ಬೆಂಗಳೂರು | ಅವಧಿ ಮೀರಿ ಪಟಾಕಿ ಸಿಡಿಸದಂತೆ ಕ್ರಮ ಕೈಗೊಳ್ಳಲು ಸಾಮಾಜಿಕ ಕಾರ್ಯಕರ್ತೆ ಜೆನಿ ಲಿಯಾನ್ ಒತ್ತಾಯ

Date:

ದೀಪಾವಳಿ ಹಬ್ಬದ ವೇಳೆ ರಾತ್ರಿ ಹೊತ್ತು ನಿಗದಿತ ಅವಧಿ ಮೀರಿ ಪಟಾಕಿ ಸಿಡಿಸುವುದನ್ನು ನಿಯಮಾನುಸಾರ ಕಟ್ಟುನಿಟ್ಟಾಗಿ ಸಂಪೂರ್ಣ ನಿಯಂತ್ರಿಸಬೇಕು ಎಂದು ಪ್ರಾಣಿ ಕಲ್ಯಾಣ ಸಾಮಾಜಿಕ ಕಾರ್ಯಕರ್ತೆ ಜೆನಿ ಲಿಯಾನ್ ಲೋಪೆಜ್ ಒತ್ತಾಯಿಸಿದರು.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಸರಕಾರ ರಾತ್ರಿ 8 ರಿಂದ 10 ಗಂಟೆಯವರೆಗೂ ಹಸಿರು ಪಟಾಕಿಗಳನ್ನು ಸಿಡಿಸಲು ಅವಕಾಶ ನೀಡಿದೆ. ಆದರೂ ಕೆಲವು ಕಡೆಗಳಲ್ಲಿ ಯುವಜನತೆ ಸರಕಾರದ ಆದೇಶವನ್ನು ಉಲ್ಲಂಘಿಸಿ ರಸ್ತೆಗಳಲ್ಲಿ ತಡರಾತ್ರಿವರೆಗೂ ಹೆಚ್ಚು ಶಬ್ದದ ಪಟಾಕಿ ಸಿಡಿಸಿ ಮಾಲಿನ್ಯ ಉಂಟು ಮಾಡುವುದರ ಜೊತೆಗೆ ಸ್ಥಳೀಯ ನಿವಾಸಿಗಳಿಗೂ ತೊಂದರೆ ನೀಡುವ ಘಟನೆಗಳಾಗುತ್ತಿವೆ. ಈ ಬಗ್ಗೆ ಸೂಕ್ತ ಕ್ರಮವಹಿಸಬೇಕು” ಎಂದು ಮನವಿ ಮಾಡಿದರು.

ಇದನ್ನೂ ಓದಿ: ಬೆಂಗಳೂರು | ಆದ್ಯತೆ ಮೇಲೆ ರಸ್ತೆ ಕಾಮಗಾರಿ ಕೈಗೊಳ್ಳಿ: ರಾಜೇಂದ್ರ ಚೋಳನ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾತ್ರಿಯಲ್ಲಿ ಹೆಚ್ಚು ಶಬ್ದದ ಪಟಾಕಿ ಸಿಡಿಸುವುದು ಪರಿಸರ ಸಂರಕ್ಷಣಾ ಕಾಯ್ದೆ-1986 ಅಡಿ ದಂಡನೀಯ ಅಪರಾಧ. ಮುಖ್ಯವಾಗಿ ಪ್ರಾಣಿ, ಪಕ್ಷಿಗಳು, ವೃದ್ಧರು, ಮಕ್ಕಳಿಗೆ ಇದರಿಂದ ತೀವ್ರ ಆಘಾತವಾಗಲಿದೆ. ಮಾಲಿನ್ಯದಿಂದಾಗಿ ಉಸಿರಾಟ, ಅಸ್ತಮಾ, ಹೃದಯ ಸಂಬAಧಿ ಮೊದಲಾದ ಸಮಸ್ಯೆಗಳು ಕಾಣಿಸಿಕೊಳ್ಳಲಿವೆ. ಹಾಗಾಗಿ ದೀಪಾವಳಿಯನ್ನು ಪರಿಸರ ಸ್ನೇಹಿ ಬೆಳಕಿನ ಹಬ್ಬವಾಗಿ ಆಚರಿಸಬೇಕು. ಮಧ್ಯರಾತ್ರಿವರೆಗೂ ಪಟಾಕಿ ಸಿಡಿಸಿ ತೊಂದರೆ ನೀಡುವವರ ವಿರುದ್ಧ ಕ್ರಮಕ್ಕೆ ಸಹಾಯವಾಣಿ ತೆರೆದು ರಕ್ಷಣೆ ನೀಡಬೇಕು” ಎಂದು ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...