ಕೆಎಸ್‌ಆರ್‌ಟಿಸಿ ನೌಕರರ ಜೊತೆಗೆ ಆಡುತ್ತಾ ಕ್ರೀಡಾ ಸ್ಪರ್ಧೆಗೆ ಚಾಲನೆ ನೀಡಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ

Date:

ಕೆಎಸ್‌ಆರ್‌ಟಿಸಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ ಮತ್ತು ನೌಕರರಿಗಾಗಿ ಹಮ್ಮಿಕೊಂಡಿದ್ದ ಕ್ರೀಡಾ ಸ್ಪರ್ಧೆಗೆ ಶಟಲ್ ಬ್ಯಾಡ್ಮಿಂಟನ್, ಕೇರಂ, ಚೆಸ್ ಮತ್ತು ಟೇಬಲ್‌ ಟೆನ್ನಿಸ್ ಆಡುವ ಮೂಲಕ ಕ್ರೀಡಾ ಸ್ಪರ್ಧೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಚಾಲನೆ ನೀಡಿದರು. ಇದೇ ವೇಳೆ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿಜೇತರಾದ ಅಧಿಕಾರಿ, ಸಿಬ್ಬಂದಿಗಳಿಗೆ ಬಹುಮಾನ ವಿತರಿಸಿದರು.

ಬಳಿಕ ಮಾತನಾಡಿದ ಸಚಿವರು, ನಿಗಮದಲ್ಲಿ ಅಧಿಕಾರಿ, ಸಿಬ್ಬಂದಿಗಳ ಉತ್ತಮ ಆರೋಗ್ಯ, ಒತ್ತಡ ನಿವಾರಣೆ ಹಾಗೂ ಕ್ರೀಡಾ ಮನೋರಂಜನೆಗಾಗಿ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಪ್ರತಿ ವರ್ಷವು ಘಟಕ, ವಿಭಾಗ, ಪ್ರಾದೇಶಿಕ ಕಾರ್ಯಗಾರ ಮತ್ತು ಕೇಂದ್ರ ಕಛೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ ಮತ್ತು ನೌಕರರು ಹಾಗೂ ಅವರ ಮಕ್ಕಳಿಗೆ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗುತ್ತಿದೆ. ಈ ಸಂಬಂಧ ಕ್ರೀಡಾ ಮತ್ತು ಸಾಂಸ್ಕೃತಿಕ ನಿಧಿಯಿಂದ ವಿಭಾಗ/ಕಾರ್ಯಾಗಾರಗಳಿಗೆ ತಲಾ ರೂ. 40,000/- ರಂತೆ 17 ವಿಭಾಗಗಳಿಗೆ ಎರಡು ಕಾರ್ಯಾಗಾರಗಳಿಗೆ ಅನುದಾನವನ್ನು ಪ್ರತಿ ವರ್ಷ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.

WhatsApp Image 2025 11 13 at 5.31.30 PM 1 1

ಕಳೆದ ವರ್ಷವಷ್ಟೇ‌ ಶಾಂತಿನಗರ ಕ್ರೀಡಾ ಸಂಕೀರ್ಣವನ್ನು ಮೇಲ್ದರ್ಜೆಗೇರಿಸಲಾಗಿತ್ತು. ‌ನೌಕರರು ಪ್ರತಿನಿತ್ಯ ಈ ಕ್ರೀಡಾ ಸಂಕೀರ್ಣವನ್ನು ಕೆಲವೊಂದು ಆಟಗಳನ್ನು ನಿತ್ಯ ಆಡುವ ಮೂಲಕ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ. ಗೆಲುವು ಸೋಲು ಮುಖ್ಯವಲ್ಲ, ಭಾಗವಹಿಸುವಿಕೆ ಎಂಬುದು ಪ್ರಮುಖವಾದ್ದದ್ದು. ನೌಕರರು ಅತೀ ಒತ್ತಡದ ಕಾರ್ಯಶೈಲಿಯಲ್ಲಿ ಈ ರೀತಿಯ ಚಟುವಟಿಕೆ ಆಹ್ಲಾದಕರ ವಾತಾವರಣವನ್ನು ನಿರ್ಮಿಸಲು ಸಹಕಾರಿಯಾಗುತ್ತದೆ ಎಂದು ಸಚಿವರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನೌಕರರಿಗೆ ಮತ್ತು ಅಧಿಕಾರಿಗಳಿಗೆ ಚೆಸ್, ಕೇರಂ, ಶೆಟಲ್, ಟೇಬಲ್ ಟೆನ್ನಿಸ್ , ಸಂಗೀತ ಸ್ಪರ್ಧೆಗಳು, ಸಂಗೀತ ಕುರ್ಚಿ, ಗುಂಡು ಎಸೆತ, ವೇಗ ನಡಿಗೆ, ಮಡಿಕೆ‌ ಹೊಡೆಯುವ ಆಟ‌‌ ಇತ್ಯಾದಿಗಳನ್ನು ಏರ್ಪಡಿಸಲಾಗಿತ್ತು.

ಈ ಸಂದರ್ಭದಲ್ಲಿ ಕೆಎಸ್‌ಆರ್‌ಟಿಸಿಯ ವ್ಯವಸ್ಥಾಪಕ ನಿರ್ದೇಶಕರಾದ ಅಕ್ರಂ ಪಾಷ, ಸಿಬ್ಬಂದಿ & ಜಾಗೃತ ವಿಭಾಗದ ನಿರ್ದೇಶಕಿ ಡಾ. ನಂದಿನಿ ದೇವಿ, ಮಾಹಿತಿ ತಂತ್ರಜ್ಞಾನ ವಿಭಾಗದ ನಿರ್ದೇಶಕರಾದ ಇಬ್ರಾಹಿಂ ಮೈಗೂರ, ಮಂಡಳಿ ಕಾರ್ಯದರ್ಶಿ, ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ. ಲತಾ ಟಿ. ಎಸ್ ಹಾಗೂ ನಿಗಮದ ಅಧಿಕಾರಿ, ಸಿಬ್ಬಂದಿಗಳು ಹಾಜರಿದ್ದರು.

WhatsApp Image 2025 11 13 at 5.34.08 PM 1
WhatsApp Image 2025 11 13 at 5.34.32 PM
WhatsApp Image 2025 11 13 at 5.34.11 PM 1
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...