ಬೆಂಗಳೂರು | ಮದ್ಯವ್ಯಸನಿ ಮಗನನ್ನು ಕೊಲೆ ಮಾಡಿ ಶವ ಸುಟ್ಟುಹಾಕಿದ ತಂದೆ

Date:

  • ಕೊಲೆ ಪ್ರಕರಣ ದಾಖಲಿಸಿಕೊಂಡ ದೊಡ್ಡಬೆಳವಂಗಲ ಪೊಲೀಸರು
  • ಕುಡಿಯಲು ಹಣ ನೀಡಿದಿದ್ದರೆ ತಾಯಿಯನ್ನು ಥಳಿಸುತ್ತಿದ್ದ ಮಗ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಗುರುವಾರ ರಾತ್ರಿ 58 ವರ್ಷದ ವ್ಯಕ್ತಿಯೊಬ್ಬ ತನ್ನ 29 ವರ್ಷದ ಮದ್ಯವ್ಯಸನಿ ಮಗನನ್ನು ಕೊಲೆ ಮಾಡಿ ಶವವನ್ನು ಸುಟ್ಟು ಹಾಕಿರುವ ದಾರುಣ ಘಟನೆ ನಡೆದಿದೆ.

ಕೊಲೆಯಾಗಿರುವ ವ್ಯಕ್ತಿಯನ್ನು ಆದರ್ಶ ಜೆ ಎಂದು ಗುರುತಿಸಲಾಗಿದೆ. ಆತ ವಾಣಿಗರಹಳ್ಳಿಯಲ್ಲಿ ವಾಸವಾಗಿದ್ದು, ಚಾಲಕನಾಗಿ ಕೆಲಸ ಮಾಡುತ್ತಿದ್ದ. ಅವರ ತಂದೆ ಜಯರಾಮಯ್ಯನವರೇ ಆರೋಪಿ.

ಪ್ರಕರಣದ ಹಿನ್ನೆಲೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಯರಾಮಯ್ಯ ತನ್ನ ಹೆಂಡತಿ ಸುಮಾ ಹಾಗೂ ಮಗ ಆದರ್ಶ ಜತೆಗೆ ವಾಣಿಗರಹಳ್ಳಿಯಲ್ಲಿ ವಾಸವಾಗಿದ್ದರು. ಮಗ ಚಾಲಕ ವೃತ್ತಿ ಮಾಡಿಕೊಂಡಿದ್ದ. ತಂದೆ ರೈತನಾಗಿದ್ದು, ತಾಯಿ ಅಂಗನವಾಡಿಯಲ್ಲಿ ಕೆಲಸ ಮಾಡುತ್ತಿದ್ದರು. ಮಗನಿಗೆ ವಿಪರೀತ ಕುಡಿತದ ಚಟ ಇತ್ತು. ನಿತ್ಯ ದುಡಿದ ಹಣವನ್ನೆಲ್ಲ ಆತ ಕುಡಿಯುವುದಕ್ಕೆ ಖರ್ಚು ಮಾಡುತ್ತಿದ್ದ.

ಎರಡು ವರ್ಷಗಳ ಹಿಂದೆ ಆದರ್ಶ್ ಅವರನ್ನು ಡಿ-ಅಡಿಕ್ಷನ್ ಸೆಂಟರ್‌ಗೆ ಸೇರಿಸಲಾಗಿತ್ತು. ಮನೆಗೆ ಹಿಂದಿರುಗಿದ ನಂತರ, ಆತ ಕುಡಿಯುವುದನ್ನು ಮತ್ತೆ ಮುಂದುವರೆಸಿದ್ದ. ಕುಡಿಯಲು ದುಡ್ಡು ಇಲ್ಲದ ವೇಳೆ, ತಾಯಿ ಬಳಿ ಬಂದು ದುಡ್ಡು ನೀಡುವಂತೆ ಹಿಂಸೆ ಮಾಡುತ್ತಿದ್ದ. ದುಡ್ಡು ನೀಡದಿದ್ದರೆ, ತಾಯಿ ಸುಮಾಗೆ ಮನಬಂದಂತೆ ಥಳಿಸುತ್ತಿದ್ದ. ಮಗ ನೀಡುವ ಹಿಂಸೆಯನ್ನೆಲ್ಲ ಪಾಲಕರು ಸಹಿಸಿಕೊಂಡಿದ್ದರು.

ಜೂನ್ 29 ರಂದು ಆದರ್ಶ ತನ್ನ ತಾಯಿ ಬಳಿ ಬಂದು ಮದ್ಯಪಾನ ಮಾಡಲು ಹಣ ಕೇಳಿದ್ದಾನೆ. ಅದಕ್ಕೆ ನಿರಾಕರಿಸಿದ ತಾಯಿಯನ್ನು ಮನೆಯಿಂದ ಹೊರಗೆಳೆದು ಕಲ್ಲಿನಿಂದ ಆಕೆಯ ಮೇಲೆ ಹಲ್ಲೆ ನಡೆಸಿದ್ದಾನೆ. ಸುಮಾ ಅವರ ತಲೆಗೆ ಬಲವಾದ ಗಾಯವಾಗಿತ್ತು. ಈ ವೇಳೆ, ಅವರು ಪ್ರಜ್ಞೆ ತಪ್ಪಿ ಬಿದ್ದಿದ್ದರು.

ಹಲ್ಲೆಯ ವಿಷಯ ತಿಳಿದ ಸುಮಾ ಅಳಿಯ ಮೂರ್ತಿ ಎಂಬುವವರು ಜಯರಾಮಯ್ಯನವರ ನಿವಾಸಕ್ಕೆ ಬಂದು ನೋಡಿದಾಗ ಸುಮಾ ಮನೆಯ ಹೊರಗೆ ಬಿದ್ದಿದ್ದರು. ಈ ವೇಳೆ, ಆದರ್ಶ ಆಕೆಯನ್ನು ಥಳಿಸುತ್ತಿದ್ದ. ತನ್ನ ಹಿರಿಯ ಸಹೋದರ ಮತ್ತು ಸೋದರ ಸಂಬಂಧಿ ಸಹಾಯದಿಂದ ಮೂರ್ತಿ ಮಧ್ಯಪ್ರವೇಶಿಸಿ ಹಲ್ಲೆಯನ್ನು ನಿಲ್ಲಿಸಿ, ತಕ್ಷಣವೇ ಸುಮಾ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದರು. ನಂತರ ಆಕೆಯನ್ನು ನಿಮ್ಹಾನ್ಸ್‌ಗೆ ವರ್ಗಾಯಿಸಲಾಗಿದ್ದು, ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದರು.

ಈ ಬಗ್ಗೆ ಹತಾಶರಾದ ತಂದೆ ಜಯರಾಮಯ್ಯ ಬಾರ್‌ಗೆ ಮಗನನ್ನು ಹುಡುಕಿಕೊಂಡು ಹೋಗಿ, ಅಲ್ಲಿಂದ ಆತನನ್ನು ಕರೆದುಕೊಂಡು ಮನೆಗೆ ಬಂದಿದ್ದಾರೆ. ಆರೋಪಿಗಳು ಆದರ್ಶ್‌ನ ಕೈ ಕಾಲು ಕಟ್ಟಿ ಥಳಿಸಿದ್ದಾರೆ. ನಂತರ ಮಗನನ್ನು ಸಮೀಪದ ಫಾರ್ಮ್‌ಹೌಸ್‌ಗೆ ಕರೆದುಕೊಂಡು ಹೋಗಿ, ಆತನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಜುಲೈ 15ರವರೆಗೆ ಹೆಬ್ಬಾಳ ಮೇಲ್ಸೇತುವೆ ಬಳಿ ಸಂಚಾರ ದಟ್ಟಣೆ ಬಿಸಿ

ಶುಕ್ರವಾರ ಬೆಳಗ್ಗೆ 6.15ರ ಸುಮಾರಿಗೆ ಜಯರಾಮಯ್ಯ ಅವರಿಗೆ ಸೇರಿದ ಜಮೀನಿನಲ್ಲಿ ಸುಟ್ಟು ಕರಕಲಾದ ಶವವನ್ನು ಗ್ರಾಮಸ್ಥರು ನೋಡಿದ ನಂತರ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೃತನ ಮುಖ ವಿರೂಪಗೊಂಡಿದ್ದು, ಕೈಗಳನ್ನು ಬೆನ್ನ ಹಿಂದೆ ಕಟ್ಟಿ, ಕುತ್ತಿಗೆಗೆ ಸುಟ್ಟ ಬಟ್ಟೆಯನ್ನು ಕಟ್ಟಿರುವುದು ಕಂಡುಬಂದಿದೆ. ಬಾರ್ ಬಳಿ ಆದರ್ಶ ಅವರ ಮೇಲೆ ಇನ್ನಿಬ್ಬರು ಹಲ್ಲೆ ನಡೆಸಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಬೆಂಗಳೂರು ಜಿಲ್ಲಾ ಪೊಲೀಸ್‌ ವ್ಯಾಪ್ತಿಯ ದೊಡ್ಡಬೆಳವಂಗಲ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...