ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬೂದಿಗೆರೆ ಗ್ರಾಮದ ಬಳಿ ಮಧ್ಯರಾತ್ರಿ ಭೀಕರ ಅಪಘಾತ ಸಂಭವಿಸಿದೆ. ಎರಡು ಸಿಮೆಂಟ್ ಲಾರಿಗಳು ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ, ಒಂದು ಲಾರಿ ಚಾಲಕನ ಕಾಲು ಮುರಿದಿದ್ದು, ಅವನ ಕಾಲು ಲಾರಿಯಲ್ಲೇ ಸಿಲುಕಿಕೊಂಡಿತು. ಸ್ಥಳೀಯರ ಸಹಾಯದಿಂದ ಚಾಲಕನನ್ನು ರಕ್ಷಿಸಿ ತಕ್ಷಣವೇ ಆಸ್ಪತ್ರೆಗೆ ರವಾನಿಸಲಾಗಿದೆ.
ಅಪಘಾತದ ಪರಿಣಾಮ ಒಂದು ಗಂಟೆಗೂ ಹೆಚ್ಚು ಕಾಲ ಏರ್ಪೋರ್ಟ್ ರಸ್ತೆಯಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಯಿತು. ಕಳೆದ ಎಂಟು ವರ್ಷಗಳಿಂದ ಕೆಂಪೇಗೌಡ ಏರ್ಪೋರ್ಟ್ ರಸ್ತೆ ಕಾಮಗಾರಿ ಪೂರ್ಣಗೊಳ್ಳದೇ ಇರುವುದರಿಂದ ಈ ಮಾರ್ಗದಲ್ಲಿ ಪ್ರತಿನಿತ್ಯ ಅಪಘಾತಗಳು ಸಂಭವಿಸುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಇದನ್ನೂ ಓದಿ: ಬೆಂಗಳೂರು | ಹೋರಾಟದ ಕರಪತ್ರ ಹಂಚುತ್ತಿದ್ದ ಕಾರ್ಮಿಕ ನಾಯಕರ ಬಂಧನ
ರಸ್ತೆ ಶೀಘ್ರ ಪೂರ್ಣಗೊಳಿಸುವಂತೆ ಸ್ಥಳೀಯರು ಹಲವಾರು ಬಾರಿ ಪ್ರತಿಭಟನೆ ನಡೆಸಿದರೂ, ಕೆಆರ್‌ಡಿಸಿಎಲ್ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ವ್ಯಕ್ತವಾಗಿದೆ. ಪರಿಣಾಮವಾಗಿ, ಪ್ರಯಾಣಿಕರ ಜೀವವೇ ಅಪಾಯದಲ್ಲಿರುವಂತ ಸ್ಥಿತಿ ಮುಂದುವರಿದಿದೆ.





