ಬೆಂಗಳೂರು | ಮೀಸಲಾತಿ ನಿಯಮ ಉಲ್ಲಂಘನೆ; 67 ದಲಿತ ಪ್ರಾಧ್ಯಾಪಕರಿಂದ ಕುಲಪತಿಗೆ ಪತ್ರ

Date:

ಸರ್ಕಾರದ ಮೀಸಲಾತಿ ನಿಯಮವನ್ನು ಉಲ್ಲಂಘಿಸಿ ರಾಜ್ಯದ ವಿವಿಧ ವಿಶ್ವವಿದ್ಯಾನಿಲಯಗಳಿಂದ ಬೆಂಗಳೂರು ವಿಶ್ವವಿದ್ಯಾನಿಲಯಕ್ಕೆ ಪೋಸ್ಟ್ ರಹಿತವಾಗಿ ಹಲವರನ್ನು ಸೇರ್ಪಡೆ ಮಾಡಿಕೊಂಡಿರುವುದರ ವಿರುದ್ಧ 15 ದಿನಗಳೊಳಗಾಗಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬೆಂಗಳೂರು ವಿವಿಯ 67 ದಲಿತ ಪ್ರಾಧ್ಯಾಪಕರುಗಳು ಕುಲಪತಿ ಡಾ.ಜಯಕರ ಎಸ್ ಎಂ ಅವರಿಗೆ ಪತ್ರ ಬರೆದಿದ್ದಾರೆ.

ಡಾ.ಎಂ ಶಶಿಧರ್, ಪ್ರೊ. ಮುರಳೀಧರ ಬಿ ಎಲ್, ಪ್ರೊ. ಆರ್ ಲಕ್ಷ್ಮೀನಾರಾಯಣ, ಡಾ. ಲಕ್ಷ್ಮೀಶ ಟಿ ಆರ್, ಪ್ರೊ. ಡಿ ಸಿ ಮೋಹನ, ಡಾ. ಟಿ ಜಿ ಉಮೇಶ, ಡಾ. ವಾಣೀಶ್ರೀ ಕೊಪ್ಪದ, ಡಾ. ಮಂಜುನಾಥ ಎಚ್, ಡಾ. ಸುರೇಶ್ ಆರ್, ಡಾ. ಎಸ್ ನಾಗರತ್ನಮ್ಮ, ಡಾ.‌ ವೀಣಾದೇವಿ, ಡಾ. ಆರ್ ಗೀತಾ, ಡಾ. ಎಸ್ ವೈ ಸುರೇಂದ್ರ ಕುಮಾರ್, ಡಾ. ರಾಘವೇಂದ್ರ ಎಚ್ ಕೆ, ಡಾ. ಡಿ ಕೆ ಪ್ರಭಾಕರ್, ಡಾ. ರೇಣುಕಾ ಸಿ ಜಿ, ಡಾ. ಶಿವಣ್ಣ ಎಸ್, ಪ್ರೊ. ಪಿ ಸಿ ನಾಗೇಶ್, ಪ್ರೊ. ಕೃಷ್ಣಸ್ವಾಮಿ, ಡಾ. ಕೆ ರಾಮಕೃಷ್ಣಯ್ಯ, ಡಾ. ಜಿ ಕೃಷ್ಣಮೂರ್ತಿ ಸೇರಿದಂತೆ 67 ಪ್ರಾಧ್ಯಾಪಕರು ಪತ್ರದಲ್ಲಿ ಸಹಿ ಹಾಕಿದ್ದಾರೆ.

ಬೆಂಗಳೂರು ವಿಶ್ವವಿದ್ಯಾನಿಲಯದ ಶಿಕ್ಷಕರ ಪರಿಷತ್ತು ಬೇರೆ ವಿಶ್ವವಿದ್ಯಾಲಯಗಳಿಂದ ಶಿಕ್ಷಕರನ್ನು ವರ್ಗಾವಣೆ ಮಾಡಿಕೊಂಡಿರುವುದರಿಂದ ಇಲ್ಲಿ ಅನೇಕ ವರ್ಷಗಳಿಂದ ಕೆಲಸ ನಿರ್ವಹಿಸುತ್ತಿರುವ ಶಿಕ್ಷಕರಿಗೆ ಅನ್ಯಾಯವಾಗುತ್ತಿದೆ. ಪೋಸ್ಟ್ ರಹಿತವಾಗಿ ಶಿಕ್ಷಕರನ್ನು ವರ್ಗಾಯಿಸಿಕೊಂಡರೆ ಬೆಂವಿವಿಗೆ ಮುಂದಿನ ದಿನಗಳಲ್ಲಿ ನೇಮಕಾತಿಗೆ ತೊಂದರೆಯಾಗುತ್ತದೆ ಎಂದು ಮನವಿಯಲ್ಲಿ ವಿವರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವರ್ಗಾವಣೆಯಾದ ಶಿಕ್ಷಕರಲ್ಲಿ ಯಾರೊಬ್ಬರೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿಲ್ಲ. ಈವರೆಗೂ ವರ್ಗಾವಣೆಗೊಂಡ ಶಿಕ್ಷಕರನ್ನು ಯಾವ ರೋಸ್ಟರ್ ಬಿಂದುಗೆ ಸೇರಿಸಲಾಗಿದೆ ಎಂಬುದನ್ನು ವಿವಿ ನಿರ್ಧರಿಸಿರುವುದಿಲ್ಲ. ಇದು ಸರಕಾರದ ಮೀಸಲಾತಿ ನೀತಿಗೆ ವಿರುದ್ಧವಾಗಿದೆ. ಅಷ್ಟೇ ಅಲ್ಲದೇ ಬೆಂವಿವಿಯಲ್ಲಿ ಖಾಲಿಯಿರುವ 22 ಶಿಕ್ಷಕರ ಬ್ಯಾಕ್‌ಲಾಗ್ ಹುದ್ದೆಗಳನ್ನು ತುಂಬಲು ವಿವಿ ಇಲ್ಲಿಯವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು | ಬಿಬಿಎಂಪಿಯ ಅರಣ್ಯಾಧಿಕಾರಿಗಳನ್ನು ಕೂಡಲೇ ಅಮಾನತುಗೊಳಿಸಿ ಕ್ರಿಮಿನಲ್ ಮೊಕದ್ದಮೆ ಹೂಡಿ: ಆಪ್ ಆಗ್ರಹ

“ಬಹುಸಂಖ್ಯಾತ ದಲಿತರಿರುವ ವಿವಿಯಲ್ಲಿ ದಲಿತರ ಮಾನ್ಯತೆಯನ್ನು ಕುಗ್ಗಿಸಲು, ಸರ್ಕಾರದ ರೋಸ್ಟರ್ ಪದ್ಧತಿಯನ್ನು ಧಿಕ್ಕರಿಸಿ, ದಲಿತ ವಿರೋಧಿ ನೀತಿಯನ್ನು ಅನುಸರಿಸುತ್ತಿರುವ ವಿವಿಯ ಈ ಕ್ರಮವನ್ನು ಖಂಡಿಸುತ್ತೇವೆ. ಆದುದರಿಂದ ತಾವು ಈ ಕೂಡಲೇ ಉಳಿದ ಬ್ಯಾಕ್‌ಲಾಗ್ ಹುದ್ದೆಗಳನ್ನು ತುಂಬಲು ಕ್ರಮ ಕೈಗೊಂಡು, ವಿವಿಗೆ ವರ್ಗಾವಣೆಗೊಂಡ ಶಿಕ್ಷಕರ ಸೇವಾ ಹಿರಿತನ ಹಾಗೂ ವರ್ಗಾವಣೆಗೊಂಡ ಶಿಕ್ಷಕರ ರೋಸ್ಟರ್ ಅನುಪಾತವನ್ನು ನಿರ್ಧರಿಸಿ ಕೂಡಲೇ ಆದೇಶ ಹೊರಡಿಸಬೇಕು. ತಪ್ಪಿದ್ದಲ್ಲಿ ಈ ವಿಷಯವನ್ನು ಸರ್ಕಾರದ ಗಮನಕ್ಕೆ ತರಲಾಗುವುದು” ಎಂದು ಪ್ರಾಧ್ಯಾಪಕರು ಎಚ್ಚರಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...