ಬೆಂಗಳೂರು | ಯುಗಾದಿ, ರಂಜಾನ್ ವಿಶೇಷ; ರಸ್ತೆಗಿಳಿಯಲಿವೆ 2000 ಕೆಎಸ್‌ಆರ್‌ಟಿಸಿ ಬಸ್‌

Date:

ಯುಗಾದಿ ಹಾಗೂ ರಂಜಾನ್‌ ಹಬ್ಬಗಳಿಗೆ ಇನ್ನೇನು ಕೆಲವೇ ದಿನಗಳು ಬಾಕಿ ಇದೆ. ಪ್ರಯುಕ್ತ ಬಸ್‌ ಪ್ರಯಾಣಿಕರ ಸಂಖ್ಯೆ ಹೆಚ್ಚಲಿರುವುದರಿಂದ ಕೆಎಸ್‌ಆರ್‌ಟಿಸಿ ಹೆಚ್ಚುವರಿಯಾಗಿ 2000 ವಿಶೇಷ ಬಸ್‌ಗಳನ್ನು ರಸ್ತೆಗಿಳಿಸಲು ತೀರ್ಮಾನಿಸಿದೆ.

ಮಾರ್ಚ್‌ 28 ರಿಂದ 30 ರವರೆಗೆ ಬೆಂಗಳೂರಿನಿಂದ ರಾಜ್ಯದ ವಿವಿಧೆಡೆಗಳಿಗೆ, ಹೊರ ರಾಜ್ಯಗಳಿಗೆ ಹಾಗೂ ಮಾರ್ಚ್‌ 31ರಂದು ರಾಜ್ಯದ ವಿವಿಧ ಭಾಗಗಳಿಂದ ಬೆಂಗಳೂರಿಗೆ ಈ ವಿಶೇಷ ಬಸ್‌ಗಳು ಕಾರ್ಯಾಚರಣೆ ಮಾಡಲಿವೆ. ಕೆಂಪೇಗೌಡ ಬಸ್‌ ನಿಲ್ದಾಣ, ಮೈಸೂರು ರಸ್ತೆ ಬಸ್‌ ನಿಲ್ದಾಣ ಹಾಗೂ ಶಾಂತಿನಗರ ಬಿಎಂಟಿಸಿ ಬಸ್‌ ನಿಲ್ದಾಣಗಳಿಂದ ವಿಶೇಷ ಬಸ್‌ಗಳು ಓಡಾಡಲಿವೆ ಎಂದು ನಿಗಮ ತಿಳಿಸಿದೆ.

ಪ್ರಯಾಣಿಕರ ಅನುಕೂಲಕ್ಕಾಗಿ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯವನ್ನೂ ಕಲ್ಪಿಸಲಾಗಿದ್ದು, ಪ್ರಯಾಣಿಕರು ಬಸ್‌ ನಿಲ್ದಾಣಗಳಿಗೆ ತೆರಳುವ ಮುನ್ನ ಪಿಕಪ್‌, ಡ್ರಾಪ್‌ ಪಾಯಿಂಟ್‌ ಸೇರಿದಂತೆ ಟಿಕೆಟ್‌ ಮೇಲೆ ನಮೂದಾಗಿರುವ ಮಾಹಿತಿಯನ್ನು ಪರಿಶೀಲಿಸಿಕೊಳ್ಳುವಂತೆ ಕೋರಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಬೆಂಗಳೂರು | ಬೆಳ್ಳಂಬೆಳಗ್ಗೆ ಭೀಕರ ಅಪಘಾತ; 2 ವರ್ಷದ ಮಗು ಸೇರಿ ಇಬ್ಬರು ಸಾವು

ಹೆಚ್ಚಿನ ಮಾಹಿತಿಗಾಗಿ ಹಾಗೂ ಮುಂಗಡ ಇ-ಟಿಕೆಟ್‌ ಕಾಯ್ದಿರಿಸಲು ನಿಗಮದ ಅಧಿಕೃತ ವೆಬ್‌ಸೈಟ್‌ www.ksrtc.karnataka.gov.inನ್ನು ಸಂಪರ್ಕಿಸಬೇಕು. ಒಮ್ಮೆಗೆ ನಾಲ್ಕು ಅಥವಾ ಹೆಚ್ಚು ಟಿಕೆಟ್‌ಗಳನ್ನು ಬುಕ್‌ ಮಾಡಿದಲ್ಲಿ ಶೇ.5 ರಷ್ಟು ರಿಯಾಯಿತಿ ಸಿಗಲಿದೆ. ಹೋಗುವ ಮತ್ತು ಬರುವ ಟಿಕೆಟ್‌ಗಳನ್ನು ಒಟ್ಟಿಗೇ ಕಾಯ್ದಿರಿಸಿದಲ್ಲಿ ವಾಪಸ್ಸಾಗುವ ದರದಲ್ಲಿ ಶೇ.10 ರಷ್ಟು ರಿಯಾಯಿತಿ ದೊರೆಯಲಿದೆ ಎಂದು ನಿಗಮದ ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...