ನವದೆಹಲಿಯಲ್ಲಿ ದೇವನಹಳ್ಳಿ ರೈತ ಹೋರಾಟದ ಸದ್ದು: ಜೆಪಿಸಿ ಸಭೆಯಿಂದ ಬಿಜೆಪಿ ಸದಸ್ಯರ ಪಲಾಯನ

Date:

ದೇವನಹಳ್ಳಿ ರೈತರ ಭೂ ಸ್ವಾಧೀನ ಕುರಿತ ಭೂ ಒತ್ತುವರಿ ಪರಿಶೀಲನೆಯ ಜಂಟಿ ಸಂಸದೀಯ ಸಮಿತಿ ಸಭೆಯಿಂದ ಬಿಜೆಪಿ ಸದಸ್ಯರು ಪಲಾಯನಗೈದ ಘಟನೆ ಮಂಗಳವಾರ ನವದೆಹಲಿಯಲ್ಲಿ ನಡೆದಿದೆ.

ದೇವನಹಳ್ಳಿ ರೈತರ ಭೂ ಸ್ವಾಧೀನ ವಿಚಾರವಾಗಿ ಕಾಂಗ್ರೆಸ್ ಹೈಕಮಾಂಡ್ ಜೊತೆ ಚರ್ಚಿಸಲು ನಟ ಪ್ರಕಾಶ್ ರಾಜ್, ಹೋರಾಟಗಾರ್ತಿ ಮೇಧಾ ಪಾಟ್ಕರ್ ಸೇರಿದಂತೆ ಪ್ರಮುಖರು ದೆಹಲಿಗೆ ತೆರಳಿದ್ದರು. ಇದೇ ವೇಳೆ ಭೂ ಒತ್ತುವರಿ ಪರಿಶೀಲನೆಯ ಜಂಟಿ ಸಂಸದೀಯ ಸಮಿತಿ ಸಭೆ ಆಯೋಜಿಸಲಾಗಿತ್ತು. ಈ ಸಭೆಯಲ್ಲಿ ವಿವಿಧ ಪಕ್ಷಗಳ ಸದಸ್ಯರು ಇದ್ದರು. ದೇವನಹಳ್ಳಿ ಹೋರಾಟ ಸಭೆಯ ಪ್ರಮುಖ ಚರ್ಚಾ ವಿಷಯವಾಗಿತ್ತು.

ಆದರೆ, ಸಭೆ ಪ್ರಾರಂಭಗೊಂಡಾಗ ಸಮಿತಿಯ ಬಿಜೆಪಿ ಸದಸ್ಯರು ಪಲಾನಗೈದಿದ್ದಾರೆ. ಸಭೆ ಪ್ರಾರಂಭಗೊಳ್ಳುತ್ತಿದ್ದಂತೆ ಈಗ ಬರುತ್ತೇವೆ ಎಂದು ಎದ್ದು ಹೋದ ಬಿಜೆಪಿ ಸದಸ್ಯರು ವಾಪಸ್ ಬರದೆ ತಪ್ಪಿಸಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಪತ್ರಿಕಾ ದಿನಾಚರಣೆ: ಅತಿರೇಕ ಅಳಿಯುತ್ತದೆ, ಒಳಿತು ಉಳಿಯುತ್ತದೆ

ಜೆಪಿಸಿ ಸಭೆಯಲ್ಲಿ ದೇವನಹಳ್ಳಿ ಭೂ ಸ್ವಾಧೀನ ವಿಚಾರವಾಗಿ ಸಮಗ್ರ ಚರ್ಚೆ ನಡೆದಿದೆ.

ದೇವನಹಳ್ಳಿ ರೈತರ ಭೂ ಸ್ವಾಧೀನ ವಿರೋಧಿಸಿ ಜೂನ್‌ 26ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ‘ಭೂಮಿ ಸತ್ಯಾಗ್ರಹ’ ನಡೆಯುತ್ತಿದೆ. ಜುಲೈ 4ರಂದು ರೈತ ಮುಖಂಡರು ಮತ್ತು ಹೋರಾಟಗಾರರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸುವ ಭರವಸೆ ನೀಡಿದ್ದಾರೆ. ಅದೇ ದಿನ ಫ್ರೀಡಂ ಪಾರ್ಕ್‌ನಲ್ಲಿ ‘ಬೃಹತ್ ನಾಡ ಉಳಿಸಿ’ ಸಮಾವೇಶ ನಡೆಯಲಿದೆ.

ಜುಲೈ 4ರ ಸಭೆಯಲ್ಲಿ ಮುಖ್ಯಮಂತ್ರಿ ರೈತಪರ ನಿರ್ಧಾರ ಪ್ರಕಟಿಸಬೇಕು. ಭೂ ಸ್ವಾಧೀನ ಸಂಪೂರ್ಣ ಕೈ ಬಿಡಬೇಕು. ಅದಕ್ಕೂ ಮುನ್ನ ಜುಲೈ2 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯವನ್ನು ಪ್ರಮುಖ ಅಂಜೆಂಡವಾಗಿ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಹೋರಾಟ ನಿರತರು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...