ಬೆಂಗಳೂರು ಪಶ್ಚಿಮ ನಗರ ಪಾಲಿಕೆ ರಾಜರಾಜೇಶ್ವರಿ ನಗರ ವಲಯ ವ್ಯಾಪ್ತಿಯ ಸುಮನಹಳ್ಳಿ ವಿದ್ಯುತ್ ಚಿತಾಗಾರವನ್ನು ತುರ್ತು ನಿರ್ವಹಣೆ ಕೆಲಸದ ಪ್ರಯುಕ್ತ 12 ದಿನಗಳ ಕಾಲ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ ಎಂದು ಸಾರ್ವಜನಿಕ ಪ್ರಕಟಣೆ ಹೊರಡಿಸಲಾಗಿದೆ.
ಮುಂದುವರಿದು, ಸುಮ್ಮನಹಳ್ಳಿ ವಿದ್ಯುತ್ ಚಿತಾಗಾರದ ಕಾರ್ಯಗಳನ್ನು ಅ. 22 ರಿಂದ ನ. 2ರವರೆಗೆ 12 ದಿನಗಳ ಕಾಲ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ. ಈ ಚಿತಾಗಾರಕ್ಕೆ ಮೃತ ದೇಹಗಳನ್ನು ದಹನ ಕ್ರಿಯೆಗಾಗಿ ತರುವ ಸಾರ್ವಜನಿಕರು ಸಮೀಪದಲ್ಲಿರುವ ಪೀಣ್ಯ, ಮೇಡಿ ಅಗ್ರಹಾರ ಅಥವಾ ಕೆಂಗೇರಿ ವಿದ್ಯುತ್ ಚಿತಾಗಾರವನ್ನು ಉಪಯೋಗಿಸಿಕೊಳ್ಳಬಹು. ಹೆಚ್ಚಿನ ಮಾಹಿತಿಗಾಗಿ ಮೊ.ಸಂ: 9480688530 (ಕಾರ್ಯಪಾಲಕ ಅಭಿಯಂತರ ನಾಗೇಶ್) ನ್ನು ಸಂಪರ್ಕಿಸಬಹುದಾಗಿದೆ.
ಇದನ್ನೂ ಓದಿ: ಬೆಂಗಳೂರು | ಜಿಬಿಎ ವ್ಯಾಪ್ತಿಯ 16.41 ಲಕ್ಷ ಮನೆಗಳ ಸಮೀಕ್ಷೆ ಪೂರ್ಣ





