ಕನ್ನಡ ಸಾಹಿತ್ಯ ಲೋಕದಲ್ಲಿ ಹೊಸ ಸಂಚಲನ ಮೂಡಿಸುವ ಉದ್ದೇಶದಿಂದ ಸಮಾಜಮುಖಿ ಪತ್ರಿಕೆಯು ನ.8 ಮತ್ತು 9ರಂದು ಬೆಂಗಳೂರು ನಗರದ ಅರಮನೆ ರಸ್ತೆಯ ಸ್ಕೌಟ್ಸ್ ಮತ್ತು ಗೈಡ್ಸ್ ಆವರಣದಲ್ಲಿ ಸಮಾಜಮುಖಿ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ ಎಂದು ಹಿರಿಯ ಸಾಹಿತಿ ನಾಡೋಜ ಹಂಪ ನಾಗರಾಜಯ್ಯ ತಿಳಿಸಿದ್ದಾರೆ.
ಬೆಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮ್ಮೇಳನದಲ್ಲಿ ನಾಡನ ಹಿರಿಯ ಚಿಂತಕರು ಮತ್ತು ಸಾಹಿತಿಗಳು ಭಾಗವಹಿಸುವ ಮುಖ್ಯ ಗೋಷ್ಠಿಗಳು ನಡೆಯಲಿವೆ. ಇದರೊಂದಿಗೆ ನಾಲ್ಕು ಸಮಾನಾಂತರ ವೇದಿಕೆಗಳಲ್ಲಿ ವಿವಿಧ ವಿಷಯಗಳ ಕುರಿತು ಚರ್ಚೆಗಳು ಕಾರ್ಯಾಗಾರಗಳು, ವಿಷಯ ಮಂಡನೆ ಮತ್ತು ಯುವ ಬರಹಗಾರರಿಗೆ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.
ಇದನ್ನು ಓದಿದ್ದೀರಾ? ಸಾಮಾಜಿಕ ಸಮೀಕ್ಷೆ | ಧರ್ಮದ ಕಾಲಂನಲ್ಲಿ ‘ಹಿಂದೂ’ ಬೇಡ; ‘ಲಿಂಗಾಯತ’ ಎಂದು ಬರೆಸಿ: ಮಠಾಧೀಶರ ಒಕ್ಕೂಟ
ಈ ವೇದಿಕೆಗಳಲ್ಲಿ ಸೃಜನಶೀಲ, ವೈಚಾರಿಕ, ಶಾಸ್ತ್ರೀಯ, ಕನ್ನಡೇತರ ಮತ್ತು ಅಂತರಶಿಸ್ತೀಯ ವಿಷಯಗಳ ಬಗ್ಗೆ ಗಂಭೀರ ಚರ್ಚೆಗಳು ನಡೆಯಲಿವೆ. ಸಮ್ಮೇಳನದಲ್ಲಿ ಸಾಹಿತಿಗಳು, ವಿಮರ್ಶಕರು, ವಿದ್ಯಾರ್ಥಿಗಳು ಸೇರಿದಂತೆ ಸಾಹಿತ್ಯಾಸಕ್ತರು ಭಾಗಿಯಾಗಲಿದ್ದಾರೆ. ಭಾಗವಹಿಸುವ ಎಲ್ಲ ಪ್ರತಿನಿಧಿಗಳಿಗೆ ಎರಡು ದಿನಗಳ ಊಟ, ಉಪಹಾರದ ವೆಚ್ಚಕ್ಕಾಗಿ 300 ರೂ. ನೋಂದಣಿ ಶುಲ್ಕ ನಿಗದಿಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.





