ಜುಲೈ 4ರ ಸಭೆ ನಿರ್ಣಾಯಕ, ಅಲ್ಲಿಯವರೆಗೆ ಹೋರಾಟ ಮುಂದುವರಿಯಲಿದೆ- ಪ್ರಕಾಶ್‌ ರಾಜ್‌

Date:

ದೇವನಹಳ್ಳಿ ಚಲೋ ಹೋರಾಟಕ್ಕೆ ತಡೆಯೊಡ್ಡಿ ರೈತಪರ ಹೋರಾಟಗಾರರನ್ನು ಬಂಧಿಸಿದ ಬೆನ್ನಲ್ಲೇ ಗುರುವಾರ ಮಧ್ಯಾಹ್ನ ಒಂದು ಗಂಟೆಗೆ ನಟ ಪ್ರಕಾಶ್‌ ರಾಜ್‌ ನೇತೃತ್ವದ ಸಮಾನ ಮನಸ್ಕರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವರ ಮನೆಯಲ್ಲಿ ಭೇಟಿಯಾಗಿ ತಮ್ಮ ಬೇಡಿಕೆಗಳನ್ನು ಮಂಡಿಸಿತ್ತು. ಅದಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಜುಲೈ 4ರಂದು ದೇವನಹಳ್ಳಿ ರೈತರೊಂದಿಗೆ ಸಭೆ ನಡೆಸಲು ಒಪ್ಪಿದ್ದಾರೆ ಎಂದು ಸಭೆಯ ನಂತರ ಪ್ರಕಾಶ್‌ ರಾಜ್‌ ಅವರು ತಿಳಿಸಿದರು.

“ಜುಲೈ 4ರಂದು ರೈತರೊಂದಿಗೆ ಸಭೆ ನಡೆಸುವ ಭರವಸೆ ಸಿಕ್ಕಿದೆ. ಅಲ್ಲಿಯವರೆಗೆ ರೈತರ ಹೋರಾಟ ಮುಂದುವರಿಯಲಿದೆ. ಸಿ ಎಂ ಪಾಸಿಟಿವ್‌ ಆಗಿ ಪ್ರತಿಕ್ರಿಯೆ ನೀಡಿದ್ದಾರೆ. ಜುಲೈ ನಾಲ್ಕರ ನಂತರ ಏನಾಗುತ್ತದೆ ಎಂಬುದರ ಮೇಲೆ ಮುಂದಿನ ಹೋರಾಟ ನಿಂತಿದೆ“ ಎಂದರು.

“ನಿನ್ನೆ ಶಾಂತಿಯುತ ಹೋರಾಟ ನಡೆಸಿದ್ದವು. ಫೈನಲ್‌ ನೋಟಿಫಿಕೇಷನ್‌ ಆದ ನಂತರ ಸುಮ್ಮನಿರಲು ಆಗಲ್ಲ. ಸಿದ್ದರಾಮಯ್ಯ ಅವರಿಗೆ ಇದು ಗೊತ್ತಿಲ್ಲದ ವಿಚಾರ ಅಲ್ಲ, ನೋಟಿಫಿಕೇಷನ್‌ ಆಗಿದೆ ಅದನ್ನು ಡಿ ನೋಟಿಫಿಕೇಷನ್‌ ಮಾಡಬೇಕು ಎಂದು ಒತ್ತಾಯಿಸಿದೆವು. ಅವರು ಜುಲೈ ನಾಲ್ಕರಂದು ರೈತರೊಂದಿಗೆ ಸಭೆ ನಡೆಸಿ ಹೇಗೆ ಮಾಡಬಹುದು ಎಂಬ ತೀರ್ಮಾನಕ್ಕೆ ಬರುವುದಾಗಿ ತಿಳಿಸಿದ್ದಾರೆ. ನಮಗೆ ಕೇಳಿಸಿಕೊಳ್ಳುವವರು ಬೇಕಾಗಿದೆ. ಕೇಳಿಸಿಕೊಂಡಿದ್ದಾರೆ. ಅವರಿಗೆ ಇಂಡಸ್ಟ್ರಿ ಕಡೆಯಿಂದ ಏನೇನು ಸಮಸ್ಯೆ ಇದೆಯೋ ಗೊತ್ತಿಲ್ಲ. ಆದರೆ ಸರ್ಕಾರ ಜನಪರವಾಗಿರಬೇಕು“ ಪ್ರಕಾಶ್‌ ರಾಜ್‌ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೆಲವು ಹಳ್ಳಿಗಳ ಐನೂರು ಎಕರೆ ಭೂಮಿ ವಶಪಡಿಸಿಕೊಳ್ಳುವುದಿಲ್ಲ ಎಂಬ ಸಚಿವ ಎಂ ಬಿ ಪಾಟೀಲರ ಹೇಳಿಕೆಯ ಬಗ್ಗೆ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಅವರು “ರೈತರ ಒಡೆದಾಳುವ ಆಟ ಬೇಡ. ಅವರು ಸರ್ಕಾರದ ಯಾವ ಗ್ಯಾರಂಟಿಯನ್ನೂ ಕೇಳುತ್ತಿಲ್ಲ. ನಮ್ಮ ಭೂಮಿ ಬಿಟ್ಟುಬಿಡಿ ಎಂದು ಕೇಳುತ್ತಿದ್ದಾರೆ. ಸಿ ಎಂ ವಿರೋಧ ಪಕ್ಷದಲ್ಲಿದ್ದಾಗ ಪ್ರತಿಭಟನೆಯ ಸ್ಥಳಕ್ಕೆ ಬಂದಿದ್ದರು. ಅದನ್ನು ಅವರು ಮರೆತಿಲ್ಲ. ಆದರೆ ಈಗ ಫೈನಲ್‌ ನೋಟಿಫಿಕೇಷನ್ ಆಗಿಬಿಟ್ಟಿದೆ. ಈಗ ಡಿನೋಟಿಫೈ ಮಾಡಿದರೆ ವಿಪಕ್ಷಗಳು ಮುಗಿ ಬೀಳುತ್ತವೆ ಎಂದು ಸಿ ಎಂ ಸಮಜಾಯಿಷಿ ನೀಡಿದ್ದಾರೆ“ ಎಂದು ಅವರು ವಿವರಿಸಿದರು.

ನಿಯೋಗದಲ್ಲಿದ್ದ ಸಾಮಾಜಿಕ ಕಾರ್ಯಕರ್ತ ಸಿರಿಮನೆ ನಾಗರಾಜ್‌ ಮಾತನಾಡಿ, “ಆಂಧ್ರಪ್ರದೇಶ ಸರ್ಕಾರ ಕೈಗಾರಿಕೆಗಳಿಗೆ ಉಚಿತವಾಗಿ ಭೂಮಿ ಕೊಡುವುದಾಗಿ ಹೇಳಿದೆ. ಹಾಗಾಗಿ ನಮಗೆ ಕೈಗಾರಿಕೆಗಳಿಂದ ಒತ್ತಡ ಹೆಚ್ಚಿದೆ“ ಎಂದು ಸಿಎಂ ಹೇಳಿರುವುದಾಗಿ ತಿಳಿಸಿದರು.

ರೈತ ಮುಖಂಡ ವೀರಸಂಗಯ್ಯ ಮಾತನಾಡಿ, “ಮುಖ್ಯಮಂತ್ರಿಯಿಂದ ಪಾಸಿಟಿವ್‌ ರೆಸ್ಪಾನ್ಸ್‌ ಬಂದಿದೆ. ಯಾವುದೇ ಕಾರಣಕ್ಕೂ ಭೂಮಿ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ. ಜುಲೈ ನಾಲ್ಕರ ಸಭೆಯ ತೀರ್ಮಾನ ಏನಾಗುತ್ತೋ ಆಗಲಿ. ಅಲ್ಲಿಯವರೆಗೆ ನಮ್ಮ ಹೋರಾಟ ಮುಂದುವರಿಯಲಿದೆ“ ಎಂದರು.

ಭೇಟಿಗೆ ಅರ್ಧ ದಿನ ಕಾದ ನಿಯೋಗ
ಗುರುವಾರ ಬೆಳಿಗ್ಗೆ 12 ಗಂಟೆಗೆ ಸಿಎಂ ಭೇಟಿಗೆ ಪ್ರಗತಿಪರರ ನಿಯೋಗ ಹೋಗುವುದಾಗಿ ಮಾಹಿತಿ ಸಿಕ್ಕಿದ ಹಿನ್ನೆಲೆಯಲ್ಲಿ ಮಾಧ್ಯಮ ಪ್ರತಿನಿಧಿಗಳು ಸಿ ಎಂ ಮನೆ ಕಾವೇರಿ ಮುಂದೆ ಬೆಳಿಗ್ಗೆ ಹನ್ನೊಂದುವರೆಯಿಂದಲೇ ಕಾದಿದ್ದರು. ಪ್ರಕಾಶ್‌ ರಾಜ್‌ ಮತ್ತಿತರ ಮುಖಂಡರು ಕುಮಾರಕೃಪ ಗೆಸ್ಟ್‌ ಹೌಸ್‌ನಲ್ಲಿ ಸಿಎಂ ಅನುಮತಿಗೆ ಕಾದಿದ್ದರು. ಒಂದು ಗಂಟೆಯಾದರೂ ಅನುಮತಿ ಸಿಗದಿದ್ದಾಗ ಭೇಟಿಗೆ ಹೊರಟ ತಂಡವನ್ನು ಪೊಲೀಸರು ಕುಮಾರಕೃಪ ಗೇಟಿನ ಮುಂದೆ ತಡೆದು ಸ್ವಲ್ಪ ಗೊಂದಲ ಸೃಷ್ಟಿಯಾಗಿತ್ತು. ನಂತರ ಸಿ ಎಂ ಕಚೇರಿಯಿಂದ ಅನುಮತಿಯ ಫೋನ್‌ ಕರೆ ಬಂತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...