ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದಲ್ಲಿರುವ ನ್ಯಾಯಾಲಯದಲ್ಲಿ ಸೀಲ್‌ಗಳ ಕಳ್ಳತನ ನಡೆದ ಘಟನೆ ಬೆಳಕಿಗೆ ಬಂದಿದೆ.
ನ್ಯಾಯಾಲಯದ Copying Examiner Seal ಹಾಗೂ Round Seal ಸೇರಿದಂತೆ ಎರಡು ಮೊಹರುಗಳನ್ನು ಅಪರಿಚಿತರು ದೋಚಿಕೊಂಡು ಹೋಗಿರುವುದು ಪತ್ತೆಯಾಗಿದೆ. ಈ ಸೀಲ್‌ಗಳು ಕೋರ್ಟ್‌ನ ದಿನನಿತ್ಯದ ಪ್ರಮುಖ ಆಡಳಿತಾತ್ಮಕ ಹಾಗೂ ಕಾನೂನು ಸಂಬಂಧಿತ ಕಾರ್ಯಗಳಿಗೆ ಬಳಸಲಾಗುತ್ತಿದ್ದು, ಅವುಗಳ ಕಳ್ಳತನದಿಂದ ಅಧಿಕಾರಿಗಳು ಆತಂಕಕ್ಕೊಳಗಾಗಿದ್ದಾರೆ.
ಈ ಕುರಿತು ದೇವನಹಳ್ಳಿ ಕೋರ್ಟ್‌ನ ಹಿರಿಯ ಶಿರಸ್ತೇದಾರ್ ವಿ.ಎಸ್. ಸುದರ್ಶನ್ ಅವರ ದೂರಿನ ಮೇರೆಗೆ ದೇವನಹಳ್ಳಿ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಬೆಂಗಳೂರು | ಪಶ್ಚಿಮ ಬಂಗಾಳದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ
ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಪ್ರಾರಂಭಿಸಿದ್ದು, ಸಿಸಿಟಿವಿ ದೃಶ್ಯಾವಳಿಗಳ ವಿಶ್ಲೇಷಣೆ ಸೇರಿದಂತೆ ಕಳ್ಳರ ಸುಳಿವು ಪತ್ತೆಹಚ್ಚಲು ಕ್ರಮ ಕೈಗೊಂಡಿದ್ದಾರೆ.





