ಬೆಂಗಳೂರು | ತಿಲಕನಗರದಲ್ಲಿ ಮಹಿಳೆ ಕೊಲೆ; ಆಟೋದಲ್ಲಿ ದೇಹ ಬಿಸಾಡಿ ಪ್ರಿಯಕರ ಪರಾರಿ

Date:

ಮಹಿಳೆಯೊಬ್ಬರನ್ನು ಕೊಲೆ ಮಾಡಿ ಮೃತದೇಹವನ್ನು ಆಟೋದಲ್ಲಿ ಬಿಸಾಡಿ ಪ್ರಿಯಕರ ಪರಾರಿಯಾಗಿರುವ ಘಟನೆ ಬೆಂಗಳೂರು ತಿಲಕನಗರದಲ್ಲಿ ಬೆಳಕಿಗೆ ಬಂದಿದೆ.

ಮೃತಳನ್ನು ಸಲ್ಮಾ (35) ಎಂದು ಗುರುತಿಸಲಾಗಿದೆ. ಇಬ್ಬರು ಆರೋಪಿಗಳಾದ ಸುಬ್ರಹ್ಮಣಿ ಮತ್ತು ಸೆಂಥಿಲ್ ಈ ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೂಲತಃ ಮದುವೆಯಾಗಿ ನಾಲ್ವರು ಮಕ್ಕಳಿದ್ದ ಸಲ್ಮಾ, ಗಂಡನ ಸಾವಿನ ಬಳಿಕ ಸುಬ್ರಹ್ಮಣಿಯೊಂದಿಗೆ ಸಂಬಂಧ ಹೊಂದಿದ್ದರು. ನಂತರ ಸೆಂಥಿಲ್ ಜೊತೆಗೂ ಸಲುಗೆಯಿಂದಿದ್ದರು. ಇತ್ತೀಚೆಗೆ ಇಬ್ಬರನ್ನೂ ಬಿಟ್ಟು ಬೇರೊಬ್ಬರ ಜೊತೆ ಸಂಬಂಧ ಬೆಳೆಸಿದ್ದಾಳೆ ಎನ್ನುವ ಅನುಮಾನದಿಂದ ಇಬ್ಬರೂ ಸೇರಿ ಕೊಲೆ ಮಾಡಿದ್ದಾರೆ ಎನ್ನಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾತ್ರಿ ವೇಳೆ ಮನೆಯಲ್ಲಿ ಗಲಾಟೆಯಾಗಿದ್ದು, ತಲೆಗೆ ಹೊಡೆದು ಸಲ್ಮಾ ಕೊಲೆಗೈದ ನಂತರ, ಮೃತದೇಹವನ್ನು ಬಟ್ಟೆಯಲ್ಲಿ ಸುತ್ತಿ ಹೆಗಲ ಮೇಲೆ ಹೊತ್ತು ಆಟೋದಲ್ಲಿ ಬಿಸಾಡಿದ್ದಾರೆ. ಮೃತದೇಹ ಪತ್ತೆಯಾದ ಸ್ಥಳದಿಂದ ಕೇವಲ 100 ಮೀಟರ್ ದೂರದಲ್ಲೇ ಕೊಲೆ ನಡೆದಿರುವುದು ಪೊಲೀಸರ ಶಂಕೆಯನ್ನು ಗಾಢಗೊಳಿಸಿದೆ.

ಇದನ್ನೂ ಓದಿ: ಬೆಂಗಳೂರು | ಹೋರಾಟದ ಕರಪತ್ರ ಹಂಚುತ್ತಿದ್ದ ಕಾರ್ಮಿಕ ನಾಯಕರ ಬಂಧನ

ಸಂಜೆ ಸುಮಾರಿಗೆ ಸ್ಥಳೀಯರು ಆಟೋದಲ್ಲಿ ಮೃತದೇಹ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದು, ತಿಲಕನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕಳುಹಿಸಲಾಗಿದೆ.

ಪೇಂಟಿಂಗ್ ಕೆಲಸ ಮಾಡುತ್ತಿದ್ದ ಸುಬ್ರಹ್ಮಣಿ ಮತ್ತು ಕೂಲಿ ಕೆಲಸಗಾರ ಸೆಂಥಿಲ್ ಇಬ್ಬರ ಪತ್ತೆಗೆ ಪೊಲೀಸರು ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...