋ ರೂಪದಲ್ಲಿ ಸೆರೆಹಿಡಿದ್ದಿದ್ದೇನೆ” ಎಂದು ಮಹಿಳೆ ದೂರಿನಲ್ಲಿ ವಿವರಿಸಿರುವುದಾಗಿ ವರದಿಯಾಗಿದೆ.

ಇನ್ನು, ಮಹಿಳೆ ಮತ್ತು ಆಕೆಯ ಕುಟುಂಬದ ವಿರುದ್ಧ ಆರೋಪಿ ಬ್ರಹ್ಮಾನಂದ ಸ್ವಾಮೀಜಿ ಪ್ರತಿದೂರು ದಾಖಲಿಸಿದ್ದಾರೆ. ಮಹಿಳೆ ಮತ್ತು ಕುಟುಂಬಸ್ಥರು ಹಣಕ್ಕಾಗಿ ತಮಗೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾರೆ. ಹಣ ಕೊಡದಿದ್ದರೆ, ನನ್ನ ಫೋಟೊ, ಆಡಿಯೋ, ವಿಡಿಯೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...