ಬೆಂಗಳೂರು | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಡೀರ್ ಭೇಟಿ: ವ್ಯವಸ್ಥೆ ಬಗ್ಗೆ ಪರಿಶೀಲನೆ

Date:

ಬೆಂಗಳೂರು ನಗರದ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ವಾಹನಗಳ ನಿಲುಗಡೆಗಾಗಿ ಮೀಸಲಿರುವ ಪ್ರದೇಶವು ಸಮತಟ್ಟಾಗಿರದೇ, ಮಳೆ ಬಂದ ಸಂದರ್ಭದಲ್ಲಿ ನೀರು ನಿಂತು ವಾಹನಗಳ ಸುಗಮ ಸಂಚಾರಕ್ಕೆ ತೊಂದರೆ ಉಂಟಾಗುತ್ತಿರುವ ಬಗ್ಗೆ‌ ಪ್ರಯಾಣಿಕರು ಗಮನಕ್ಕೆ ತಂದಿದ್ದ ಹಿನ್ನೆಲೆಯಲ್ಲಿ ಗುರುವಾರದಂದು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ದಿಡೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಸಂಚಾರಕ್ಕೆ ತೊಂದರೆ ಆಗದಂತೆ ಕೂಡಲೇ ಕಾಮಗಾರಿ ಕೈಗೆತ್ತಿಕೊಂಡು ಬಸ್ ಗಳ ಸುಗಮ ಸಂಚಾರಕ್ಕೆ ಕ್ರಮ ತೆಗೆದುಕೊಳ್ಳಲು ಸಾರಿಗೆ ಸಚಿವರು ಅಧಿಕಾರಿಗಳಿಗೆ ತಿಳಿಸಿದ್ದರು. ಈ ಸಂಬಂಧ ತೆಗೆದುಕೊಂಡಿರುವ ಕ್ರಮವನ್ನು ಪರಿಶೀಲಿಸಲು ಬಸ್ ನಿಲ್ದಾಣಕ್ಕೆ ದಿಢೀರ್ ಭೇಟಿ ನೀಡಿ ಪರಾಮರ್ಶೆ ನಡೆಸಿದರು.

ಮೊದಲನೇ ಹಂತದಲ್ಲಿ ಸದರಿ‌‌ ಕಾಮಗಾರಿಯನ್ನು ಪೂರ್ಣಗೊಳಿಸಿ, ಮುಂದಿನ‌ ಹಂತದಲ್ಲಿ ಮಳೆ ಹಾನಿಗೆ ಸಿಲುಕುವ‌‌ ಇನ್ನೆರಡು‌ ಸ್ಥಳಗಳಲ್ಲಿಯೂ ಕಾರ್ಯ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ‌ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೇ ಸಂದರ್ಭದಲ್ಲಿ ಬಸ್ ನಿಲ್ದಾಣದ ಎಲ್ಲಾ ಟರ್ಮಿನಲ್ ಗಳ ಕಾರ್ಯ ವೈಖರಿಯ ಬಗ್ಗೆ ವೀಕ್ಷಣೆ ನಡೆಸಿದರು. ಸಾರ್ವಜನಿಕ ಪ್ರಯಾಣಿಕರಿಗೆ ಸಮರ್ಪಕ ಸಾರಿಗೆ ಸೌಲಭ್ಯ ಒದಗಿಸುವುದರ ಜೊತೆಗೆ ವಾಣಿಜ್ಯ ಮಳಿಗೆಗಳು ಖಾಲಿ ಉಳಿಯದಂತೆ ಕ್ರಮ ವಹಿಸಲು ತಿಳಿಸಿದರು.

ಸಾರ್ವಜನಿಕ ಪ್ರಯಾಣಿಕರಿಗೆ ಹಾಗೂ ಚಾಲನಾ ಸಿಬ್ಬಂದಿಗಳಿಗೆ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ವಿದ್ಯುತ್ ದೀಪದ ಹಾಗೂ ಶೌಚಾಲಯದ ವ್ಯವಸ್ಥೆಯನ್ನು ಸಮರ್ಪಕವಾಗಿ ನಿರ್ವಹಿಸಲು ಸೂಚಿಸಿದರು. ಅಲ್ಲದೇ, ಬೆಂ.ಮ.ಸಾ.ಸಂಸ್ಥೆಯ ಬಸ್ ನಿಲ್ದಾಣಕ್ಕೂಭೇಟಿ ನೀಡಿ, ಕಟ್ಟಡದ ಮೇಲೆ ಬೆಳೆದಿರುವ ಗಿಡಗಳನ್ನು ತೆಗಿಸಿ, ಸ್ವಚ್ಛಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೆಎಸ್‌ಆರ್‌ಟಿಸಿಯ ಸಿಬ್ಬಂದಿ ಮತ್ತು ಜಾಗೃತಿ ನಿರ್ದೇಶಕರು, ಮಾಹಿತಿ ತಂತ್ರಜ್ಞಾನ ನಿರ್ದೇಶಕರು ಹಾಜರಿದ್ದು ಚಾಲನಾ ಸಿಬ್ಬಂದಿಗಳ ವಿಶ್ರಾಂತಿ ಗೃಹ ಹಾಗೂ ಇನ್ನಿತರೆ ವ್ಯವಸ್ಥೆಗಳ ಕುರಿತು ಪರಿವೀಕ್ಷಣೆ ನಡೆಸಿದರು. ಕೇಂದ್ರ ಕಚೇರಿಯ ಇಲಾಖಾ ಮುಖ್ಯಸ್ಥರು ಕೆಂಪೇಗೌಡ ಬಸ್ ನಿಲ್ದಾಣ ವಿಭಾಗದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳುಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...